ಬ್ರೇಕಿಂಗ್ ನ್ಯೂಸ್
02-01-26 09:32 pm HK News Desk ಕರಾವಳಿ
ಮಂಗಳೂರು, ಜ.2: ಪುತ್ತೂರಿನಲ್ಲಿ ಯುವತಿಗೆ ಮಗು ಕರುಣಿಸಿ ಮದುವೆಗೆ ನಿರಾಕರಿಸುತ್ತಿರುವ ಆರೋಪಿ ಕೃಷ್ಣ ಜೆ.ರಾವ್‌ಗೆ ಕೋರ್ಟ್‌ನಿಂದ ನೀಡಲಾಗಿರುವ ಜಾಮೀನನ್ನು ರದ್ದುಗೊಳಿಸಲು ಅರ್ಜಿ ಸಲ್ಲಿಸಲಾಗುವುದು. ಅವರೊಂದಿಗೆ ಸಂಧಾನದ ಬಾಗಿಲು ಮುಚ್ಚಿದ್ದು, ಹುಡುಗಿ ಕುಟುಂಬಕ್ಕೆ ಜಗನ್ನಿವಾಸ ರಾವ್ 50 ಲಕ್ಷ ಕೊಡುವುದಾಗಿ ಹೇಳಿದ್ದಾರೆ ಎನ್ನುವ ಮಾಹಿತಿ ಸಿಕ್ಕಿದೆ. ಹುಡುಗನನ್ನು ಮದುವೆ ಮಾಡಿಸಿ ಮನೆ ಅಳಿಯನಾಗಿಸಲಿ. ನಾವು ಹುಡುಗಿ ಪರವಾಗಿ 50 ಲಕ್ಷ ಕೊಡುತ್ತೇವೆ ಎಂದು ಹಿಂದುಳಿದ ವರ್ಗಗಳ ಆಯೋಗದ ಸದಸ್ಯೆ, ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ ಹೇಳಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದು ಮುಖಂಡರು ಎನ್ನುವವರು ಮಾನ ಮರ್ಯಾದೆ ಕಳಕೊಂಡಿದ್ದಾರೆ. ಹಿಂದುತ್ವದ ಬಗ್ಗೆ ಉಪದೇಶ ಮಾಡುವ ಕಲ್ಲಡ್ಕ ಪ್ರಭಾಕರ ಭಟ್ಟರು ಮುಂದೆ ನಿಂತು ಮದುವೆ ಮಾಡಿಸಬೇಕಿತ್ತು. ಇವರ ನಿರ್ಲಕ್ಷ್ಯ ಧೋರಣೆಯನ್ನು ವಿರೋಧಿಸಿ ಪ್ರತಿಭಟನೆ ರೂಪದಲ್ಲಿ ಮಗುವಿಗೆ ಕಲ್ಲಡ್ಕದಲ್ಲಿಯೇ ನಾಮಕರಣ ಶಾಸ್ತ್ರ ನಡೆಸುವುದಾಗಿ ಪ್ರತಿಭಾ ಕುಳಾಯಿ ಹೇಳಿದ್ದಾರೆ.
ಮಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ಶುಕ್ರವಾರ ಅನ್ಯಾಯಕ್ಕೊಳಗಾದ ಯುವತಿ, ಮಗು ಹಾಗೂ ಯುವತಿಯ ಪೋಷಕರ ಜತೆ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು. ಡಿಎನ್‌ಎ ಪರೀಕ್ಷೆಯಲ್ಲಿ ಸಂತ್ರಸ್ತೆ ಪೂಜಾಳ ಮಗುವಿನ ತಂದೆ ಕೃಷ್ಣ ಜೆ.ರಾವ್ ಎಂಬುದು ಸಾಬೀತಾದರೂ ಆತ ಈಕೆಯನ್ನು ಮದುವೆಯಾಗಲು ಒಪ್ಪುತ್ತಿಲ್ಲ. ಬದಲಾಗಿ 50 ಲಕ್ಷ ರೂ.ಗಳ ಪರಿಹಾರ ನೀಡಿ ಸಂಧಾನ ಮಾತುಕತೆಗೆ ಮುಂದಾಗಿದ್ದಾರೆ. ಇದಕ್ಕೆ ಯುವತಿಯಾಗಲಿ ಆಕೆಯ ಕುಟುಂಬವಾಗಲಿ ಒಪ್ಪುವುದಿಲ್ಲ. ಅವರಿಗೆ ಬೆಂಬಲವಾಗಿ ಸಮಾಜದ ಎಲ್ಲಾ ವರ್ಗದ ಜನರು ಜತೆಗಿದ್ದಾರೆ.
ಮದುವೆಯಾಗಿ ಮಗುವಿಗೆ ತಂದೆಯಾಗುತ್ತಾನೆಂದು ಆತನಿಗೆ ಕೋರ್ಟ್ ಜಾಮೀನು ನೀಡಿತ್ತು. ಅದೇ ವಿಶ್ವಾಸದಲ್ಲಿ ನಾವೂ ಸುಮ್ಮನಿದ್ದೆವು. ಆತನ ತಾಯಿ ನನ್ನ ಮೇಲೆ ಹಾಗೂ ಯುವತಿಯ ತಾಯಿ ಮೇಲೆ ಮಾನ ಹರಾಜು ಪ್ರಕರಣ ದಾಖಲಿಸಿದ್ದಾರೆ. ಆದರೆ ವಾಸ್ತವದಲ್ಲಿ ಇಲ್ಲಿ ಓರ್ವ ಯುವತಿ ಮತ್ತು ಆಕೆಯ ಕಟುಂಬದವರ ಮಾನ ಹರಾಜು ಹಾಕಲಾಗಿದೆ ಎಂದವರು ಹೇಳಿದರು.
ಕರಾವಳಿಯಲ್ಲಿ ಹಿಂದು ಸಂಘಟನೆ ಮುಖಂಡರು, ರಾಜಕೀಯ ನೇತಾರರು ಒಗ್ಗಟ್ಟಿನ ಬಗ್ಗೆ ಮಾತನಾಡುತ್ತಾರೆಯೇ ವಿನಾ ಸಂದಿಗ್ಧ ಸ್ಥಿತಿಯಲ್ಲಿ ಸಿಲುಕಿದವರನ್ನು ಪಾರು ಮಾಡುವ ಬಗ್ಗೆ ನೆರವಿಗೆ ಬರುತ್ತಿಲ್ಲ. ಹಾಗಾಗಿ ನಾವು ಬೇರೆ ಸಮುದಾಯದವರನ್ನೂ ಧ್ವನಿ ಎತ್ತಲು ಆಹ್ವಾನಿಸುತ್ತಿದ್ದೇವೆ. ಈ ಹಿನ್ನೆಲೆಯಲ್ಲಿ ರಾಜಕೀಯ ಹಾಗೂ ಸಂಘಟನಾತ್ಮಕವಾಗಿ ಬಿಜೆಪಿ, ಸಂಘ ಪರಿವಾರದ ಶಕ್ತಿಕೇಂದ್ರ ಆಗಿರುವ ಡಾ.ಪ್ರಭಾಕರ ಭಟ್ ಕಲ್ಲಡ್ಕ ಅವರ ಊರಿನಿಂದಲೇ ಹೋರಾಟ ಆರಂಭಿಸುತ್ತಿದ್ದೇನೆ. ಇದೇ ಕಾರಣಕ್ಕೆ ಜ.24 ರಂದು ಕಲ್ಲಡ್ಕದಲ್ಲಿ ಮಗುವಿಗೆ ನಾಮಕರಣ ಶಾಸ್ತ್ರ ನೆರವೇರಿಸುವುದಾಗಿ ಪ್ರತಿಭಾ ಕುಳಾಯಿ ಹೇಳಿದರು.
ಎಂಟು ವರ್ಷಗಳಿಂದ ಪ್ರೀತಿಸಿ ಈಗ ಯಾಕೆ ಹುಡುಗ ತಿರಸ್ಕರಿಸುತ್ತಿದ್ದಾನೆ ಎಂದು ಅರ್ಥವಾಗುತ್ತಿಲ್ಲ. ಎಂಟು ವರ್ಷಗಳಿಂದ ಪರಸ್ಪರ ಪ್ರೀತಿಸಿ ಅರ್ಥ ಮಾಡಿಕೊಂಡಿದ್ದ ಇವರಿಬ್ಬರ ಸರಸದಲ್ಲಿ ಮಗು ಜನಿಸಿದ ಬಳಿಕ ಮತ್ತೆ ಆಕೆಯನ್ನು ದೂರ ಮಾಡುವುದರಲ್ಲಿ ಅರ್ಥ ಇಲ್ಲ. ಆಕೆ ಯಾವುದೇ ಕಾರಣಕ್ಕೂ ಅಬಲೆ ಅಲ್ಲ, ಆಕೆಯೂ ನಿತ್ಯ ನೊಂದುಕೊಳ್ಳುತ್ತಿದ್ದು, ಆತ್ಮಹತ್ಯೆಗೂ ಯೋಚಿಸಿದ್ದಾಳೆ. ಅವಳ ಬದುಕಿಗೆ ನಾವೆಲ್ಲ ಬೆಂಬಲವಾಗಿ ನಿಲ್ಲುತ್ತಿದ್ದು ಮುಂದೆ ಕೋರ್ಟ್ ತೀರ್ಮಾನಕ್ಕೆ ಬದ್ಧವಾಗಿ ಮುಂದುವರಿಯುತ್ತೇವೆ ಎಂದು ಪ್ರತಿಭಾ ಕುಳಾಯಿ ಹೇಳಿದರು.
ಸಂಧಾನ ಸಂದರ್ಭದಲ್ಲಿ ಆತನ ಪೋಷಕರು ಈಡೇರಿಸಲಾಗದ ಷರತ್ತು ಇಟ್ಟಿದ್ದಾರೆ. ಮಗುವನ್ನು ಸಾಂತ್ವನ ಕೇಂದ್ರಕ್ಕೆ ಸೇರಿಸಬೇಕು. ಹಾಗಾದರೆ ಮಾತ್ರ ಪೂಜಾಳನ್ನು ಮದುವೆಯಾಗಿ ವಿಚ್ಛೇದನ ನೀಡಲಾಗುವುದು. ಅಲ್ಲದೆ, ಈ ವೇಳೆ 50 ಲಕ್ಷ ರೂ. ಪರಿಹಾರ ನೀಡಲಾಗುವುದು. ಇದಕ್ಕಾಗಿ ಮೊದಲು ಆತನ ವಿರುದ್ಧದ ಎಲ್ಲಾ ಪ್ರಕರಣವನ್ನು ವಾಪಸ್ ಪಡೆಯಬೇಕು ಎಂದೆಲ್ಲಾ ಷರತ್ತುಗಳನ್ನು ವಿಧಿಸಲಾಗಿದೆ. ನಮಗೆ ಹಣ ಬೇಡ, ಸಾಮಾಜಿಕ ನ್ಯಾಯ ಬೇಕು. ಆತ ಪೂಜಾಳನ್ನು ವಿವಾಹವಾಗಿ ಮನೆ ಅಳಿಯನಾದರೆ ನಾನೇ ಅವರಿಗೆ 50 ಲಕ್ಷ ರೂ. ಕೊಡುತ್ತೇನೆ ಎಂದು ಪ್ರತಿಭಾ ಕುಳಾಯಿ ಸವಾಲು ಹಾಕಿದರು.
ಪುತ್ತೂರಿನ ಅರುಣ್ ಕುಮಾರ್ ಪುತ್ತಿಲರ ಬಗ್ಗೆ ನನಗೆ ತುಂಬ ಗೌರವ ಇದೆ. ಅವರು ಶ್ರೀನಿವಾಸ ದೇವರಿಗೆ ಕಲ್ಯಾಣವನ್ನು ಅದ್ದೂರಿಯಾಗಿ ನೆರವೇರಿಸಿದ್ದಾರೆ. ಶ್ರೀನಿವಾಸ ದೇವರಿಗೆ ಯಾವಾಗಲೋ ಕಲ್ಯಾಣ ಆಗಿದೆ. ಈಗ ಆಗಬೇಕಾಗಿರುವುದು ಪೂಜಾಳಿಗೆ. ಅವಳಿಗೆ ಕೃಷ್ಣ ಜೆ.ರಾವ್ ಜೊತೆ ಕಲ್ಯಾಣ ಮಾಡಿಸುವ ಬಗ್ಗೆ ಪುತ್ತಿಲ ಮನಸ್ಸು ಮಾಡಲಿ ಎಂದು ನಯವಾಗಿಯೇ ಸವಾಲು ಹಾಕಿದರು.
Congress leader and Backward Classes Commission member Pratibha Kulai strongly criticised Hindu leaders in Dakshina Kannada, accusing them of abandoning moral responsibility in the Puttur paternity case.
02-01-26 10:24 pm
HK News Desk
CM Siddaramaiah, Ballari Clash, MLA Bharat Re...
02-01-26 06:09 pm
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 11:01 pm
Mangalore Correspondent
ಪಾಲಿಕೆ ವ್ಯಾಪ್ತಿಯಲ್ಲಿ ಬೇಸಿಗೆ ಮೊದಲೇ ನೀರಿನ ಸಮಸ್ಯ...
02-01-26 11:00 pm
Pratibha Kulai: ಹಿಂದು ಮುಖಂಡರು ಮರ್ಯಾದೆ ಕಳಕೊಂಡಿ...
02-01-26 09:32 pm
ಕಿಲಿಮಂಜಾರೋ ಬಳಿಕ ಮೌಂಟ್ ಕೆನ್ಯಾ ಹತ್ತಿದ 11ರ ಪೋರ ;...
02-01-26 02:02 pm
Dr Vinaya Hegde Death, NItte Mangalore: ನಿಟ್ಟ...
01-01-26 09:43 am
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm