ಬ್ರೇಕಿಂಗ್ ನ್ಯೂಸ್
31-12-20 11:21 am Mangalore Correspondent ಕರಾವಳಿ
ಮಂಗಳೂರು, ಡಿ. 31: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಹುತೇಕ ಗ್ರಾಮ ಪಂಚಾಯತಿಗಳಲ್ಲಿ ಬಿಜೆಪಿ ಬೆಂಬಲಿತರು ಅತ್ಯಧಿಕ ಸಂಖ್ಯೆಯಲ್ಲಿ ಗೆದ್ದುಕೊಂಡಿದ್ದಾರೆ. ಬುಧವಾರ ರಾತ್ರಿ ವರೆಗೂ ಮತ ಎಣಿಕೆ ನಡೆದಿದ್ದು ಮಾಹಿತಿ ಪ್ರಕಾರ 1810 ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತರು ಗೆದ್ದುಕೊಂಡರೆ, 982 ಸ್ಥಾನಗಳಲ್ಲಿ ಕಾಂಗ್ರೆಸ್ ಬೆಂಬಲಿತರು ಆಯ್ಕೆಯಾಗಿದ್ದಾರೆ. ಎಸ್ ಡಿಪಿಐ 160 ಸ್ಥಾನಗಳನ್ನು ಮತ್ತು 40 ಮಂದಿ ಪಕ್ಷೇತರರು ಗೆಲುವು ಪಡೆದಿದ್ದಾರೆ.
ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಲ್ಲಿ ಮತ್ತೆ ಬಿಜೆಪಿ ಬೆಂಬಲಿತರು ಪಾರಮ್ಯ ಕಂಡಿದ್ದಾರೆ. ಸುಳ್ಯ, ಬೆಳ್ತಂಗಡಿ, ಪುತ್ತೂರು ಹಾಗೂ ಕಡಬ ತಾಲೂಕಿನ ಬಹುತೇಕ ಭಾಗದಲ್ಲಿ ಬಿಜೆಪಿ ಬೆಂಬಲಿತರು ಅಧಿಕಾರ ಪಡೆದರೆ, ಮಂಗಳೂರು, ಬಂಟ್ವಾಳ ಮತ್ತು ಮೂಡುಬಿದ್ರೆಯಲ್ಲಿ ನೇರ ಹಣಾಹಣಿ ಏರ್ಪಟ್ಟಿದೆ. ಈ ಮೂಲಕ ನಗರ ಪ್ರದೇಶವಾದ ಈ ಮೂರು ತಾಲೂಕು ಭಾಗದಲ್ಲಿ ಹೆಚ್ಚಿನ ಕಡೆ ಕಾಂಗ್ರೆಸ್ ಬೆಂಬಲಿತರು ಅಧಿಕಾರ ಪಡೆಯುವ ಸೂಚನೆ ಲಭಿಸಿದೆ.
ಉಡುಪಿ ಜಿಲ್ಲೆಯಲ್ಲೂ ಬಿಜೆಪಿ ಬೆಂಬಲಿತರು ಅತಿ ಹೆಚ್ಚು ಸ್ಥಾನಗಳಲ್ಲಿ ಗೆಲುವು ಕಂಡಿದ್ದಾರೆ. 1100 ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತರು ಆಯ್ಕೆಯಾದರೆ, ಕಾಂಗ್ರೆಸ್ ಕೇವಲ 450 ಸ್ಥಾನಗಳನ್ನು ಗಳಿಸಿದೆ. ಎಸ್ ಡಿಪಿಐ ಬೆಂಬಲಿತರು ಎಂಟು ಸ್ಥಾನಗಳನ್ನು ಪಡೆದಿದ್ದಾರೆ. ಉಡುಪಿ ಜಿಲ್ಲೆಯಲ್ಲಿ 128 ಮಂದಿ ಅವಿರೋಧ ಆಯ್ಕೆಯಾಗಿದ್ದರು.
ಹೀಗಿದ್ದರೂ, ಪೂರ್ತಿಯಾಗಿ ಫಲಿತಾಂಶ ಇನ್ನೂ ಲಭ್ಯವಾಗಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 3131 ಸ್ಥಾನಗಳಿಗೆ ಚುನಾವಣೆ ನಡೆದಿದ್ದು 2863 ಸ್ಥಾನಗಳ ಫಲಿತಾಂಶ ಬಂದಿದೆ. ಉಡುಪಿಯಲ್ಲಿ 2385 ಸ್ಥಾನಗಳಲ್ಲಿ 1750 ಸ್ಥಾನಗಳ ಫಲಿತಾಂಶ ಮಾತ್ರ ಹೊರಬಿದ್ದಿದೆ.
Gram Panchayat Elections 2020 BJP Bags major Victory in Sullia, Belthangady, Puttur, Moodbidri and Mangalore.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
17-08-25 03:02 pm
HK News Desk
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
17-08-25 04:13 pm
Mangalore Correspondent
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
Dharmasthala, BJP MLA S.R. Vishwanath: ಸೌಜನ್ಯ...
16-08-25 09:19 pm
ಕಾವೂರು ಮೊಸರು ಕುಡಿಕೆ ಉತ್ಸವದಲ್ಲಿ ಡಿಜೆ ಬಳಕೆ ; ಸೌ...
16-08-25 08:26 pm
Dharmasthala Panchayat, RTI: 38 ವರ್ಷಗಳಲ್ಲಿ 27...
16-08-25 04:45 pm
16-08-25 10:49 pm
Mangalore Correspondent
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm