ಬ್ರೇಕಿಂಗ್ ನ್ಯೂಸ್
12-01-26 08:03 pm Mangaluru Staffer ಕರಾವಳಿ
ಉಳ್ಳಾಲ, ಜ.12: ಶಬರಿಮಲೆ ಯಾತ್ರೆ ಕೈಗೊಂಡಿದ್ದ ಅಯ್ಯಪ್ಪ ಮಾಲಾ ವ್ರತಧಾರಿಯೋರ್ವರು ಕೇರಳದ ಎರಿಮಲೆ ಬೆಟ್ಟ ಏರುತ್ತಿದ್ದಾಗ ಹೃದಯಾಘಾತಕ್ಕೆ ಬಲಿಯಾದ ಘಟನೆ ನಡೆದಿದೆ. ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು ದೇಲಂತಬೆಟ್ಟು ನಿವಾಸಿ ಉದ್ಯಮಿ ಚಂದ್ರಹಾಸ್ ಶೆಟ್ಟಿ (55) ಮೃತ ವ್ಯಕ್ತಿ.
ಚಂದ್ರಹಾಸ್ ಅವರು ಸಹಪಾಠಿ ಅಯ್ಯಪ್ಪ ಮಾಲಾ ವ್ರತಾಧಾರಿಗಳ ಜೊತೆ ಶನಿವಾರ ಅರ್ಕುಳ ತುಪ್ಪೇಕಲ್ಲಿನಿಂದ ಶಬರಿಮಲೆ ಯಾತ್ರೆ ಕೈಗೊಂಡಿದ್ದರು. ಇಂದು ಬೆಳಗ್ಗೆ ಚಂದ್ರಹಾಸ್ ಅವರು ಎರಿಮಲೆಯಿಂದ ಕಾಡಿನ ದಾರಿಯಾಗಿ ಪಂಪೆಗೆ ಪ್ರಯಾಣ ಬೆಳೆಸಿದ್ದ ವೇಳೆ ಕುಸಿದು ಬಿದ್ದು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.
ಚಂದ್ರಹಾಸ್ ಅವರ ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ತ್ವರಿತವಾಗಿ ನಡೆಸಿ ಉಳ್ಳಾಲಕ್ಕೆ ತರಲು ಸ್ಪೀಕರ್ ಯು.ಟಿ.ಖಾದರ್ ಅವರು ಕೇರಳದ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದು, ನಾಳೆ ಬೆಳಗ್ಗೆ ಪಾರ್ಥಿವ ಶರೀರ ಉಳ್ಳಾಲ ತಲುಪಲಿದೆ. ಮೃತ ಚಂದ್ರಹಾಸ್ ಅವರು ಮೂಲತಃ ಬಾಕ್ರಬೈಲ್ ನಿವಾಸಿಯಾಗಿದ್ದು, ಮಿನರಲ್ ವಾಟರ್ ಪೂರೈಕೆಯ ಉದ್ಯಮ ನಡೆಸುತ್ತಿದ್ದರು. ಕಳೆದ ಹತ್ತು ವರ್ಷದಿಂದ ಪತ್ನಿಯ ಊರು ಪಿಲಾರಿನಲ್ಲೇ ಮನೆ ನಿರ್ಮಿಸಿ ವಾಸವಾಗಿದ್ದರು. ಇತ್ತೀಚೆಗಷ್ಟೆ ಪುತ್ರಿಯ ವಿವಾಹವನ್ನು ಅದ್ಧೂರಿಯಾಗಿ ನಡೆಸಿದ್ದರು. ಇದೀಗ ಶಬರಿಮಲೆ ತೆರಳಿದ್ದ ಚಂದ್ರಹಾಸ್ ಶೆಟ್ಟಿ ಹೃದಯಾಘಾತದಿಂದ ನಿಧನರಾಗಿದ್ದು ಕುಟುಂಬಸ್ಥರನ್ನು ಆಘಾತಕ್ಕೀಡು ಮಾಡಿದೆ. ಮೃತರು ಪತ್ನಿ, ಪುತ್ರಿ, ಪುತ್ರನನ್ನ ಅಗಲಿದ್ದಾರೆ.
An Ayyappa devotee undertaking the Sabarimala pilgrimage died of a heart attack while climbing Erimala hill in Kerala on Sunday morning. The deceased has been identified as Chandrahass Shetty (55), a businessman and resident of Pilaru Delantabettu in the Someshwar municipal limits of Ullal. He was observing the Ayyappa Mala vratam and had embarked on the pilgrimage two days ago along with fellow devotees.
15-03-26 04:27 pm
HK News Staffer
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
16-03-26 12:38 pm
HK News Staffer
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾಕ್ಕೆ ;...
15-03-26 05:37 pm
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
ಅಮೆರಿಕ ವಿರುದ್ಧ ಯುದ್ಧಕ್ಕೆ ಹೌತಿಗಳು ಸಜ್ಜು ; ಹರ್ಮ...
15-03-26 04:57 pm
15-03-26 09:10 pm
Mangalurur Staffer
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am