ಗಂಡ - ಹೆಂಡತಿ ಜಗಳ ; ಪುತ್ತೂರು ಕೋರ್ಟಿನಲ್ಲಿ ಜಡ್ಜ್ ಮುಂದೆಯೇ ವಿಷ ಸೇವಿಸಿ ಆತ್ಮಹತ್ಯೆ ಯತ್ನಿಸಿದ ಪತಿ, ಗಂಭೀರ ಸ್ಥಿತಿಯಲ್ಲಿ ಮಂಗಳೂರು ಆಸ್ಪತ್ರೆಗೆ ದಾಖಲು 

22-01-26 02:55 pm       Mangalore Correspondent   ಕರಾವಳಿ

ಪತ್ನಿ ಜೊತೆಗಿನ ಕಲಹದಲ್ಲಿ ಬೇಸತ್ತು ವ್ಯಕ್ತಿಯೊಬ್ಬ ಪುತ್ತೂರಿನ ನ್ಯಾಯಾಲಯದಲ್ಲಿ ಜಡ್ಜ್ ಮುಂದೆ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದ್ದು ಜೀವನ್ಮರಣ ಸ್ಥಿತಿಯಲ್ಲಿ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾನೆ. 

ಪುತ್ತೂರು, ಜ.22 : ಪತ್ನಿ ಜೊತೆಗಿನ ಕಲಹದಲ್ಲಿ ಬೇಸತ್ತು ವ್ಯಕ್ತಿಯೊಬ್ಬ ಪುತ್ತೂರಿನ ನ್ಯಾಯಾಲಯದಲ್ಲಿ ಜಡ್ಜ್ ಮುಂದೆ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದ್ದು ಜೀವನ್ಮರಣ ಸ್ಥಿತಿಯಲ್ಲಿ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾನೆ. 

ಪುತ್ತೂರಿ ಕಾವು ಮಣಿಯಡ್ಕ ನಿವಾಸಿ ರವಿ (35) ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ರವಿ ಹಾಗೂ ಆತನ ಪತ್ನಿ ವಿದ್ಯಾಶ್ರೀ ನಡುವೆ ಜಗಳ ನಡೆದಿದ್ದು, ಎರಡು ದಿನಗಳ ಹಿಂದೆ ಪತ್ನಿಯ ಕುತ್ತಿಗೆ ಹಿಸುಕಿ ಕೊಲೆಗೆ ಯತ್ನಿಸಿದ್ದ. ಗಂಡ-ಹೆಂಡತಿ ಗಲಾಟೆ ಬಳಿಕ ಪೊಲೀಸ್ ಠಾಣೆ ಮೆಟ್ಟಿಲೇರಿತ್ತು. ಪೊಲೀಸರು ಇಬ್ಬರಿಗೂ ಬುದ್ಧಿ ಮಾತು ಹೇಳಿ ಕಳುಹಿಸಿದ್ದರು. ಮಹಿಳೆ ಮೇಲೆ ಕೈಮಾಡಿದರೆ ಕೇಸು ದಾಖಲಿಸುವುದಾಗಿ ಸಂಪ್ಯ ಪೊಲೀಸರು ಎಚ್ಚರಿಕೆ ನೀಡಿದ್ದರು. ಆದರೆ ಪೊಲೀಸರ ಮಾತು ಕೇಳದೆ ವಿಚ್ಛೇದನದ ಮಾತುಗಳನ್ನಾಡಿದ್ದರು. ಇದರಂತೆ, ರವಿಗೆ ಇಂದು ಸಂಪ್ಯ ಠಾಣೆಗೆ ಬರುವಂತೆ ಪೊಲೀಸರು ತಿಳಿಸಿದ್ದರು.

ಈ ನಡುವೆ, ರವಿ ನೇರವಾಗಿ ಪುತ್ತೂರು ನ್ಯಾಯಾಲಯದ ಆವರಣಕ್ಕೆ ಬಂದು ಜಡ್ಜ್ ಹಾಲ್ ನಲ್ಲಿಯೇ ವಿಷ ಸೇವನೆ ಮಾಡಿದ್ದಾನೆ. ವಿಷ ಸೇವನೆ ಬಳಿಕ ನ್ಯಾಯಾಲಯದಲ್ಲಿಯೇ ವಾಂತಿ ಮಾಡಿದ್ದಾನೆ. ತಕ್ಷಣ ಅಲ್ಲಿನ ಸಿಬಂದಿ ವ್ಯಕ್ತಿಯನ್ನ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಗೇರು ತೋಟಕ್ಕೆ ಸಿಂಪಡಿಸುವ ಕೀಟನಾಶಕವನ್ನ ರವಿ ಸೇವಿಸಿದ್ದಾರೆ ಎನ್ನಲಾಗಿದೆ. ಸ್ಥಿತಿ ಗಂಭೀರವಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿನಿಂದ ಮಂಗಳೂರು ಆಸ್ಪತ್ರೆಗೆ ಒಯ್ಯಲಾಗಿದೆ.

A 35-year-old man allegedly attempted suicide by consuming poison inside the Puttur court premises, reportedly in front of a judge, following ongoing marital disputes with his wife. He was initially rushed to Puttur Government Hospital and later shifted to a hospital in Mangaluru as his condition turned critical.