ಪ್ರವಾಸಿಗರನ್ನು ವಿಹಾರಕ್ಕೆ ಒಯ್ಯುತ್ತಿದ್ದ ದೋಣಿ ಸಮುದ್ರದಲ್ಲಿ ಪಲ್ಟಿ ; ಕೋಡಿಬೆಂಗ್ರೆ ಬೀಚ್ ನಲ್ಲಿ ದುರಂತ, ಮೈಸೂರು ಮೂಲದ ಇಬ್ಬರು ಟೆಕ್ಕಿಗಳು ಸಾವು 

26-01-26 05:05 pm       HK News Desk   ಕರಾವಳಿ

ಪ್ರವಾಸಿಗರನ್ನು ವಿಹಾರಕ್ಕೆ ಕೊಂಡೊಯ್ಯುತ್ತಿದ್ದ ದೋಣಿಯೊಂದು ಪಲ್ಟಿಯಾಗಿದ್ದು ದೋಣಿಯಲ್ಲಿದ್ದ ಮೈಸೂರು ಮೂಲದ ಇಬ್ಬರು ಪ್ರವಾಸಿಗರು ಸಾವನಪ್ಪಿದ ಘಟನೆ ಕುಂದಾಪುರ ಕೋಡಿಬೆಂಗ್ರೆ ಬೀಚ್ ಸಮೀಪ ಇಂದು ಮಧ್ಯಾಹ್ನ ಸಂಭವಿಸಿದೆ

ಉಡುಪಿ, ಜ.26: ಪ್ರವಾಸಿಗರನ್ನು ವಿಹಾರಕ್ಕೆ ಕೊಂಡೊಯ್ಯುತ್ತಿದ್ದ ದೋಣಿಯೊಂದು ಪಲ್ಟಿಯಾಗಿದ್ದು ದೋಣಿಯಲ್ಲಿದ್ದ ಮೈಸೂರು ಮೂಲದ ಇಬ್ಬರು ಪ್ರವಾಸಿಗರು ಸಾವನಪ್ಪಿದ ಘಟನೆ ಕುಂದಾಪುರ ಕೋಡಿಬೆಂಗ್ರೆ ಬೀಚ್ ಸಮೀಪ ಇಂದು ಮಧ್ಯಾಹ್ನ ಸಂಭವಿಸಿದೆ. 

ಮೈಸೂರು ಮೂಲದ ಶಂಕರಪ್ಪ (22) ಮತ್ತು ಸಿಂಧು (23) ಮೃತರು. ದಿಶಾ (26) ಎಂಬ ಮಹಿಳೆಯ ಸ್ಥಿತಿ ತೀರಾ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ಧರ್ಮರಾಜ (26) ಎಂಬವರು ಪ್ರಾಣಾಪಾಯದಿಂದ ಪಾರಾಗಿದ್ದು, ಚೇತರಿಸುತ್ತಿದ್ದಾರೆ. ಇವರು ಮೈಸೂರು ಜಿಲ್ಲೆಯ ಸರಸ್ವತೀಪುರಂ ಮೂಲದವರಾಗಿದ್ದು, ಅಲ್ಲಿನ ಕಾಲ್ ಸೆಂಟರ್‌ನಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

14 ಮಂದಿಯ ತಂಡ ಉಡುಪಿಗೆ ಪ್ರವಾಸಕ್ಕೆ ಬಂದಿದ್ದು, ಇವರು ಕೋಡಿಬೆಂಗ್ರೆ ಡೆಲ್ಟಾ ಬೀಚ್‌ನಿಂದ ಪ್ರವಾಸಿ ದೋಣಿ ಮೂಲಕ ಸಮುದ್ರದಲ್ಲಿ ವಿಹಾರಕ್ಕೆ ಹೊರಟಿದ್ದರು. ಮಧ್ಯಾಹ್ನ 12 ಗಂಟೆ ಸುಮಾರಿಗೆ ಹಂಗಾರಕಟ್ಟೆ ಶಿಪ್ ಬಿಲ್ಡಿಂಗ್ ಪ್ರದೇಶದ ಸಮೀಪ ನದಿ -ಸಮುದ್ರ ಸೇರುವ ಸ್ಥಳದಲ್ಲಿ ದೋಣಿ ಆಕಸ್ಮಿಕವಾಗಿ ಪಲ್ಟಿಯಾಯಿತು. ದೋಣಿಯಲ್ಲಿದ್ದ 14 ಮಂದಿ ಸಮುದ್ರದ ನೀರಿಗೆ ಬಿದ್ದಿದ್ದು ಇವರಲ್ಲಿ ಕೆಲವರು ಮಾತ್ರ ಲೈಫ್‌ ಜಾಕೆಟ್ ಧರಿಸಿದ್ದರೆನ್ನಲಾಗಿದೆ. ಕೂಡಲೇ ಇತರ ದೋಣಿಯವರು ನೀರಿಗೆ ಬಿದ್ದವರನ್ನು ರಕ್ಷಿಸಿ ತೀರಕ್ಕೆ ಕರೆದುಕೊಂಡು ಬಂದಿದ್ದು, ಇವರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿತ್ತು. ಕೂಡಲೇ ಇವರನ್ನು ಉಡುಪಿ ಆಸ್ಪತ್ರೆಗೆ ದಾಖಲಿಸಿದ್ದು, ಇಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

A tourist boat carrying visitors on a leisure trip capsized in the sea near Kodibengre Beach in Kundapura taluk on Sunday afternoon, resulting in the death of two tourists from Mysuru.The deceased have been identified as Shankarappa (22) and Sindhu (23), both natives of Mysuru. Another tourist, Disha (26), is in critical condition, while Dharmaraj (26) narrowly escaped death and is undergoing treatment. All of them were residents of Saraswathipuram in Mysuru district and were reportedly working at a call centre.