ಬ್ರೇಕಿಂಗ್ ನ್ಯೂಸ್
09-02-26 02:50 pm Mangalore Correspondent ಕರಾವಳಿ
ಮಂಗಳೂರು, ಫೆ.9 : ನಗರದ ಕೆ.ಪಿ.ಟಿ ಜಂಕ್ಷನ್ ಬಳಿಯ ಎಸ್ ಕೆಎಸ್ ಅಪಾರ್ಟ್ಮೆಂಟ್ ಮುಂದಿನ ರಾಷ್ಟ್ರೀಯ ಹೆದ್ದಾರಿ 66ರ ಡಿವೈಡರ್ ಮುಚ್ಚುವ ಕಾರ್ಯಕ್ಕೆ ಅಡ್ಡಿಪಡಿಸಿ, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಐವರ ವಿರುದ್ಧ ಮಂಗಳೂರು ಪೂರ್ವ (ಕದ್ರಿ) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೆ.ಪಿ.ಟಿ ಮತ್ತು ಕುಂಟಿಕಾನ ನಡುವಿನ ಹೆದ್ದಾರಿ ತಿರುವಿನಲ್ಲಿ ಸರಣಿ ಅಪಘಾತಗಳು ಸಂಭವಿಸುತ್ತಿದ್ದು, ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಅಲ್ಲಿನ ಡಿವೈಡರ್ ಮುಚ್ಚಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತೀರ್ಮಾನಿಸಿತ್ತು. ಇದರಂತೆ, ಫೆಬ್ರವರಿ 3ರಂದು ಮುಗ್ರೋಡಿ ಕನ್ಸ್ಟ್ರಕ್ಷನ್ ಕಂಪನಿ ಮೂಲಕ ಕಾಮಗಾರಿ ಆರಂಭಿಸಲಾಗಿತ್ತು.



ಮರುದಿನ ಫೆಬ್ರವರಿ 4ರಂದು ರಾತ್ರಿ 9:30ರ ಸುಮಾರಿಗೆ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಜಾವೇದ್ ಅಜ್ಮಿ ಸ್ಥಳದಲ್ಲಿದ್ದು ಡಿವೈಡರ್ ಮುಚ್ಚುವ ಕಾಮಗಾರಿ ನಡೆಸಲು ಮಾರ್ಗದರ್ಶನ ನೀಡುತ್ತಿದ್ದರು. ಈ ಸಂದರ್ಭದಲ್ಲಿ ಪ್ರಮೋದ್ ಬಲ್ಲಾಲ್ಬಾಗ್, ಉಮೇಶ್ ಶೆಟ್ಟಿ, ಪ್ರವೀಣ್ ಕುಮಾರ್, ಸಂತೋಷ್ ಕುಮಾರ್ ಬಾರೆಬೈಲು ಮತ್ತು ಇತರರು ಅಕ್ರಮ ಕೂಟ ರಚಿಸಿಕೊಂಡು ಸ್ಥಳದಲ್ಲಿ ಸೇರಿದ್ದು ಕೆಲಸ ನಿಲ್ಲಿಸುವಂತೆ ಒತ್ತಾಯಿಸಿದ್ದಾರೆ. ಅಲ್ಲದೆ, ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ ನಿಂದಿಸಿದ್ದಾರೆ. ಈ ಬಗ್ಗೆ ಯೋಜನಾ ನಿರ್ದೇಶಕರ ದೂರಿನಂತೆ ಕದ್ರಿ ಠಾಣೆಯಲ್ಲಿ ಕೇಸು ದಾಖಲಾಗಿದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 66, 73, 169 ಮತ್ತು 75ರ ದುರಸ್ತಿ ಹಾಗೂ ಮಾರ್ಪಾಡು ಮಾಡುವ ಬಗ್ಗೆ ನಿರ್ಧರಿಸಲು ಕಾನೂನುಬದ್ಧ ಅಧಿಕಾರ ಎನ್ಎಚ್ಎಐ ಪ್ರಾಧಿಕಾರಕ್ಕಿದೆ. ಸದ್ಯಕ್ಕೆ ತಲಪಾಡಿಯಿಂದ ಮುಲ್ಕಿ ವರೆಗಿನ ಎನ್ಎಚ್ 66ರಲ್ಲಿ ಅಲ್ಲಲ್ಲಿ ಹಾಕಿರುವ 64 ಡಿವೈಡರ್ ಮುಚ್ಚಲು ಸ್ಥಳ ಗುರುತಿಸಲಾಗಿದೆ. ಹೆದ್ದಾರಿಗೆ ಪೂರ್ತಿ ಡಾಮರು ಆಗಿರುವುದರಿಂದ ವಾಹನಗಳು ಅತಿ ವೇಗದಲ್ಲಿ ಸಂಚರಿಸುತ್ತಿದ್ದು ಅಲ್ಲಲ್ಲಿ ಡಿವೈಡರ್ ಹಾಕುವುದು ಅಪಘಾತಕ್ಕೆ ಕಾರಣವಾಗುತ್ತದೆ ಎಂಬ ನೆಲೆಯಲ್ಲಿ ಪೊಲೀಸ್ ಇಲಾಖೆ ಶಿಫಾರಸು ಅಧರಿಸಿ ಹೆದ್ದಾರಿ ಪ್ರಾಧಿಕಾರ ಡಿವೈಡರ್ ವಿರುದ್ಧ ನಿರ್ಧಾರ ಕೈಗೊಂಡಿದೆ.
A case has been registered at Mangaluru East (Kadri) Police Station against five individuals for allegedly obstructing government officials and halting work related to the closure of a highway divider near KPT Junction on NH-66. The National Highways Authority of India (NHAI) had initiated the closure following repeated accidents at the stretch between KPT and Kuntikana.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am