ಬ್ರೇಕಿಂಗ್ ನ್ಯೂಸ್
14-02-26 07:16 pm Mangaluru Staffer ಕರಾವಳಿ
ಮಂಗಳೂರು, ಫೆ.14: ಮಂಗಳೂರು ನಗರದ ಪಂಪ್‌ವೆಲ್ ಸರ್ಕಲ್‌ನಿಂದ ಕರಾವಳಿ ಜಂಕ್ಷನ್ ವರೆಗಿನ ಚತುಷ್ಪಥ ರಸ್ತೆಯ ಅಭಿವೃದ್ದಿ ಕಾಮಗಾರಿಗಳು ಲೋಕೋಪಯೋಗಿ ಇಲಾಖೆ ವತಿಯಿಂದ ಫೆ.15 ರಿಂದ ಜೂನ್ 15ರ ವರೆಗೆ ನಾಲ್ಕು ತಿಂಗಳ ಕಾಲ ನಡೆಯಲಿದ್ದು ಈ ಅವಧಿಯಲ್ಲಿ ವಾಹನ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ.
ಸಾರ್ವಜನಿಕ ಹಿತದೃಷ್ಟಿಯಿಂದ ಪಂಪುವೆಲ್ ವೃತ್ತದಿಂದ ಕಂಕನಾಡಿ ಹಳೆ ರಸ್ತೆ - ಕಂಕನಾಡಿ ಜಂಕ್ಷನ್‌ಗೆ (ಮಂಗಳೂರು ನಗರಕ್ಕೆ ಒಳಬರುವ ರಸ್ತೆ) ಮತ್ತು ಕರಾವಳಿ ಜಂಕ್ಷನ್‌ನಿಂದ ಪಂಪುವೆಲ್ ವೃತ್ತದ ವರೆಗಿನ (ಮಂಗಳೂರು ನಗರದಿಂದ ಹೊರ ಹೋಗುವ ರಸ್ತೆ) ಬೈಪಾಸ್ ರಸ್ತೆಗಳನ್ನು ತಾತ್ಕಾಲಿಕವಾಗಿ ಏಕಮುಖ ರಸ್ತೆಗಳನ್ನಾಗಿ ಮಾರ್ಪಾಡು ಮಾಡಲಾಗಿದೆ. ಸದ್ರಿ ರಸ್ತೆಯಲ್ಲಿ ವಾಹನ ದಟ್ಟನೆ ಉಂಟಾಗುವ ಕಾರಣ ಸಾರ್ವಜನಿಕರು ಈ ಕೆಳಗಿನ ರಸ್ತೆಯನ್ನು ಉಪಯೋಗಿಸಲು ಸೂಚಿಸಲಾಗಿದೆ.
ಪಂಪ್‌ವೆಲ್ ಜಂಕ್ಷನ್ ನಿಂದ ಕರಾವಳಿ ಜಂಕ್ಷನ್‌ಗೆ ಹೋಗುವ ವಾಹನಗಳನ್ನು ನಿರ್ಬಂಧಿಸಿ, ಕಂಕನಾಡಿ ಹಳೇ ರಸ್ತೆ ಮೂಲಕ ಸಂಚರಿಸಲು ಅನುವು ಮಾಡಲಾಗಿದೆ. ತಲಪಾಡಿ, ತೊಕ್ಕೊಟ್ಟು ಕಡೆಯಿಂದ ಮಂಗಳೂರು ನಗರಕ್ಕೆ ಪ್ರವೇಶಿಸುವ ಎಲ್ಲಾ ವಾಹನಗಳು ಪರ್ಯಾಯ ರಸ್ತೆಯಾದ ಮಹಾಕಾಳಿಪಡ್ಪು, ಮೋರ್ಗನ್ಸ್ ಗೇಟ್, ಕೋಟಿಚೆನ್ನಯ ಸರ್ಕಲ್ ಅಥವಾ ಮಂಗಳಾದೇವಿ ಮುಖಾಂತರ ಸಂಚರಿಸುವುದು.

ಬಿ.ಸಿ ರೋಡ್ ಕಡೆಯಿಂದ ಬರುವಂತಹ ಭಾರೀ ವಾಹನಗಳು, ಇತರೆ ವಾಹನಗಳು ಮತ್ತು ಲಾಲ್‌ಬಾಗ್ ಬಸ್ಸು ನಿಲ್ದಾಣಕ್ಕೆ ತೆರಳುವ KSRTC ಬಸ್ಸುಗಳು ಪಡೀಲ್ ಜಂಕ್ಷನ್‌ನಿಂದ ನಂತೂರು ಕಡೆಗೆ ಹಾಗೂ ಕೇರಳ-ಕಾಸರಗೋಡು ಕಡೆಯಿಂದ ಕರಾವಳಿ ಜಂಕ್ಷನ್ ಕಡೆಗೆ ಬರುವ ಭಾರಿ ವಾಹನಗಳು ಮತ್ತು KSRTC ಬಸ್ಸುಗಳು ಪಂಪ್‌ವೆಲ್ ಜಂಕ್ಷನ್ ನಿಂದ ನಂತೂರು ಕಡೆಗೆ ಸಂಚರಿಸುವುದು.
ಮಂಗಳೂರು ನಗರದ ಒಳಭಾಗದಿಂದ ಕರಾವಳಿ ಜಂಕ್ಷನ್ ಕಡೆಯಿಂದ ಪಂಪುವೆಲ್ ಕಡೆಗೆ ಸಂಚರಿಸುವ ವಾಹನಗಳು ಯಥವಾತ್ತಾಗಿ ಸಂಚರಿಸುವುದು.
ಕಂಕನಾಡಿ ಜಂಕ್ಷನ್-ಪಂಪುವೆಲ್ ರಸ್ತೆ(ಕಂಕನಾಡಿ ಓಲ್ಡ್ ರಸ್ತೆ), ಕರಾವಳಿ-ಕಂಕನಾಡಿ ರಸ್ತೆ, ಕಂಕನಾಡಿ-ಫಳ್ನೀರ್ ಹೈಲ್ಯಾಂಡ್ ಆಸ್ಪತ್ರೆ ರಸ್ತೆ, ಕರಾವಳಿ-ಬಲ್ಮಠ ರಸ್ತೆ ಹಾಗೂ ಕಂಕನಾಡಿ ಬೈಪಾಸ್ ರಸ್ತೆಯ ಎರಡೂ ಕಡೆಗಳಲ್ಲಿ ವಾಹನ ನಿಲುಗಡೆ ಮಾಡುವಂತಿಲ್ಲ.
ಸದರಿ ಕಾಮಗಾರಿ ಮತ್ತು ಮಾರ್ಗ ಬದಲಾವಣೆ ಸಮಯ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗುವ ಸಾದ್ಯತೆಗಳು ಇರುವುದರಿಂದ ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಲು ವಿನಂತಿಸಲಾಗಿದೆ.
The four-lane road stretch from Pumpwell Circle to Karavali Junction in Mangaluru city will undergo concrete development works from February 15 to June 15, lasting four months. The project is being undertaken by the Public Works Department (PWD). During this period, significant traffic diversions and restrictions will be in place.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
03-04-26 11:00 pm
HK News Staffer
ಜಿಮ್ ಸೆಂಟರ್ ನೆಪದಲ್ಲಿ ಲವ್ ಜಿಹಾದ್! ಜಿಮ್ ಟ್ರೈ...
03-04-26 10:53 pm
ಮೆಲ್ಕಾರ್ ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ;...
01-04-26 02:54 pm
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am