ಬ್ರೇಕಿಂಗ್ ನ್ಯೂಸ್
16-02-26 09:33 am Mangaluru Staffer ಕರಾವಳಿ
ಉಳ್ಳಾಲ, ಫೆ.16: ಖಾಸಗಿ ಶಾಲಾ ಬಸ್ಸಿನ ಹಿಂಬದಿಗೆ ಮೀನು ಸಾಗಾಟದ ಕ್ಯಾಂಟರ್ ಒಂದು ಬಲವಾಗಿ ಢಿಕ್ಕಿ ಹೊಡೆದ ಘಟನೆ ರಾ.ಹೆ.66 ರ ಕಾಪಿಕಾಡು ಎಂಬಲ್ಲಿ ಇಂದು ಬೆಳಗ್ಗೆ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಏಳು ಮಂದಿ ವಿದ್ಯಾರ್ಥಿಗಳು ಸಣ್ಣ ಪುಟ್ಟ ಗಾಯಗಳೊಂದಿಗೆ ಪವಾಡ ಸದೃಶರಾಗಿ ಅಪಾಯದಿಂದ ಪಾರಾಗಿದ್ದಾರೆ.
ತಲಪಾಡಿಯ ಶಾರದಾ ನಿಕೇತನ ಪಬ್ಲಿಕ್ ಸ್ಕೂಲ್ & ಕಾಲೇಜಿಗೆ ಸೇರಿದ ಬಸ್ಸು ಇಂದು ಬೆಳಗ್ಗೆ ಕಾಪಿಕಾಡಿನ ಹೆದ್ದಾರಿ ಅಂಚಿನಲ್ಲಿ ವಿದ್ಯಾರ್ಥಿಗಳನ್ನ ಬಸ್ಸಿಗೆ ಹತ್ತಿಸಿ ತಲಪಾಡಿ ಕಡೆಗೆ ತೆರಳುತ್ತಿದ್ದಾಗ ಹಿಂದಿನಿಂದ ಧಾವಿಸಿ ಬಂದ ಮೀನಿನ ಕ್ಯಾಂಟರ್ ಬಲವಾಗಿ ಢಿಕ್ಕಿ ಹೊಡೆದಿದೆ. ಕ್ಯಾಂಟರ್ ಢಿಕ್ಕಿಯ ರಭಸಕ್ಕೆ ಶಾಲಾ ಬಸ್ಸಿನ ಹಿಂಭಾಗದ ಸೀಟುಗಳೇ ಕಿತ್ತು ಹೋಗಿವೆ.






ಗೋವಾದಿಂದ ಕೇರಳದ ಕಡೆಗೆ ಕ್ಯಾಂಟರ್ ನಲ್ಲಿ ಮೀನು ಸಾಗಿಸುತ್ತಿದ್ದ ಕುಂದಾಪುರ ಮೂಲದ ಚಾಲಕ ಸಂಜೀವ ಎಂಬವರು ನಿದ್ರೆಯ ಮಂಪರಿನಲ್ಲಿದ್ದ ಪರಿಣಾಮ ಅಪಘಾತ ನಡೆದಿರುವುದಾಗಿ ತಿಳಿದು ಬಂದಿದೆ.
ಘಟನೆಯಿಂದ ಬಸ್ಸಿನೊಳಗಿದ್ದ ನಾಲ್ಕು ವಿದ್ಯಾರ್ಥಿಗಳು ಹಾಗೂ ಮೂರು ವಿದ್ಯಾರ್ಥಿನಿಯರು ಗಾಯಗೊಂಡಿದ್ದಾರೆ. ವಿದ್ಯಾರ್ಥಿಗಳಿಗೆ ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ್ದು ಚೇತರಿಸಿಕೊಂಡಿದ್ದಾರೆ. ಮತ್ತೋರ್ವ ವಿದ್ಯಾರ್ಥಿಯ ಕಾಲಿಗೆ ಗಂಭೀರ ಗಾಯವಾಗಿದ್ದು ಆತನನ್ನ ದೇರಳಕಟ್ಟೆಯ ಕೆ.ಎಸ್ ಹೆಗ್ಡೆ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.
ಪರೀಕ್ಷೆ ನಡೆಯುತ್ತಿದ್ದುದರಿಂದ ಬಸ್ಸಿನಲ್ಲಿ 24 ರಷ್ಟು ವಿದ್ಯಾರ್ಥಿಗಳಿದ್ದರು. ಘಟನೆಯಿಂದ ಕ್ಯಾಂಟರ್ ಚಾಲಕ ಸಂಜೀವ ಎಂಬವರು ಸಣ್ಣ ಪುಟ್ಟ ಗಾಯಗೊಂಡಿದ್ದು ತೊಕ್ಕೊಟ್ಟಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಅಪಘಾತದ ಸುದ್ದಿ ತಿಳಿದು ವಿದ್ಯಾರ್ಥಿಗಳ ಪೋಷಕರು ಗಾಬರಿಗೊಂಡು ಆಸ್ಪತ್ರೆಯಲ್ಲಿ ಜಮಾಯಿಸಿದ್ದರು. ಸ್ಥಳಕ್ಕೆ ಧಾವಿಸಿದ ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಘಟನೆಯ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.
ಸರ್ವಿಸ್ ರಸ್ತೆ ಇಲ್ಲದೆ ನಿತ್ಯ ಅವಾಂತರ
ನಂತೂರು - ತಲಪಾಡಿ ಹೆದ್ದಾರಿ ಅಗಲೀಕರಣಗೊಂಡು ದಶಕ ಕಳೆದರೂ ಈ ಹೆದ್ದಾರಿಯಲ್ಲಿ ಸಮರ್ಪಕ ಸರ್ವಿಸ್ ರಸ್ತೆಗಳೇ ಇಲ್ಲದೆ ಶಾಲಾ ವಾಹನಗಳು, ಖಾಸಗಿ ಬಸ್ಸುಗಳು ಮುಖ್ಯ ಹೆದ್ದಾರಿ ಅಂಚಿನಲ್ಲೇ ನಿಲ್ಲಿಸಿ ಜನರನ್ನ ಪಿಕ್ ಅಪ್ ಮಾಡುತ್ತಿವೆ. ಹೆದ್ದಾರಿಯಲ್ಲಿ ಅಪರಿಮಿತ ವೇಗದಲ್ಲಿ ಸಾಗುವ ಸರಕು ವಾಹನಗಳ ಚಾಲಕರಿಗೆ ಇದರ ಅರಿವಿಲ್ಲದ ಕಾರಣ ನಿರಂತರ ಅಪಘಾತಗಳು ನಡೆಯುತ್ತಲೇ ಇವೆಯೆಂದು ಸ್ಥಳೀಯರು ಹೆದ್ದಾರಿ ಪ್ರಾಧಿಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
A major accident was narrowly averted after a fish transport canter truck rammed into the rear of a private school bus on National Highway 66 at Kapikadu on Sunday morning. Seven students sustained minor injuries in the incident.The school bus belonging to Sharada Niketan Public School & College in Talapady was picking up students along the highway and heading towards Talapady when the speeding fish-laden canter crashed into it from behind. The impact was so severe that the rear seats of the bus were completely dislodged.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am