ಬ್ರೇಕಿಂಗ್ ನ್ಯೂಸ್
17-02-26 12:42 pm Mangaluru Staffer ಕರಾವಳಿ
ಮಂಗಳೂರು, ಫೆ.17: ಕಾಂಗ್ರೆಸ್ ಶಾಸಕರು ವಿದೇಶ ಪ್ರವಾಸ ತೆರಳುವುದರಲ್ಲಿ ತಪ್ಪೇನಿದೆ ಎನ್ನುವ ಅರ್ಥ ಬರುವಂತೆ ಗೃಹ ಸಚಿವ ಪರಮೇಶ್ವರ್ ಪ್ರಶ್ನೆ ಮಾಡಿದ್ದಾರೆ. ಮಂಗಳೂರಿನಲ್ಲಿ ಪೊಲೀಸ್ ವಸತಿ ಉದ್ಘಾಟನೆಗೆ ಆಗಮಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ್ದಾರೆ.
ಅವರು ಯಾಕೆ ಹೋಗ್ತಿದ್ದಾರೆ ಅಂತಾ ಗೊತ್ತಿಲ್ಲ. ಆದರೆ ಶಾಸಕರು ತಮ್ಮ ಹಣದಲ್ಲಿ ಎಲ್ಲಿ ಬೇಕಾದರೂ ಹೋಗಬಹುದು. ಅದಕ್ಕೆ ಸ್ವತಂತ್ರರಿದ್ದಾರೆ. ಅಧ್ಯಯನ ಪ್ರವಾಸ ಹೋಗುತ್ತಿದ್ದಾರೆ. ಆಸ್ಟ್ರೇಲಿಯಾ, ನ್ಯೂಜಿಲಂಡಿನಲ್ಲಿ ಕೃಷಿ ಇಲ್ವಾ.. ಯಾರು ಹೇಳಿದ್ದು ಇಲ್ಲಾಂತ. ನಾನೇ ಆಸ್ಟ್ರೇಲಿಯಾದಲ್ಲಿದ್ದೆ ಅಲ್ವಾ. ಕೃಷಿ ಅಧ್ಯಯನಕ್ಕಾಗಿ ತೆರಳುತ್ತಿದ್ದಾರೆ, ಅದರಲ್ಲೇನು ತಪ್ಪು ಅಂತ ಕಾಣುತ್ತಿಲ್ಲ ಎಂದವರು ಹೇಳಿದ್ದಾರೆ.
ಬಜೆಟ್ ಪ್ರಕ್ರಿಯೆ ಆಗ್ತಿರೋವಾಗ ಹೋಗುತ್ತಿರೋದು ಯಾಕೆ, ಅವರೆಲ್ಲ ಸಿದ್ದರಾಮಯ್ಯ ಬಣದವರೇ ಅಲ್ವಾ ಎಂಬ ಪ್ರಶ್ನೆಗೆ, ಬಜೆಟ್ ನಲ್ಲಿ ಅವರಿಗೇನು ಕೆಲಸ ಇರತ್ತೆ. ಬಜೆಟ್ ತಯಾರು ಮಾಡೋದು ಮುಖ್ಯಮಂತ್ರಿ ಹಾಗೂ ಹಣಕಾಸು ಇಲಾಖೆಯವರು. ಶಾಸಕರು ಸಿಎಲ್ ಪಿ ಸಭೆಯಲ್ಲಿ ಬಜೆಟ್ ಕುರಿತು ತಮ್ಮ ಅನಿಸಿಕೆಗಳನ್ನು ಹೇಳಿದ್ದಾರೆ. ಇದೆಲ್ಲವನ್ನೂ ಕ್ರೋಡೀಕರಿಸಿ ಬಜೆಟ್ ತಯಾರು ಮಾಡುತ್ತಾರೆ. ನಮ್ಮಲ್ಲಿ ಸಿದ್ದರಾಮಯ್ಯ ಬಣ ಅಂತ ಇಲ್ಲ. ಎಲ್ಲ ಒಟ್ಟಿಗಿದ್ದೇವೆ, ನಮ್ಮಲ್ಲಿ ಯಾವ ಕುರ್ಚಿ ಕದನವೂ ಇಲ್ಲ ಎಂದು ಹೇಳಿದ್ದಾರೆ.
ಸಚಿವ ಎಚ್.ಸಿ ಮಹದೇವಪ್ಪ ದಲಿತ ಸಿಎಂ ಆಗಬೇಕೆಂದು ಹೇಳಿರುವ ಪ್ರಶ್ನೆಗೆ ಉತ್ತರಿಸಿದ ಪರಮೇಶ್ವರ್, ಅದು ಅವರ ಅಭಿಪ್ರಾಯ ಹೇಳಿದ್ದಾರೆ. ಮಹದೇವಪ್ಪವರು ಕೂಡ ಸಿಎಂ ಆಗಲು ಸಮರ್ಥರಿದ್ದಾರೆ. ಯಾವುದೇ ಜವಬ್ದಾರಿ ಕೊಟ್ಟರೂ ತೆಗೆದುಕೊಳ್ಳುವುದಕ್ಕೆ ಅವರಿಗೆ ಸಾಮರ್ಥ್ಯ ಇದೆ. ಅದಕ್ಕೆ ಅವರು ಹೇಳಿದ್ದಾರೆ. ಜನ ಸಮುದಾಯದಲ್ಲಿ ಕೆಲವರು ಅವರವರ ಲೀಡರ್ ಅಂತಾ ಆರಿಸಿಕೊಳ್ಳುತ್ತಾರೆ. ಜನ ಅವರ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಾರೆ. ಅದನ್ನು ತಪ್ಪು ಅಂತಾ ನಾವು ಹೇಳುವುದಕ್ಕೆ ಆಗಲ್ಲ. ಅವರ ಅಭಿಪ್ರಾಯ ಅದು. ನನಗೂ ಆ ಅಭಿಪ್ರಾಯ ಇದೆ, ದಲಿತ ಸಿಎಂ ಯಾಕಾಗಬಾರದು?
ಆದರೆ ನಮ್ಮಲ್ಲಿ ಒಂದು ವ್ಯವಸ್ಥೆ ಇದೆ, ಹೈಕಮಾಂಡ್ ಇದೆ, ಸಂದರ್ಭ ಇದೆ. ಹೈಕಮಾಂಡ್ ಆ ಬಗ್ಗೆ ತೀರ್ಮಾನ ಮಾಡ್ತಾರೆ. ಯಾರೋ ಹತ್ತು ಜನ ನನ್ನ ಪರವಾಗಿ ಜೈಕಾರ ಹಾಕಿದ್ರೆ ಸಿಎಂ ಆಗಲ್ಲ. ಆದ್ರೆ ಹೈಕಮಾಂಡ್ ನವರು ಅದನ್ನೆಲ್ಲಾ ನೋಡಿ ತೀರ್ಮಾನ ತೆಗೆದುಕೊಳ್ಳುತ್ತಾರೆ. ಈಗ ಆ ಸಂದರ್ಭ ಇದೆ ಅಂತಾ ನನಗೆ ಅನಿಸಲ್ಲ. ಈಗ ದಲಿತ ಸಿ.ಎಂ ಎಂಬ ಚರ್ಚೆಯೇ ಇಲ್ಲ. ನಾವು ಆಡಳಿತದ ಮೇಲೆ ನಿಗಾ ಇರಿಸಿದ್ದೇವೆ ಎಂದು ಪರಮೇಶ್ವರ್ ಹೇಳಿದರು.
ಚಿಕ್ಕಮಗಳೂರಿನಲ್ಲಿ ಹಿಂದುಗಳ ಮನೆ ಮೇಲೆ ಕಲ್ಲು ತೂರಾಟ ಘಟನೆ ವಿಚಾರದಲ್ಲಿ ಪ್ರತಿಕ್ರಿಯಿಸಿದ ಅವರು, ಚಿಕ್ಕಮಗಳೂರು ಘಟನೆ ಸಂಬಂಧ ಈಗಾಗಲೇ ಕ್ರಮ ತೆಗೆದುಕೊಳ್ಳಲಾಗಿದೆ. ಕಾನೂನು ಪ್ರಕಾರ ಪೊಲೀಸರು ಏನು ಕ್ರಮ ತೆಗೆದುಕೊಳ್ಳಬೇಕು ಅದನ್ನು ತೆಗೆದುಕೊಳ್ಳುತ್ತಾರೆ. ಹೆಣ್ಣು ಮಗಳು ದಲಿತ ಸಮುದಾಯಕ್ಕೆ ಸೇರಿದವರು ಅಂತಾ ಗೊತ್ತಾಗಿದೆ. ಆ ಪ್ರಕಾರ ಪೊಲೀಸರು ಪಿಸಿಆರ್ ಆ್ಯಕ್ಟ್ ಅಡಿ ಪ್ರಕರಣ ದಾಖಲಿಸುತ್ತಾರೆ ಎಂದು ಹೇಳಿದರು.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am