ಬ್ರೇಕಿಂಗ್ ನ್ಯೂಸ್
19-02-26 05:38 pm Mangalore ಕರಾವಳಿ
ಉಳ್ಳಾಲ, ಫೆ.19 ಮಂಗಳೂರಿನ ನೇತ್ರಾವತಿ ಸೇತುವೆ ಆವರಣ ಗೋಡೆಗೆ ಮಿನಿ ಟೆಂಪೋವೊಂದು ಬುಧವಾರ ಮುಂಜಾನೆ ಡಿಕ್ಕಿ ಹೊಡೆದು ಪಲ್ಟಿ ಹೊಡೆದ ಘಟನೆ ನಡೆದಿದ್ದು ಟೆಂಪೋ ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾನೆ. ಘಟನೆಯಿಂದ ಸೇತುವೆಗೆ ಅರವತ್ತು ಲಕ್ಷ ರೂಪಾಯಿ ವೆಚ್ಚದಲ್ಲಿ ಅಳವಡಿಸಲಾಗಿದ್ದ ಕಬ್ಬಿಣದ ತಡೆಬೇಲಿಗೆ ತೀವ್ರ ಹಾನಿಯಾಗಿದೆ.
ಐದು ವರುಷಗಳ ಹಿಂದೆ ನೇತ್ರಾವತಿ ಸೇತುವೆಯಿಂದ ನದಿಗೆ ಜಿಗಿದು ಹಲವರು ಆತ್ಮಹತ್ಯೆಗೈದಿದ್ದ ಘಟನೆ ನಡೆದಿತ್ತು. ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಅಳಿಯ, ಕಾಫೀ ಡೇ ಸಂಸ್ಥಾಪಕ ಸಿದ್ಧಾರ್ಥ ಇದೇ ನೇತ್ರಾವತಿ ಸೇತುವೆಯಿಂದ ನದಿಗೆ ಜಿಗಿದು ಆತ್ಮಹತ್ಯೆಗೈದ ಘಟನೆ ದೇಶದಾದ್ಯಂತ ಸುದ್ದಿಯಾಗಿತ್ತು. ಇದರ ಬೆನ್ನಲ್ಲೇ ನೇತ್ರಾವತಿ ಸೇತುವೆಯಿಂದ ಜಿಗಿದು ಆತ್ಮಹತ್ಯೆಗೆ ಮುಂದಾಗುವುದನ್ನು ತಡೆಯಲು ಮಂಗಳೂರು ನಗರಾಭಿವೃದ್ಧಿ ಇಲಾಖೆಯ 63 ಲಕ್ಷ ರೂಪಾಯಿ ಅನುದಾನದಿಂದ ನೇತ್ರಾವತಿ ಸೇತುವೆಯುದ್ದಕ್ಕೂ ಫೆನ್ಸಿಂಗ್ ಮತ್ತು ಸಿಸಿಟಿವಿಯನ್ನು ಅಳವಡಿಸಲಾಗಿತ್ತು.



ಇದರಿಂದಾಗಿ ಕಳೆದ ಐದು ವರುಷಗಳಲ್ಲಿ ಇಲ್ಲಿ ಆತ್ಮಹತ್ಯೆ ಸರಣಿ ಕಡಿಮೆಯಾಗಿತ್ತು. ಇಬ್ಬರು ಮಾತ್ರ ಸೇತುವೆ ಆವರಣ ಗೋಡೆಗೆ ಅಳವಡಿಸಿದ ಪೈಪ್ ಲೈನ್ ಮೂಲಕ ಪ್ರಯಾಸದಿಂದ ಹಾದು ಹೋಗಿ ನದಿಗೆ ಜಿಗಿದು ಆತ್ಮಹತ್ಯೆಗೈದಿದ್ದರು. ಅದು ಬಿಟ್ಟರೆ ಫೆನ್ಸಿಂಗ್ ಅಳವಡಿಕೆ ಯೋಜನೆ ಬಹುತೇಕ ಫಲಶ್ರುತಿ ಕಂಡಿತ್ತು. ಫೆನ್ಸಿಂಗ್ ಮತ್ತು ಸಿಸಿಟಿವಿ ಅಳವಡಿಸಿದ್ದ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರವು ಅದರ ನಿರ್ವಹಣೆಯನ್ನು ಮಂಗಳೂರು ಮಹಾನಗರ ಪಾಲಿಕೆಗೆ ಹಸ್ತಾಂತರಿಸಿತ್ತು.
ಇದೀಗ ಟೆಂಪೋ ಢಿಕ್ಕಿಯ ಪರಿಣಾಮ ಸೇತುವೆಯ ಫೆನ್ಸಿಂಗ್ ಅರೆಬರೆ ಕಿತ್ತುಹೋಗಿದ್ದು ಇದರ ವೀಡಿಯೋ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಮತ್ತೆ ಆತ್ಮಹತ್ಯೆಗೆ ಸೇತುವೆ ತೆರೆದುಕೊಂಡಿದೆಯೇ ಎನ್ನುವ ಮಾತುಗಳು ಜಾಲತಾಣದಲ್ಲಿ ಬರತೊಡಗಿವೆ. ಮಹಾನಗರ ಪಾಲಿಕೆಯ ಅಧಿಕಾರಿಗಳು ಹರಿದಿರುವ ಫೆನ್ಸಿಂಗ್ ಬೇಲಿಯನ್ನು ದುರಸ್ತಿ ಪಡಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
Mini Tempo Crashes Into Netravati Bridge Wall, rs 60 Lakh Safety Fence Severely Damaged
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am