ಬ್ರೇಕಿಂಗ್ ನ್ಯೂಸ್
02-03-26 10:06 pm HK News Staffer ಕರಾವಳಿ
ಮಂಗಳೂರು, ಮಾರ್ಚ್ 2: ನಗರದಲ್ಲಿ ಹಲವು ವರ್ಷಗಳಿಂದ ಸಾಕಷ್ಟು ಟ್ರಾಫಿಕ್ ಸಮಸ್ಯೆ ಹಾಗೂ ಕಿರಿಕಿರಿ ಅನುಭವಿಸುತ್ತಿದ್ದ ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆಯ ಭಾಗವನ್ನು ಚತುಷ್ಪಥವಾಗಿ ಅಭಿವೃದ್ಧಿ ಪಡಿಸಲು ದಕ್ಷಿಣ ರೈಲ್ವೆಯಿಂದ ಅನುಮೋದನೆ ದೊರೆತಿದೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ಕಚೇರಿ ತಿಳಿಸಿದೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಂಸದರ ಕಚೇರಿ, ಪಾಂಡೇಶ್ವರ ಲೆವೆಲ್ ಕ್ರಾಸಿಂಗ್‌ನಲ್ಲಿ ಉಂಟಾಗಿರುವ ಗಂಭೀರ ಟ್ರಾಫಿಕ್ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕೆಂದು ಈ ಭಾಗದ ಜನರ ಬಹು ವರ್ಷಗಳ ಬೇಡಿಕೆಯಾಗಿದೆ. ಅದರಂತೆ ಸಮಸ್ಯೆಯ ಗಂಭೀರತೆ ಅರಿತ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರು, ಇತ್ತೀಚೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶಾಸಕ ವೇದವ್ಯಾಸ ಕಾಮತ್ ಹಾಗೂ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ರೈಲ್ವೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದರು. ಮಾತ್ರವಲ್ಲದೆ, ಈ ಲೆವೆಲ್ ಕ್ರಾಸಿಂಗ್‌ನಲ್ಲಿ ಶಾಶ್ವತ ಪರಿಹಾರ ಕಂಡುಕೊಳ್ಳುವ ಅಗತ್ಯವಿದ್ದು ಈ ನಿಟ್ಟಿನಲ್ಲಿ ಮಂಗಳೂರು ಮಹಾನಗರ ಪಾಲಿಕೆ ಹಾಗೂ ರೈಲ್ವೆ ಅಧಿಕಾರಿಗಳು ಸಮನ್ವಯತೆಯಿಂದ ಪರಿಹಾರ- ಮಾರ್ಗೋಪಾಯಗಳ ಬಗ್ಗೆ ಸಮಗ್ರ ವರದಿಯನ್ನು ತಯಾರಿಸಬೇಕು ಹಾಗೂ ಈ ವರದಿಯನ್ನು ರೈಲ್ವೆ ಇಲಾಖೆಯ ಅಧಿಕೃತ ಪೋರ್ಟಲ್‌ನಲ್ಲಿ ಅಪ್‌ಲೋಡ್ ಮಾಡುವಂತೆ ಮನಪಾ ಅಧಿಕಾರಿಗಳಿಗೆ ಸೂಚಿಸಿದ್ದರು. ಪಾಲಿಕೆ ನೀಡುವ ಈ ವರದಿ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆಯಾಗಿರಲಿದೆ ಎಂದು ಸಂಸದರು ಹೇಳಿದ್ದರು.
ದಕ್ಷಿಣ ರೈಲ್ವೆ ವ್ಯಾಪ್ತಿಗೆ ಸೇರಿರುವ ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆಯನ್ನು ನಾಲ್ಕು ಪಥಗಳ ರಸ್ತೆಯಾಗಿ ಅಭಿವೃದ್ಧಿ ಪಡಿಸುವುದಕ್ಕೆ ರೈಲ್ವೆ ಇಲಾಖೆ ಒಪ್ಪಿಗೆ ನೀಡಿದೆ. ದಕ್ಷಿಣ ರೈಲ್ವೆಯ ಜಿಎಂ ಹಾಗೂ ಪಾಲಕ್ಕಾಡ್ ವಿಭಾಗದ ಡಿಆರ್‌ಎಂ ಅವರೊಂದಿಗೆ ಸಂಸದರು ನಿರಂತರ ಚರ್ಚೆ ನಡೆಸಿದ ಹಿನ್ನೆಲೆಯಲ್ಲಿ ಈ ರೈಲ್ವೆ ಗೇಟ್ ವ್ಯಾಪ್ತಿಯ ರಸ್ತೆಯನ್ನು ಮೇಲ್ದರ್ಜೆಗೇರಿಸುವ ಮೂಲಕ ಗಂಭೀರ ಸಮಸ್ಯೆಗೆ ಪರಿಹಾರ ಒದಗಿಸುವುದಕ್ಕೆ ಸಾಧ್ಯವಾಗಿದೆ. ಈ ಲೆವೆಲ್ ಕ್ರಾಸಿಂಗ್ ರಸ್ತೆ ಅಗಲೀಕರಣಕ್ಕೆ ಸದ್ಯ ಅಂದಾಜು ಪಟ್ಟಿ ಸಿದ್ಧಪಡಿಸಲಾಗುತ್ತದೆ. ಮಾರ್ಚ್ ಅಂತ್ಯದೊಳಗೆ ಪಾಂಡೇಶ್ವರ ಲೆವಲ್ ಕ್ರಾಸಿಂಗ್ ರಸ್ತೆ ಅಗಲೀಕರಣ ಕಾಮಗಾರಿಗೆ ಟೆಂಡರ್ ಪ್ರಕ್ರಿಯೆ ನಡೆಯಲಿದೆ. ಇಲ್ಲಿ ಮನಪಾ ವ್ಯಾಪ್ತಿಗೆ ಸಂಬಂಧಪಟ್ಟ ಚತುಷ್ಪಥ ರಸ್ತೆ ಇದ್ದು, ರೈಲ್ವೆ ವ್ಯಾಪ್ತಿಯ ರಸ್ತೆ ಮಾತ್ರ ದ್ವಿಪಥವಾಗಿದೆ. ಇಲ್ಲಿ ಅಗಲೀಕರಣಗೊಂಡರೆ ಲೆವೆಲ್ ಕ್ರಾಸಿಂಗ್ ರಸ್ತೆ ಕೂಡ ಚತುಷ್ಪಥ ರಸ್ತೆಯಾಗಿ ವಾಹನ ಸುಗಮ ಸಂಚಾರಕ್ಕೆ ಅನುಕೂಲವಾಗುತ್ತದೆ. ಜತೆಗೆ ಸುರಕ್ಷತೆಗಾಗಿ 'ಡಬಲ್ ಬೂಮ್' ಆಟೋಮ್ಯಾಟಿಕ್ ಗೇಟ್ ವ್ಯವಸ್ಥೆಯನ್ನು ಅಳವಡಿಸಲಾಗುತ್ತಿದೆ. ಇದರಿಂದ ಈ ರಸ್ತೆಯಲ್ಲಿ ಭವಿಷ್ಯದಲ್ಲಿ ಸುಗಮ ಸಂಚಾರದ ಜತೆಗೆ ಟ್ರಾಫಿಕ್ ದಟ್ಟಣೆ ಸಮಸ್ಯೆಯೂ ಬಗೆಹರಿಯಲಿದೆ ಎಂದು ಸಂಸದರ ಕಚೇರಿ ತಿಳಿಸಿದೆ.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
15-06-26 04:52 pm
HK News Staffer
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
15-06-26 04:54 pm
HK News Staffer
ಸೋಲಾಪುರದಲ್ಲಿ ಭೀಕರ ದುರಂತ! ನಿಯಂತ್ರಣ ತಪ್ಪಿ ನಾಲೆಗ...
15-06-26 11:50 am
ಧರ್ಮಸ್ಥಳಕ್ಕೆ ತೆರಳಿದ್ದ ಬೆಂಗಳೂರಿನ ಮೂವರು ಯುವಕರು...
15-06-26 11:27 am
ರೇಣುಕಾಸ್ವಾಮಿ ಕೇಸ್ ಮಾದರಿಯಲ್ಲೇ ಬಳ್ಳಾರಿಯಲ್ಲಿ ಭೀಕ...
14-06-26 10:30 pm
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm