ಬ್ರೇಕಿಂಗ್ ನ್ಯೂಸ್
03-03-26 10:37 am HK News Staffer ಕರಾವಳಿ
ಉಳ್ಳಾಲ, ಮಾ.3: ಒಮಾನ್ ದೇಶದಲ್ಲಿ ಉದ್ಯೋಗದಲ್ಲಿದ್ದ ಉಳ್ಳಾಲದ ಸೋಮೇಶ್ವರ ಮೂಲದ ಯುವಕನೋರ್ವ ತನ್ನ ಕೊಠಡಿಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ತಾನು ಪ್ರೀತಿಸುತ್ತಿದ್ದ ಹುಡುಗಿ ನಾಲ್ಕು ವರ್ಷಗಳ ಪ್ರೀತಿಯನ್ನ ನಿರಾಕರಿಸಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆಗೈದಿರುವುದಾಗಿ ತಿಳಿದುಬಂದಿದೆ.
ಸೋಮೇಶ್ವರದ ಚಂದ್ರ ಮತ್ತು ದೀಪಾ ದಂಪತಿಯ ಹಿರಿಯ ಪುತ್ರ ಪುನೀತ್ ಪೂಜಾರಿ (32) ಮೃತ ಯುವಕ. ಪುನೀತ್ ಕಳೆದ ಒಂದೂವರೆ ವರ್ಷಗಳಿಂದ ಒಮನ್ ದೇಶದಲ್ಲಿ ಲಿಫ್ಟ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಒಂದೂವರೆ ತಿಂಗಳ ಹಿಂದಷ್ಟೆ ಊರಿಗೆ ಬಂದಿದ್ದ ಪುನೀತ್ ಮತ್ತೆ ಒಮನ್‌ಗೆ ಮರಳಿದ್ದರು.

ಪುನೀತ್ ಕಳೆದ ನಾಲ್ಕು ವರ್ಷಗಳಿಂದ ಮಂಗಳೂರಿನ ಉರ್ವಾ ನಿವಾಸಿ ಯುವತಿಯೋರ್ವಳನ್ನು ಪ್ರೀತಿಸುತ್ತಿದ್ದರು. ಬಹಳ ಅನ್ಯೋನ್ಯವಾಗಿದ್ದ ಜೋಡಿಯು ಹಲವೆಡೆ ಸುತ್ತಾಡಿರುವ ಫೋಟೊಗಳನ್ನ ಜಾಲತಾಣಗಳಲ್ಲಿ ಹಾಕಿದ್ದರು.
ಇತ್ತೀಚಿನ ದಿನಗಳಲ್ಲಿ ಯುವತಿ ಪುನೀತ್ ಫೋನ್ ಕರೆಗಳನ್ನು ಸ್ವೀಕರಿಸದೇ, ಸಂದೇಶಗಳಿಗೂ ಪ್ರತಿಕ್ರಿಯೆ ನೀಡದೇ ಪ್ರೀತಿಯನ್ನ ನಿರಾಕರಿಸುತ್ತಿದ್ದಳೆನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರೇಯಸಿಯೊಂದಿಗೆ ವಿರಸ ತಾಳಲಾರದೆ ಪುನೀತ್ ಮನನೊಂದಿದ್ದು, ಈ ವಿಚಾರವನ್ನು ತನ್ನ ಆಪ್ತ ಗೆಳೆಯರಲ್ಲೂ ಪ್ರಸ್ತಾಪಿಸಿದ್ದರು.

ಪ್ರೇಮ ವೈಫಲ್ಯದ ಸಂಕಟದಲ್ಲಿ ನರಳುತ್ತಿದ್ದ ಪುನೀತ್ ಸಾಮಾಜಿಕ ಜಾಲತಾಣದಲ್ಲಿ ಲೈವ್ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ. ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಅಶಾಂತ ಪರಿಸ್ಥಿತಿಯ (ಇರಾನ್ ಸಂಘರ್ಷ) ಹಿನ್ನೆಲೆ ಒಮನ್ ದೇಶದ ಕಾನೂನು ಪ್ರಕ್ರಿಯೆ ಪೂರ್ಣಗೊಳ್ಳಲು ಹೆಚ್ಚುವರಿ ಸಮಯ ಬೇಕಾಗುವ ಸಾಧ್ಯತೆ ಇದ್ದು, ಮೃತದೇಹವನ್ನ ಭಾರತಕ್ಕೆ ತರಲು ವಿಳಂಬವಾಗಬಹುದೆಂದು ಕುಟುಂಬದ ಆಪ್ತರು ಬೇಸರ ವ್ಯಕ್ತಪಡಿಸಿದ್ದಾರೆ. ಮೃತ ಪುನೀತ್ ತಂದೆ-ತಾಯಿ, ಸಹೋದರ ಹಾಗೂ ಸಹೋದರಿಯನ್ನು ಅಗಲಿದ್ದಾರೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm