ಬ್ರೇಕಿಂಗ್ ನ್ಯೂಸ್
04-03-26 09:31 pm HK News Staffer ಕರಾವಳಿ
ಮಂಗಳೂರು, ಮಾರ್ಚ್ 4: ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸುವ ಪ್ರಸ್ತಾಪದ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯನ್ನು ಘೋಷಿಸುವ ಸಂದರ್ಭದಲ್ಲಿ ಅನುಸರಿಸಿರುವ ಮಾನದಂಡಗಳ ಬಗ್ಗೆ ಅಧ್ಯಯನ ನಡೆಸಲು ಸರಕಾರ ನೇಮಿಸಿರುವ ಸಮಿತಿಯು ತನ್ನ ವರದಿಯನ್ನು ಸರಕಾರಕ್ಕೆ ಸಲ್ಲಿಸಿದೆ.
ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಅಂದಿನ ನಿರ್ದೇಶಕಿ ಕೆ.ಎಂ. ಗಾಯತ್ರಿ ಅವರ ಅಧ್ಯಕ್ಷತೆಯಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಅವರ ಉಪಸ್ಥಿತಿಯಲ್ಲಿ 6 ಮಂದಿ ಸದಸ್ಯರ ಅಧ್ಯಯನ ಸಮಿತಿಯನ್ನು ಸರಕಾರ ನೇಮಿಸಿತ್ತು.
ಸದ್ರಿ ಸಮಿತಿಯು ಜನವರಿ 19 ಹಾಗೂ 20ರಂದು ಆಂಧ್ರಪ್ರದೇಶ ರಾಜ್ಯದ ಸಚಿವಾಲಯ, ವಿವಿಧ ಇಲಾಖೆ, ಕಚೇರಿಗಳಿಗೆ ಭೇಟಿ ನೀಡಿ ಆಂಧ್ರಪ್ರದೇಶದಲ್ಲಿ ಉರ್ದು ಭಾಷೆಯನ್ನು ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸುವ ಸಂದರ್ಭದಲ್ಲಿ ಕೈಗೊಂಡ ಮಾನದಂಡಗಳು ಹಾಗೂ ವಿಧಿ ವಿಧಾನಗಳ ಬಗ್ಗೆ ಅಧ್ಯಯನ ನಡೆಸಿ ವರದಿ ಸಿದ್ಧಪಡಿಸಿತ್ತು.
ಸಮಿತಿಯ ವರದಿಯನ್ನು ವಿಕಾಸ ಸೌಧದಲ್ಲಿ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಕಾರ್ಯದರ್ಶಿ ಜೆ.ಮಂಜುನಾಥ್ ಅವರಿಗೆ ಅಧ್ಯಯನ ಸಮಿತಿ ಸದಸ್ಯರು ಸಲ್ಲಿಸಿದರು. ತುಳು ಭಾಷೆಯ ಹಿನ್ನೆಲೆ ಹಾಗೂ ಚರಿತ್ರೆಯ ಬಗೆಗಿನ ಪ್ರಸ್ತಾವನೆಯನ್ನು ಕೂಡ ವರದಿ ಜೊತೆಗೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ನಿರ್ದೇಶಕ ಡಾ. ಬಿ.ಎಸ್. ಮಂಜುನಾಥ ಸ್ವಾಮಿ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್, ಅಧ್ಯಯನ ಸಮಿತಿ ಸದಸ್ಯರಾದ ಯಕ್ಷಗಾನ ಅಕಾಡೆಮಿ ಸದಸ್ಯ ಸುಧಾಕರ ಶೆಟ್ಟಿ, ಕಾನೂನು ಇಲಾಖೆಯ ಉಪ ಕಾರ್ಯದರ್ಶಿ ಶ್ರೀಮತಿ ವನಿತಾ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಉಪ ಕಾರ್ಯದರ್ಶಿ ಮೂರ್ತಿ ಕೆ.ಎನ್, ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಅಧೀನ ಕಾರ್ಯದರ್ಶಿ ಶ್ರೀಮತಿ ಕೆ.ಎಂ ಶುಭಶ್ರೀ, ಕರ್ನಾಟಕ ಸಾಹಿತ್ಯ ಅಕಾಡೆಮಿ ರಿಜಿಸ್ಟ್ರಾರ್ ಕರಿಯಪ್ಪ ಎನ್. ಉಪಸ್ಥಿತರಿದ್ದರು.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm