ಬ್ರೇಕಿಂಗ್ ನ್ಯೂಸ್
05-03-26 12:42 pm HK News Staffer ಕರಾವಳಿ
ಬಂಟ್ವಾಳ, ಮಾರ್ಚ್ 4: ಬಂಟ್ವಾಳ ತಾಲೂಕಿನ ಫರಂಗಿಪೇಟೆ ಬಳಿಯ ನೇತ್ರಾವತಿ ನದಿ ತೀರದಲ್ಲಿ ಅಪಾರ ಪ್ರಮಾಣದ ಆಧಾರ್ ಕಾರ್ಡ್ ಪ್ರತಿಗಳು ಪತ್ತೆಯಾಗಿದ್ದು, ಸ್ಥಳೀಯರು ಅಚ್ಚರಿಗೆ ಒಳಗಾಗಿದ್ದಾರೆ. ಈ ಬಗ್ಗೆ ವಿಷಯ ತಿಳಿಯುತ್ತಲೇ ಸ್ಥಳೀಯ ಶಾಸಕ ಸ್ಪೀಕರ್ ಯು.ಟಿ. ಖಾದರ್ ತನಿಖೆಗೆ ಸೂಚಿಸಿದ್ದಾರೆ.
ಆಧಾರ್ ಕಾರ್ಡ್ ಗಳು ನದಿ ತಟದಲ್ಲಿರುವುದನ್ನು ಕಂಡು ಸಾರ್ವಜನಿಕರು ಸ್ಥಳೀಯ ಪುದು ಗ್ರಾಮ ಪಂಚಾಯತ್ ಅಧ್ಯಕ್ಷರಿಗೆ ಮಾಹಿತಿ ನೀಡಿದ್ದು ಬಳಿಕ ಆಧಾರ್ ಕಾರ್ಡ್ ಗಳನ್ನು ಸಂಗ್ರಹಿಸಿದ್ದಾರೆ. ಆಧಾರ್ ಕಾರ್ಡ್ ಗಳು ಇಷ್ಟೊಂದು ಪ್ರಮಾಣದಲ್ಲಿ ನದಿ ತಟದಲ್ಲಿ ಪತ್ತೆಯಾಗಲು ಕಾರಣವೇನು, ಇದಕ್ಕೆ ಕಾರಣರಾದವರು ಯಾರು ಎಂಬುದನ್ನು ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸ್ಪೀಕರ್ ಯು.ಟಿ. ಖಾದರ್ ಅವರು ಯುಐಡಿಎಐ ಯೋಜನಾ ವ್ಯವಸ್ಥಾಪಕರಿಗೆ ಪತ್ರ ಬರೆದಿದ್ದಾರೆ.
ಫರಂಗಿಪೇಟೆ ಹತ್ತನೇ ಮೈಲ್ಕಲ್ಲು ಸಮೀಪದ ನೇತ್ರಾವತಿ ನದಿ ತೀರದಲ್ಲಿ ಪತ್ತೆಯಾಗಿರುವುದು ಪುದು ಗ್ರಾಮದ ನಿವಾಸಿಗಳ ವಿಳಾಸ ಹೊಂದಿರುವ ಆಧಾರ್ ಕಾರ್ಡ್ಗಳೆಂದು ಸ್ಥಳೀಯರು ತಿಳಿಸಿದ್ದಾರೆ. ನದಿಯಲ್ಲಿ ತೇಲಿ ಬರುತ್ತಿದ್ದ ಆಧಾರ್ ಕಾರ್ಡ್ಗಳನ್ನು ಗಮನಿಸಿ ಗ್ರಾಮಸ್ಥರಿಗೆ ಅವರು ಮಾಹಿತಿ ನೀಡಿದ್ದರು. ಪುದು ಗ್ರಾಮದ ಅನೇಕ ಮನೆಗಳ ವಿಳಾಸ ಹೊಂದಿರುವ ಕಾರ್ಡ್ಗಳು ನದಿ ಬದಿಯಲ್ಲಿ ಚದುರಿ ಬಿದ್ದಿದ್ದವು. ಪುದು ಗ್ರಾಪಂ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ ಪ್ರತಿಕ್ರಿಯಿಸಿ, ಗ್ರಾಮಸ್ಥರಿಗೆ ಆಧಾರ್ ಕಾರ್ಡ್ ತಲುಪದೆ ನದಿಗೆ ತಲುಪಿದ್ದು ಹೇಗೆ ಎನ್ನುವುದು ಅಚ್ಚರಿಯಾಗಿದೆ. ಸಾರ್ವಜನಿಕರು ಹಣ ನೀಡಿ ಸೈಬರ್ ಕೇಂದ್ರಗಳಿಂದ ಆಧಾರ್ ಪ್ರತಿಗಳನ್ನು ಪಡೆಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದೀಗ ಸಾವಿರಾರು ಕಾರ್ಡ್ಗಳು ನದಿ ತೀರದಲ್ಲಿ ಪತ್ತೆಯಾಗಿರುವುದು ಗಂಭೀರ ವಿಷಯವಾಗಿದ್ದು, ಇದರ ಹಿಂದೆ ಯಾರು ಇದ್ದಾರೆ ಎಂಬುದನ್ನು ಪತ್ತೆಹಚ್ಚಬೇಕು ಎಂದಿದ್ದಾರೆ.
ಈ ಬಗ್ಗೆ ಉನ್ನತಾಧಿಕಾರಿಗಳಿಗೆ ಮಾಹಿತಿ ನೀಡಲಾಗುವುದು. ಸ್ಥಳೀಯ ಶಾಸಕರಿಗೂ ಗ್ರಾಮ ಪಂಚಾಯತ್ ವತಿಯಿಂದ ದೂರು ಸಲ್ಲಿಸಲಾಗಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಸಾರ್ವಜನಿಕರೊಂದಿಗೆ ಅಂಚೆ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದ್ದಾರೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm