ಬ್ರೇಕಿಂಗ್ ನ್ಯೂಸ್
05-03-26 02:34 pm HK News Staffer ಕರಾವಳಿ
ಉಳ್ಳಾಲ, ಮಾ.5: ಅರಣ್ಯಾಧಿಕಾರಿಯೋರ್ವರು ನೆಲೆಸಿದ್ದ ಬಾಡಿಗೆ ಮನೆಗೆ ಕನ್ನ ಹಾಕಿದ ಕಳ್ಳರು ಅಂಗಳದಲ್ಲಿ ನಿಲ್ಲಿಸಿದ್ದ ಬೈಕ್ ಸೇರಿದಂತೆ ಹತ್ತೂವರೆ ಲಕ್ಷ ರೂಪಾಯಿ ನಗದು,181 ಗ್ರಾಂ ಚಿನ್ನ ಮತ್ತು ಬೆಳ್ಳಿಯನ್ನು ದೋಚಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಅಂಬಿಕಾರೋಡ್, ಕಾಪಿಕಾಡು ಎಂಬಲ್ಲಿ ನಡೆದಿದೆ.
ಕೋಟೆಕಾರು ಉಪ ವಲಯ ಅರಣ್ಯಾಧಿಕಾರಿ ಮೆಹಬೂಬ್ ಸಾಬ್ ಗುಡಿಹೊಲ ಅವರು ವಾಸವಿದ್ದ ಅಂಬಿಕಾರೋಡ್ ಕಾಪಿಕಾಡಿನ ಬಾಡಿಗೆ ಮನೆಯಲ್ಲಿ ಕಳ್ಳತನ ನಡೆದಿದ್ದು ಘಟನೆ ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ.


ಅರಣ್ಯಾಧಿಕಾರಿ ಮೆಹಬೂಬ್ ಸಾಬ್(35) ಅವರು ತನ್ನ ಪತ್ನಿ ಫರ್ಝಾನ ಮೆಹಬೂಬ್ ಮತ್ತು ಪುಟ್ಟ ಮಗುವಿನೊಂದಿಗೆ ಕಾಪಿಕಾಡುವಿನ ಬಾಡಿಗೆ ಮನೆಯಲ್ಲಿ ಕಳೆದ ಆರು ತಿಂಗಳುಗಳಿಂದ ವಾಸವಿದ್ದರು. ಕಳೆದ ಶುಕ್ರವಾರ ಮಧ್ಯಾಹ್ನ ಮೆಹಬೂಬ್ ಅವರು ಕುಟುಂಬದೊಂದಿಗೆ ತನ್ನ ಊರು ಕೊಪ್ಪಳಕ್ಕೆ ತೆರಳಿದ್ದರು. ಇಂದು ಬೆಳಗ್ಗೆ ಒಂಬತ್ತು ಗಂಟೆ ವೇಳೆಗೆ ಮೆಹಬೂಬ್ ಅವರು ತನ್ನ ಕುಟುಂಬ ಸಮೇತ ಕಾಪಿಕಾಡಿನ ಮನೆಗೆ ವಾಪಸಾದಾಗ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ.
ಮನೆಯೊಳಗೆ ನುಗ್ಗಿದ ಕಳ್ಳರು ಹಾಲ್ ಮತ್ತು ಎರಡು ಕೋಣೆಯೊಳಗಿನ ಕಪಾಟುಗಳನ್ನ ಜಾಲಾಡಿದ್ದು, ಲಾಕರ್ ಗಳಲ್ಲಿದ್ದ 181 ಗ್ರಾಂ ಚಿನ್ನ, ಮಗುವಿನ ಬೆಳ್ಳಿಯ ಆಭರಣಗಳು ಹಾಗೂ ಮೆಹಬೂಬ್ ಅವರು ಬ್ಯಾಂಕಿನಿಂದ ಸಾಲ ಪಡೆದಿದ್ದ ಹತ್ತೂವರೆ ಲಕ್ಷ ರೂಪಾಯಿ ನಗದನ್ನ ದೋಚಿದ್ದಾರೆ.
ಘಟನಾ ಸ್ಥಳಕ್ಕೆ ಉಳ್ಳಾಲ ಪೊಲೀಸರು, ಶ್ವಾನದಳ, ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ತನಿಖೆ ಕೈಗೆತ್ತಿಕೊಂಡಿದ್ದಾರೆ. ಕಾಪಿಕಾಡು ಪ್ರದೇಶದಲ್ಲಿ ಸಾಕಷ್ಟು ಮನೆಗಳಿದ್ದರೂ ಕಳ್ಳತನ ಯಾವಾಗ ನಡೆದಿದೆಯೆಂದು ಯಾರಿಗೂ ಸ್ಪಷ್ಟ ಮಾಹಿತಿ ಇಲ್ಲ. ಕಳ್ಳತನ ನಡೆದ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲದೆ ಪೊಲೀಸರಿಗೆ ಪ್ರಕರಣದ ತನಿಖೆ ಸವಾಲಾಗಿ ಪರಿಣಮಿಸಿದೆ.
ಕೆಲ ವರುಷಗಳ ಹಿಂದಷ್ಟೆ ಅರಣ್ಯಾಧಿಕಾರಿ ನೆಲೆಸಿರುವ ಪಕ್ಕದ ಮನೆಯಲ್ಲೂ ಮನೆ ಕಳ್ಳತನ ನಡೆದಿತ್ತು. ಅಂದು ಕೂಡ ಮನೆ ಮಂದಿ ಇಲ್ಲದ ವೇಳೆ ಮನೆಗೆ ನುಗ್ಗಿದ ಕಳ್ಳರು ಕಳ್ಳತನ ನಡೆಸಿದ್ದಲ್ಲದೆ, ಅಡುಗೆ ಕೋಣೆಯಲ್ಲಿದ್ದ ಊಟವನ್ನೂ ಉಂಡು ಹೋಗಿದ್ದರು.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm