ಬ್ರೇಕಿಂಗ್ ನ್ಯೂಸ್
09-03-26 12:50 pm HK News Staffer ಕರಾವಳಿ
ಭಟ್ಕಳ, ಮಾರ್ಚ್ 9: ಲೋಕಸಭೆ ಚುನಾವಣೆ ಟಿಕೆಟ್ ಕೈತಪ್ಪಿದ ನಂತರ ಸಾರ್ವಜನಿಕ ಜೀವನದಿಂದ ದೂರ ಉಳಿದಿದ್ದ ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ, ಮತ್ತೆ ರಾಜ್ಯ ರಾಜಕೀಯದಲ್ಲಿ ಸಕ್ರಿಯರಾಗುವ ಸೂಚನೆ ಲಭಿಸಿದೆ. ನಿನ್ನೆ ಭಟ್ಕಳದಲ್ಲಿ ನಡೆದ ‘ಹಿಂದೂ ಸಂಗಮ’ ಸಮಾವೇಶದಲ್ಲಿ ಹಿಂದುತ್ವದ ಪರ ಪ್ರಖರ ಭಾಷಣ ಮಾಡಿ ಗಮನ ಸೆಳೆದಿದ್ದಾರೆ.
ನಮ್ಮ ಇತಿಹಾಸದಲ್ಲಿ ಆಗಿಹೋದ ಶೇಕಡಾ 90ರಷ್ಟು ಋಷಿಗಳು ಬ್ರಾಹ್ಮಣರಲ್ಲ. ಶ್ರೇಷ್ಠ ಸಾಧನೆಗೈದ ವಾಲ್ಮೀಕಿ, ವಿಶ್ವಾಮಿತ್ರರೂ ಬ್ರಾಹ್ಮಣರಲ್ಲ. ಈ ದೇಶದಲ್ಲಿ ಜಾತಿಗೆ ಎಂದಿಗೂ ಬೆಲೆ ಇರಲಿಲ್ಲ, ಯೋಗ್ಯತೆಗೆ ಮಾತ್ರ ಬೆಲೆಯಿತ್ತು. ಇಂದು ಜಾತಿಗೆ ಬೆಲೆ ಕೊಟ್ಟಿದ್ದು ನಮ್ಮಂತಹ ಬುದ್ಧಿವಂತರು. ಇತಿಹಾಸ ಓದಿದರೆ ನಮ್ಮ ಹಿಂದಿನ ಸತ್ಯ ತಿಳಿಯುತ್ತದೆ ಎಂದರು.
ಜಾತ್ಯತೀತತೆ ಎಂದರೆ ಅದು ಹಿಂದುತ್ವ. ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲು ಅವಕಾಶ ನೀಡಿದ್ದೇವೆ ಎಂದರೆ ನಮಗಿಂತ ದೊಡ್ಡ ಜಾತ್ಯತೀತರು ಯಾರಿದ್ದಾರೆ? ತಾಕತ್ತಿದ್ದರೆ ಬಾಂಗ್ಲಾದೇಶಕ್ಕೆ ಹೋಗಿ ಜಾತ್ಯತೀತತೆಯ ಪಾಠ ಮಾಡಿ ಎಂದು ಸವಾಲು ಹಾಕಿದರು. ನಮ್ಮನ್ನು ಮುಸ್ಲಿಮರು ಅಥವಾ ಕ್ರಿಶ್ಚಿಯನ್ನರು ಸೋಲಿಸಿಲ್ಲ. ಹಿಂದೂಗಳನ್ನು ಸೋಲಿಸಿದ್ದು ನಮ್ಮವರೇ ಆದ ಜಯಚಂದ ಮತ್ತು ಮಲ್ಲಪ್ಪ ಶೆಟ್ಟಿಯಂತಹ ದ್ರೋಹಿಗಳು. ನಾವು ಒಂದಾಗದಿದ್ದರೆ ನಮ್ಮ ಪರಿಸ್ಥಿತಿ ‘ಗೋವಿಂದ ಗೋವಿಂದ’ ಆಗಲಿದೆ.
“ಆರ್.ಎಸ್.ಎಸ್ ಮುಗಿಸುತ್ತೇವೆ ಎನ್ನುವವರು ಭ್ರಮೆಯಲ್ಲಿದ್ದಾರೆ. ಹುಲಿ-ಸಿಂಹವನ್ನು ಯಾರೂ ದೇವರಿಗೆ ಬಲಿ ಕೊಡಲ್ಲ, ಕುರಿಯನ್ನಷ್ಟೇ ಬಲಿ ಕೊಡೋದು. ನಮ್ಮ ಸಂಘಟನೆಯನ್ನು ಯಾರಿಂದಲೂ ನಿಲ್ಲಿಸಲು, ಮುಗಿಸಲು ಸಾಧ್ಯವಿಲ್ಲ ಎಂದು ತಮ್ಮ ಶೈಲಿಯಲ್ಲಿಯೇ ಗುಡುಗಿದರು. ಹಿಂದೂ ಧರ್ಮವು ಇಂದು ಜಾತಿ-ಜಾತಿಯಲ್ಲಿ ಬಿದ್ದು ಹೊರಳಾಡುತ್ತಿದೆ. ನಮಗೆ ಮುಸ್ಲಿಮರು ಅಥವಾ ಕ್ರೈಸ್ತರಿಂದ ಅಪಾಯ ಬಂದಿಲ್ಲ, ಬದಲಾಗಿ ನಮ್ಮೊಳಗಿನವರಿಂದಲೇ ನಮಗೆ ಹೆಚ್ಚಿನ ಅಪಾಯ ಎದುರಾಗಿದ್ದು.
ಇಂದು ಆಫ್ರಿಕಾದಲ್ಲಿ ನಮಗಿಂತ ಸುಂದರವಾಗಿ ಗಣೇಶ ಹಬ್ಬ ಆಚರಿಸುತ್ತಾರೆ. ಚೀನಾದ ಗ್ರಾಮೀಣ ಪ್ರದೇಶಗಳಲ್ಲಿ ಭಾರತೀಯರಿಗೆ ಅಪಾರ ಗೌರವವಿದೆ. ಜಗತ್ತು ನಮ್ಮತ್ತ ನೋಡುತ್ತಿದೆ, ನಾವಿಂದು ಎದ್ದು ನಿಲ್ಲಬೇಕಿದೆ ಎಂದು ಜನರನ್ನು ಅನಂತ ಕುಮಾರ್ ಹೆಗಡೆ ಒತ್ತಾಯಿಸಿದರು. ನಮ್ಮ ಯಾವುದೇ ಧರ್ಮಗ್ರಂಥಗಳಲ್ಲಿ ಜಾತಿ ವ್ಯವಸ್ಥೆಯ ಉಲ್ಲೇಖವಿಲ್ಲ. ನದಿ ಹರಿಯುವಾಗ ಕೊಳಕು ಸೇರಿಕೊಂಡಂತೆ, ಕಾಲಕ್ರಮೇಣ ಜಾತಿ ಎಂಬ ಕೊಳಕು ನಮ್ಮಲ್ಲಿ ಸೇರಿಕೊಂಡಿದೆ. ಅದನ್ನು ಸ್ವಚ್ಛಗೊಳಿಸುವುದು ನಮ್ಮೆಲ್ಲರ ಜವಾಬ್ದಾರಿ ಎಂದರು. ಪ್ರಸ್ತುತ ಕಾಲಘಟ್ಟದಲ್ಲಿ ಕೇವಲ ತಮ್ಮ ಜಾತಿಯವರನ್ನು ಮಾತ್ರ ಗೌರವಿಸುವ 'ಜಾತಿ ಸಮ್ಮೇಳನಗಳು' ಫ್ಯಾಶನ್ ಆಗಿರುವುದು ಸಮಾಜದ ಏಕತೆಗೆ ಮಾರಕ ಎಂದು ಅವರು ಅಭಿಪ್ರಾಯಪಟ್ಟರು.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm