ಬ್ರೇಕಿಂಗ್ ನ್ಯೂಸ್
09-03-26 02:53 pm HK News Staffer ಕರಾವಳಿ
ಉಳ್ಳಾಲ, ಮಾ.09: ಬೆಂಗಳೂರಿನ ಕಟ್ಟಡವೊಂದರಲ್ಲಿ ಎಸಿ ಜೋಡಣೆ ಕೆಲಸ ನಿರ್ವಹಿಸುತ್ತಿದ್ದಾಗ ಆಯತಪ್ಪಿ ಕೆಳಕ್ಕೆ ಬಿದ್ದು ಗಂಭೀರ ಗಾಯಗೊಂಡಿದ್ದ ತಲಪಾಡಿ ನಿವಾಸಿ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ನಡೆದಿದೆ.
ತಲಪಾಡಿ ನಿವಾಸಿಗಳಾದ ವಿಶ್ವನಾಥ್ ಮತ್ತು ಮೀನಾಕ್ಷಿ ದಂಪತಿ ಪುತ್ರ ಹರ್ಷಿತ್ ಪೂಜಾರಿ(32) ಮೃತ ಯುವಕ.
ವಿದೇಶದ ಶಿಪ್ಪಿಂಗ್ ಕಂಪನಿಯಲ್ಲಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದ ಹರ್ಷಿತ್ ಮೂರು ತಿಂಗಳಿಗೊಮ್ಮೆ ಸಿಗುವ ರಜೆಯಲ್ಲಿ ಊರಿಗೆ ಮರಳುವಾಗ ತನ್ನ ಮೂಲ ಎಸಿ ಮೆಕ್ಯಾನಿಕ್ ಕೆಲಸವನ್ನು ನಿರ್ವಹಿಸುತ್ತಿದ್ದರು. ಇತ್ತೀಚೆಗೆ ಊರಿಗೆ ಬಂದಿದ್ದ ಅವರು ಸಂಬಂಧಿಯೋರ್ವರಿಗೆ ಎಸಿ ಮೆಕ್ಯಾನಿಕ್ ತರಬೇತಿ ನೀಡುವ ಸಲುವಾಗಿ ಬೆಂಗಳೂರಿಗೆ ತೆರಳಿದ್ದರು. ಅಲ್ಲಿ ಬಹುಮಹಡಿ ಕಟ್ಟಡದಲ್ಲಿ ಎಸಿ ಜೋಡಣೆ ನಡೆಸುವ ವೇಳೆ ಆಯತಪ್ಪಿ ಕೆಳಕ್ಕೆ ಬಿದ್ದು ಗಂಭೀರ ಗಾಯಗೊಂಡಿದ್ದರು.
ಗಾಯಾಳು ಹರ್ಷಿತ್ ಅವರನ್ನ ತಕ್ಷಣವೇ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಂತಾಜನಕ ಸ್ಥಿತಿಯಲ್ಲಿದ್ದ ಅವರನ್ನು ಮಾ.7 ರಂದು ಮಂಗಳೂರಿನ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆಂದು ಕರೆತರುವ ಸಂದರ್ಭದಲ್ಲಿ ದಾರಿಮಧ್ಯೆ ಸಾವನ್ನಪ್ಪಿದ್ದಾರೆ.
ಮೃತ ಹರ್ಷಿತ್ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಇಂದು ಬೆಳಗ್ಗೆ ನಡೆದಿದೆ. ಹರ್ಷಿತ್ ತಂದೆ, ತಾಯಿ, ಪತ್ನಿ, ಸಹೋದರ ಹಾಗೂ ಎರಡು ವರ್ಷದ ಪುಟ್ಟ ಹೆಣ್ಣು ಮಗುವನ್ನು ಅಗಲಿದ್ದಾರೆ. ತಲಪಾಡಿ ಭಾಗದಲ್ಲಿ ಹಲವು ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿದ್ದ ಹರ್ಷಿತ್ ಅವರು ಭಜನಾ ಮಂದಿರ ಹಾಗೂ ದೇವಸ್ಥಾನಗಳ ಸೇವಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿದ್ದರು. ಹರ್ಷಿತ್ ಅವರ ಅಂತ್ಯಕ್ರಿಯೆಯಲ್ಲಿ ನೂರಾರು ಮಂದಿ ಮುಸ್ಲಿಂ ಬಾಂಧವರು ಕೂಡ ಭಾಗವಹಿಸಿ ಸಂತಾಪ ವ್ಯಕ್ತಪಡಿಸಿದ್ದಾರೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm