ಬ್ರೇಕಿಂಗ್ ನ್ಯೂಸ್
17-03-26 05:46 pm HK News Staffer ಕರಾವಳಿ
ಮಂಗಳೂರು, ಮಾರ್ಚ್ 17: ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ (ಹೆನ್ರಿ ಮೆಂಡೋನ್ಸಾ) ಅವರಿಗೆ 2025ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ. ಇದು ಅವರ ಸಾಹಿತ್ಯ ವಿಮರ್ಶೆ ಕೃತಿಯಾದ ಕೊಂಕಣಿ ಕಾವ್ಯಂ: ರುಪಾಂ ಆನಿ ರೂಪಕಾಂ (2021)ಗೆ ನೀಡಲಾಗಿದೆ.
ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಭಾರತ ಸರ್ಕಾರ ಸಾಹಿತ್ಯಕ್ಕಾಗಿ ನೀಡುವ ದೇಶದ ಅತ್ಯುನ್ನತ ಪ್ರಶಸ್ತಿಯಾಗಿದ್ದು, ಪ್ರತೀ ವರ್ಷ 22 ಅನುಸೂಚಿತ ಭಾಷೆಗಳ ಜೊತೆಗೆ ಇಂಗ್ಲಿಷ್ ಮತ್ತು ರಾಜಸ್ಥಾನಿ ಸೇರಿ ಒಟ್ಟು 24 ಭಾಷೆಗಳ ಉತ್ಕೃಷ್ಟ ಕೃತಿಗಳನ್ನು ಆಯ್ದು ಈ ಪುರಸ್ಕಾರ ನೀಡಲಾಗುತ್ತದೆ.
ಕೊಂಕಣಿ ಭಾಷೆಗೆ 1975ರಲ್ಲಿ ಸಾಹಿತ್ಯ ಅಕಾಡೆಮಿಯಿಂದ ಮಾನ್ಯತೆ ದೊರಕಿತ್ತು. 1977ರಿಂದ ಸಾಹಿತ್ಯ ಅಕಾಡೆಮಿ ಕೊಂಕಣಿ ಭಾಷೆಯ ಕೃತಿಗಳಿಗೂ ಪ್ರಶಸ್ತಿ ನೀಡುತ್ತಾ ಬಂದಿದ್ದು, ಈ ಹಿಂದೆ ಮಂಗಳೂರಿನ ಚಾ. ಫ್ರಾ. ದೆಕೊಸ್ತಾ (1992) ಮತ್ತು ಮೆಲ್ವಿನ್ ರೊಡ್ರಿಗಸ್ (2011) ಕವನ ಸಂಕಲನಗಳಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಪಡೆದಿದ್ದರು. 2016ರಲ್ಲಿ ಎಡ್ರಿನ್ ಜೆ.ಎಫ್.ಡಿ. ಸೊಜಾ ಅವರು ಕಾದಂಬರಿಗಾಗಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಭಾಜನರಾಗಿದ್ದರು. ಎಚ್.ಎಂ. ಪೆರ್ನಾಲ್ ಅವರು ಈ ಪರಂಪರೆಯನ್ನು ಮುಂದುವರೆಸುತ್ತಿರುವ ಕರ್ನಾಟಕದ ನಾಲ್ಕನೇ ಕೊಂಕಣಿ ಸಾಹಿತಿಯಾಗಿದ್ದಾರೆ.
ಪೆರ್ನಾಲ್ ಅವರ ಕೊಂಕಣಿ ಕಾವ್ಯಂ: ರುಪಾಂ ಆನಿ ರೂಪಕಾಂ ಕೃತಿಯು ಸಾಹಿತ್ಯ ವಿಮರ್ಶೆ ವಿಭಾಗದಲ್ಲಿ ಪ್ರಶಸ್ತಿ ಪಡೆದ ಮೊದಲ ಕೊಂಕಣಿ ಕೃತಿ ಎಂಬ ಐತಿಹಾಸಿಕ ಮೈಲುಗಲ್ಲನ್ನು ಸ್ಥಾಪಿಸಿದೆ. ಈ ಕೃತಿಗೆ ಮೊದಲು 2021ರಲ್ಲಿ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯಿಂದ ಉತ್ತಮ ಪುಸ್ತಕ ಪ್ರಶಸ್ತಿ ಹಾಗೂ 2023ರಲ್ಲಿ ಗೋವಾ ಕೊಂಕಣಿ ಅಕಾಡೆಮಿಯಿಂದ ಉತ್ತಮ ಪುಸ್ತಕ ಪ್ರಶಸ್ತಿ ಲಭಿಸಿತ್ತು. ಈ ಪುಸ್ತಕಕ್ಕೆ ಜ್ಞಾನಪೀಠ ಪ್ರಶಸ್ತಿ ವಿಜೇತ ಕೊಂಕಣಿ ಸಾಹಿತಿ ದಾಮೋದರ್ ಮೌಜೋ ಅವರು ವಿಸ್ತ್ರತ ಮುನ್ನುಡಿ ಬರೆದಿದ್ದು, ಮಂಗಳೂರಿನ ಕವಿತಾ ಪಬ್ಲಿಕೇಷನ್ಸ್ ಪುಸ್ತಕವನ್ನು ಪ್ರಕಟಿಸಿದೆ.
ಉಡುಪಿ ಜಿಲ್ಲೆಯ ಪೆರ್ನಾಲ್‌ನಲ್ಲಿ ಹುಟ್ಟಿ, ಶಿರ್ವದ ಹಿಂದೂ ಜೂನಿಯರ್ ಕಾಲೇಜು ಹಾಗೂ ಎಂ.ಎಸ್.ಆರ್.ಎಸ್. ಕಾಲೇಜಿನಲ್ಲಿ ಪದವಿ ಶಿಕ್ಷಣ ಪಡೆದು, ಮುಂಬೈಯಲ್ಲಿ ಸ್ನಾತಕೋತ್ತರ ಶಿಕ್ಷಣ ಪಡೆದಿರುವ ಹೆನ್ರಿ ಮೆಂಡೋನ್ಸಾ ವೃತ್ತಿಯಲ್ಲಿ ಕಮರ್ಷಿಯಲ್ ಅಕೌಂಟೆಂಟ್ ಆಗಿದ್ದಾರೆ. ಕನ್ನಡದಲ್ಲಿ ತರಂಗ, ಸಂಕ್ರಮಣ, ಶೂದ್ರ ಮುಂತಾದ ಪತ್ರಿಕೆಗಳ ಮೂಲಕ ಬರವಣಿಗೆ ಆರಂಭಿಸಿದ ಅವರು 1980ರ ದಶಕದ ಆರಂಭದಲ್ಲಿ ಯುವಕ್ ಮಾಸಪತ್ರಿಕೆಯಲ್ಲಿ ವ್ಯಂಗ್ಯಚಿತ್ರಕಾರರಾಗಿ ಕೊಂಕಣಿ ಸಾಹಿತ್ಯ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡಿದರು. ಪ್ರಸ್ತುತ ಕಥೆಗಾರ, ಕವಿ, ವಿಮರ್ಶಕ, ಸಂಪಾದಕ ಹಾಗೂ ಪ್ರಕಾಶಕರಾಗಿ ತಮ್ಮದೇ ಛಾಪು ಮೂಡಿಸಿದ್ದಾರೆ.
ಈವರೆಗೆ ಪೆರ್ನಾಲ್ ಅವರ ನಾಲ್ಕು ಕವನ ಸಂಕಲನಗಳು ಚಲ್ಯಾಂಕ್ ಚತ್ರಾಯ್ (1999), ಕಯ್ದಾಚೊ ಕವಿತಾ (2004), ಭಾಮುಣಾಂಚೆಂ ಚೆಡುಂ (2006) ಮತ್ತು ಜನೆಲ್ (2025), ಎರಡು ಕಥಾ ಸಂಕಲನಗಳು – ದೆವಾಕ್ ಸೊಡುಲ್ಲೊ ಪಾಡೊ (2002) ಮತ್ತು ಬೀಗ್ ಆನಿ ಬಿಗಾತ್ (2016), ಹಾಗೂ ಪ್ರಶಸ್ತಿ ವಿಜೇತ ಸಾಹಿತ್ಯ ವಿಮರ್ಶೆಯ ಕೃತಿ ಕೊಂಕಣಿ ಕಾವ್ಯಂ: ರುಪಾಂ ಆನಿ ರೂಪಕಾಂ (2021) ಪ್ರಕಟವಾಗಿವೆ.
850ಕ್ಕೂ ಹೆಚ್ಚು ಕವಿತೆಗಳು, 100ಕ್ಕೂ ಹೆಚ್ಚು ಕಥೆಗಳು ಹಾಗೂ 2,000ಕ್ಕೂ ಹೆಚ್ಚು ಲೇಖನಗಳನ್ನು ಬರೆದಿರುವ ಪೆರ್ನಾಲ್ ಅವರು ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮಗಳ ಮೂಲಕ ಕೊಂಕಣಿ ಸಾಹಿತ್ಯವನ್ನು ಪೋಷಿಸುತ್ತಾ ಬಂದಿದ್ದಾರೆ. 2012ರಿಂದ ಉದಯೋನ್ಮುಖ ಬರಹಗಾರರನ್ನು ಗುರುತಿಸಿ ಪ್ರತೀ ವರ್ಷ ಅಬುಧಾಬಿಯ ಉದ್ಯಮಿ ಹಾಗೂ ದಾನಿ ಲಿಯೋ ರೊಡ್ರಿಗಸ್ ಕುಟುಂಬದ ದತ್ತಿಯಾಗಿ ಕಿಟಾಳ್ ಯುವ ಪುರಸ್ಕಾರವನ್ನು ನೀಡುತ್ತಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm