ಬ್ರೇಕಿಂಗ್ ನ್ಯೂಸ್
18-03-26 09:41 am HK News Staffer ಕರಾವಳಿ
ಮಂಗಳೂರು, ಮಾರ್ಚ್ 18: ನಗರದ ಎಸ್ಸಿಎಸ್ ಆಸ್ಪತ್ರೆ ಯಲ್ಲಿ ಹೆರಿಗೆ ವೇಳೆ ನವಜಾತ ಶಿಶು ಸಾವನ್ನಪ್ಪಿದ ಪ್ರಕರಣ ಬೆಳಕಿಗೆ ಬಂದಿದೆ. ಮಗುವಿನ ತಲೆಯ ಮೇಲೆ ಗಾಯ ಕಂಡುಬಂದ ಹಿನ್ನೆಲೆಯಲ್ಲಿ ಕುಟುಂಬಸ್ಥರು ವೈದ್ಯರ ನಿರ್ಲಕ್ಷ್ಯ ಆರೋಪ ಮಾಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಕೋಡಿಕಲ್ ನಿವಾಸಿ ಅನಿಲ್ ಅವರ ಪತ್ನಿ ಪ್ರತೀಕ್ಷಾ ಅವರನ್ನು ಸೋಮವಾರ ಮಧ್ಯಾಹ್ನ ಹೆರಿಗೆಗಾಗಿ ಎಸ್ಸಿಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಗಳವಾರ ಬೆಳಿಗ್ಗೆ 2 ಗಂಟೆ ಸುಮಾರಿಗೆ ಮಗುವಿಗೆ ಜನ್ಮ ನೀಡಿದ್ದಾರೆ. ಆರಂಭದಲ್ಲಿ ಹೆರಿಗೆ ಸುಗಮವಾಗಿ ನಡೆದಿದ್ದು, ಮಗು ಆರೋಗ್ಯವಾಗಿಯೇ ಇದೆ ಎಂದು ಆಸ್ಪತ್ರೆ ಸಿಬ್ಬಂದಿ ತಿಳಿಸಿದ್ದಾಗಿ ಕುಟುಂಬಸ್ಥರು ತಿಳಿಸಿದ್ದಾರೆ.
ಆದರೆ ಬಳಿಕ ಮಗುವಿನ ಆರೋಗ್ಯ ಹದಗೆಟ್ಟಿದ್ದಾಗಿ ಹೇಳಿ, ಮರುದಿನ ಬೆಳಿಗ್ಗೆ ಮಗು ಸಾವನ್ನಪ್ಪಿದ ಬಗ್ಗೆ ಆಸ್ಪತ್ರೆ ಸಿಬ್ಬಂದಿ ಮಾಹಿತಿ ನೀಡಿದ್ದಾರೆ. ಈ ಅಚಾನಕ್ ಬೆಳವಣಿಗೆಯಿಂದ ಕುಟುಂಬಸ್ಥರು ಕಂಗಾಲಾಗಿದ್ದಾರೆ.
ಮಗುವಿನ ತಲೆಯ ಮೇಲೆ ಗಾಯ ಕಂಡುಬಂದ ಹಿನ್ನೆಲೆಯಲ್ಲಿ, ಹೆರಿಗೆ ವೇಳೆ ಬಳಸಲಾದ ವ್ಯಾಕ್ಯೂಮ್ ಉಪಕರಣದಿಂದ ಹೆಚ್ಚು ಒತ್ತಡ ಬಿದ್ದಿರುವ ಸಾಧ್ಯತೆ ಇದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಘಟನೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಕುಟುಂಬಸ್ಥರು ಸಂಬಂಧಿಸಿದ ವೈದ್ಯಕೀಯ ಸಿಬ್ಬಂದಿ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಮಾಹಿತಿ ಪಡೆದ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಈ ಘಟನೆ ಖಾಸಗಿ ಆಸ್ಪತ್ರೆಗಳಲ್ಲಿನ ಚಿಕಿತ್ಸೆ ಗುಣಮಟ್ಟ ಮತ್ತು ರೋಗಿಗಳ ಸುರಕ್ಷತೆ ಕುರಿತು ಮತ್ತೊಮ್ಮೆ ಚರ್ಚೆಗೆ ಕಾರಣವಾಗಿದೆ.
A tragic incident has been reported at SCS Hospital in the city, where a newborn baby died during delivery under suspicious circumstances. The family has alleged medical negligence after noticing an injury on the baby’s head. Police have registered a case and initiated an investigation.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm