ಬ್ರೇಕಿಂಗ್ ನ್ಯೂಸ್
19-03-26 05:27 pm HK News Staffer ಕರಾವಳಿ
ಬೆಂಗಳೂರು, ಮಾರ್ಚ್ 19 : ಧರ್ಮಸ್ಥಳದಲ್ಲಿ 1990ರಿಂದ 2021ರ ವರೆಗೆ ನಡೆದಿದೆ ಎನ್ನಲಾದ 74 ಅಸಹಜ ಸಾವುಗಳ ಪ್ರಕರಣ ಸಂಬಂಧಿಸಿ ಪೋಸ್ಟ್ ಮಾರ್ಟಂ ವರದಿ ಸೇರಿದಂತೆ ಸಮಗ್ರ ತನಿಖಾ ವರದಿ ಸಲ್ಲಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿರುವ ತಾಯಿ ಕುಸುಮಾವತಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಡಿ ಹಳೆ ಪ್ರಕರಣಗಳಲ್ಲಿ ಹೊಸತಾಗಿ ಎಫ್ಐಆರ್ ದಾಖಲಿಸಿ ತನಿಖೆ ನಡೆಸಬೇಕೆಂಬ ದೂರಿಗೆ ಸಂಬಂಧಿಸಿ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಅರ್ಜಿದಾರರ ಪರ ವಕೀಲ ಎಸ್. ಬಾಲನ್, “74 ಅಸಹಜ ಸಾವುಗಳ ಪ್ರಕರಣಗಳಲ್ಲಿ ಸರಿಯಾದ ಪಂಚನಾಮೆ ನಡೆಸಿಲ್ಲ. ಮರಣೋತ್ತರ ಪರೀಕ್ಷೆ ಮಾಡದೇ ಶವ ಸಂಸ್ಕಾರ ಮಾಡಲಾಗಿದೆ. ಲಾಡ್ಜ್ ನಲ್ಲಿ ಸಿಕ್ಕಿದ್ದ ಶವಗಳ ಬಗ್ಗೆ ವಾರೀಸುದಾರರ ತಿಳಿಯುವ ಯತ್ನ ಮಾಡಿಲ್ಲ. ಈ ಎಲ್ಲ ಪ್ರಕರಣಗಳಲ್ಲಿ ಹೊಸದಾಗಿ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸಬೇಕು” ಎಂದು ವಾದ ಮಂಡಿಸಿದರು.
ಇದಕ್ಕೆ ಪ್ರತಿಯಾಗಿ ಅಡ್ವೊಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ, “ಈ ಪ್ರಕರಣಗಳು ಹಳೆಯವು. ಈಗಾಗಲೇ ಯುಡಿಆರ್ ದಾಖಲಾಗಿದೆ. ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು” ಎಂದು ತಿಳಿಸಿದರು. ವಿಚಾರಣೆ ವೇಳೆ ಹಲವು ಪ್ರಕರಣಗಳಲ್ಲಿ ಮಹಿಳೆಯರು ನಾಪತ್ತೆಯಾಗಿದ್ದು, ತನಿಖೆ ನಡೆದಿಲ್ಲ ಎಂಬ ವಿಚಾರವನ್ನೂ ಕೋರ್ಟ್ ಗಮನಕ್ಕೆ ತಂದರು. ಶವಗಳ ಸಂಸ್ಕಾರ ಪ್ರಕ್ರಿಯೆಯಲ್ಲೂ ಗಂಭೀರ ಲೋಪಗಳಿರುವುದಾಗಿ ಅರ್ಜಿದಾರ ವಕೀಲರು ಆಕ್ಷೇಪಿಸಿದರು.
ಅನಾಥ ಶವ ಪತ್ತೆಗೆ ಯಾವ ಕ್ರಮ ಕೈಗೊಂಡಿದ್ದೀರಿ, ಎಲ್ಲ ಪ್ರಕರಣಗಳಲ್ಲಿ ಪೋಸ್ಟ್ ಮಾರ್ಟಂ ವರದಿ ಇರಿಸಿದ್ದೀರಾ ಎಂದು ಕೇಳಿದ ನ್ಯಾಯಾಧೀಶರು, ಎಲ್ಲ ಪ್ರಕರಣಗಳ ದಾಖಲೆಗಳನ್ನು ಸಲ್ಲಿಸಿ ಎಂದು ರಾಜ್ಯ ಸರ್ಕಾರಕ್ಕೆ ತಾಕೀತು ಮಾಡಿದರು.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm