ಬ್ರೇಕಿಂಗ್ ನ್ಯೂಸ್
20-03-26 03:39 pm HK News Staffer ಕರಾವಳಿ
ಪುತ್ತೂರು, ಮಾರ್ಚ್ 20: ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದ ಕಟ್ಟತ್ತಾರು ಸಮೀಪದ ಗೋಳ್ತಿಲ ಎಂಬಲ್ಲಿ ಪತಿ- ಪತ್ನಿಯ ಜಗಳ ಕೊಲೆಯಲ್ಲಿ ಕೊನೆಯಾಗಿದೆ. ಕೌಟುಂಬಿಕ ಕಲಹ ನಡೆದು ಪತಿಯೇ ಪತ್ನಿಯನ್ನು ಹತ್ಯೆಗೈದು, ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶುಕ್ರವಾರ ನಡೆದಿದೆ.
ಮೃತಪಟ್ಟ ಮಹಿಳೆಯನ್ನು ಕುಮಾರಮಂಗಲ ಮೂಲದ ಸಾವಿತ್ರಿ (42) ಎಂದು ಗುರುತಿಸಲಾಗಿದೆ. ಆರೋಪಿ ಪತಿಯನ್ನು ಎಮ್ಮೆಟ್ಟಿ ನಿವಾಸಿ ಪುರುಷೋತ್ತಮ ಅಲಿಯಾಸ್ ಬೈರಪ್ಪ ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ ದಂಪತಿ ನಡುವಿನ ಜಗಳ ವಿಕೋಪಕ್ಕೆ ತಿರುಗಿದ್ದು, ಈ ಸಂದರ್ಭದಲ್ಲಿ ಪುರುಷೋತ್ತಮ ಕತ್ತಿಯನ್ನು ತೆಗೆದು ಪತ್ನಿಗೆ ಕಡಿದು ಹತ್ಯೆ ಮಾಡಿದ್ದಾನೆ.
ಕೃತ್ಯದಿಂದ ಬೇಸತ್ತು ಅದೇ ಕತ್ತಿಯಲ್ಲಿ ತನ್ನ ಕುತ್ತಿಗೆಗೂ ಕಡಿದು ಆತ್ಮಹತ್ಯೆಗೆ ಯತ್ನಿಸಿದ್ದು, ರಕ್ತದ ಮಡುವಿನಲ್ಲಿ ಬಿದ್ದು ಗಂಭೀರ ಸ್ಥಿತಿಗೊಳಗಾಗಿದ್ದ ಆತನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ಪುತ್ತೂರು ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಮೃತದೇಹವನ್ನು ವಶಕ್ಕೆ ಪಡೆಯಲಾಗಿದ್ದು, ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಘಟನೆಗೆ ನಿಖರ ಕಾರಣವೇನು ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:00 pm
HK News Staffer
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm