ಬ್ರೇಕಿಂಗ್ ನ್ಯೂಸ್
21-03-26 03:22 pm HK News Staffer ಕರಾವಳಿ
ಉಡುಪಿ, ಮಾರ್ಚ್ 21: ಯೂಟ್ಯೂಬ್ ವೀಡಿಯೋ ಮತ್ತು ವಾಟ್ಸಾಪ್ ಗ್ರೂಪ್‌ಗಳ ಮೂಲಕ ಆನ್‌ಲೈನ್ ಟ್ರೇಡಿಂಗ್ ಆಮಿಷವೊಡ್ಡಿ ಉಡುಪಿಯ ಮಹಿಳೆಯೊಬ್ಬರಿಗೆ ಬರೋಬ್ಬರಿ ₹11.75 ಲಕ್ಷ ರೂಪಾಯಿ ವಂಚಿಸಿರುವ ಘಟನೆ ನಡೆದಿದ್ದು ಉಡುಪಿ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಂತ್ರಸ್ತ ಮಹಿಳೆ ಯೂಟ್ಯೂಬ್‌ನಲ್ಲಿ ‘Amar Ujala Bonus’ ಎಂಬ ಟ್ರೇಡಿಂಗ್ ವೀಡಿಯೋ ನೋಡಿ ಅದರಲ್ಲಿ ಹೇಳಿದ್ದ ಆ್ಯಪ್ ಡೌನ್‌ಲೋಡ್ ಮಾಡಿಕೊಂಡಿದ್ದರು. 15 ದಿನಗಳ ನಂತರ ಅವರನ್ನು ‘A20 Stock Market Profit Guide’ ಎಂಬ ವಾಟ್ಸಾಪ್ ಗ್ರೂಪಿಗೆ ಸೇರಿಸಲಾಗಿತ್ತು. ಅದರಲ್ಲಿ ಟ್ರೇಡಿಂಗ್ ತರಗತಿಗಳನ್ನು ನಡೆಸಿ, ನಂತರ ‘SALT CAP’ ಎಂಬ ಆ್ಯಪ್ ಡೌನ್‌ಲೋಡ್ ಮಾಡಿಸಿ ಕೆವೈಸಿ ವಿವರಗಳನ್ನು ಪಡೆಯಲಾಗಿತ್ತು.
ಆರೋಪಿಗಳ ಸೂಚನೆಯಂತೆ ಮಹಿಳೆ ಮಾರ್ಚ್ 6ರಿಂದ 14ರ ಅವಧಿಯಲ್ಲಿ ವಿವಿಧ ಬ್ಯಾಂಕ್ ಖಾತೆಗಳಿಗೆ ಒಟ್ಟು ₹ 11,75,000 ಹಣವನ್ನು ವರ್ಗಾವಣೆ ಮಾಡಿದ್ದರು. ಆದರೆ, ವರ್ಗಾವಣೆ ಮಾಡಿದ ಅಸಲು ಹಣವಾಗಲಿ ಅಥವಾ ಲಾಭಾಂಶವಾಗಲಿ ಮರಳಿ ನೀಡದೆ ಆರೋಪಿಗಳು ವಂಚಿಸಿದ್ದಾರೆ. ಈ ಬಗ್ಗೆ ಐಟಿ ಆಕ್ಟ್ ಹಾಗೂ ಬಿಎನ್‌ಎಸ್ (BNS) ಕಾಯ್ದೆಯಡಿ ಪ್ರಕರಣ ದಾಖಲಿಸಿರುವ ಸೆನ್ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ನಕಲಿ ಆ್ಯಪ್ ಗಳನ್ನು ಸೃಷ್ಟಿಸಿ ಅದರಲ್ಲಿ ಗ್ರಾಹಕರ ಖಾತೆಗಳೆಂದು ತೋರಿಸಿ ವಂಚಿಸುವ ಜಾಲ ಇದಾಗಿದ್ದು ಇದನ್ನೇ ನೈಜವೆಂದು ನಂಬಿ ವಂಚಕರು ಸೂಚಿಸಿದ ಖಾತೆಗಳಿಗೆ ಹಣ ಹಾಕಿ ಮೋಸ ಹೋಗುತ್ತಿದ್ದಾರೆ.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am