ಬ್ರೇಕಿಂಗ್ ನ್ಯೂಸ್
23-03-26 02:24 pm HK News Staffer ಕರಾವಳಿ
ಬೆಂಗಳೂರು, ಮಾರ್ಚ್ 23: ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿರುವ ಮೂಡುಬಿದ್ರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ವಿರುದ್ಧ ಕೇಳಿಬಂದಿರುವ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಒಪ್ಪಿಸಿದೆ. ಸಂತ್ರಸ್ತ ಮಹಿಳೆಯರು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರ ನೇತೃತ್ವದಲ್ಲಿ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರನ್ನು ಭೇಟಿಯಾಗಿ ತಮ್ಮ ನೋವನ್ನು ಹಂಚಿಕೊಂಡಿದ್ದಾರೆ.
ಈ ಸಂದರ್ಭದಲ್ಲಿ ಸಂತ್ರಸ್ತೆಯರ ಅಹವಾಲು ಆಲಿಸಿದ ಗೃಹ ಸಚಿವ ಪರಮೇಶ್ವರ್ ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ, ತನಿಖೆಯನ್ನು ಸಿಐಡಿಗೆ ವಹಿಸುವುದಾಗಿ ತಿಳಿಸಿದ್ದಾರೆ. ಬಳಿಕ ಮಾಧ್ಯಮಕ್ಕೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, "ಮೂಡುಬಿದ್ರೆ ಘಟನೆಯ ಕುರಿತು ಸಂತ್ರಸ್ತೆಯರು ನೀಡಿದ ಮಾಹಿತಿ ಆಧಾರದ ಮೇಲೆ ಸತ್ಯಾಸತ್ಯತೆ ತಿಳಿಯಬೇಕು. ಈ ಕಾರಣದಿಂದಲೇ ಪ್ರಕರಣವನ್ನು ಸಿಐಡಿ ತನಿಖೆಗೆ ವರ್ಗಾಯಿಸಲು ಡಿಜಿ-ಐಜಿಪಿ ಅವರಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.
ಈಗಾಗಲೇ ಪ್ರಕರಣದಲ್ಲಿ ಕರ್ತವ್ಯ ಲೋಪದ ಆರೋಪದ ಮೇಲೆ ಸಂಬಂಧಪಟ್ಟ ಇನ್ಸ್ ಪೆಕ್ಟರ್ ಅವರನ್ನು ಅಮಾನತುಗೊಳಿಸಲಾಗಿದೆ. 'ತನಿಖೆಯ ವರದಿಯನ್ನು ತುರ್ತಾಗಿ ನೀಡುವಂತೆ ಸೂಚಿಸಿದ್ದೇವೆ. ಕೃತ್ಯದಲ್ಲಿ ಇನ್ನೂ ಯಾರ್ಯಾರು ಭಾಗಿಯಾಗಿದ್ದಾರೆ ಎಂಬುದು ಸಿಐಡಿ ತನಿಖೆಯಿಂದ ಸಂಪೂರ್ಣವಾಗಿ ಹೊರಬರಲಿದೆ ಎಂದು ಪರಮೇಶ್ವರ್ ವಿಶ್ವಾಸ ವ್ಯಕ್ತಪಡಿಸಿದರು.
ಮಹಿಳಾ ಆಯೋಗದ ಮಧ್ಯಸ್ಥಿಕೆ:
ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರು ಸಂತ್ರಸ್ತೆಯರನ್ನು ಗೃಹ ಸಚಿವರ ಬಳಿ ಕರೆದುಕೊಂಡು ಹೋಗಿದ್ದರು. ಸಂತ್ರಸ್ತೆಯರು ತಮ್ಮ ನೋವು ಮತ್ತು ಘಟನೆಯ ತೀವ್ರತೆಯನ್ನು ನನ್ನ ಮುಂದೆ ತೆರೆದಿಟ್ಟಿದ್ದರು. ಇದನ್ನು ನೇರವಾಗಿ ಗೃಹ ಸಚಿವರ ಗಮನಕ್ಕೆ ತರುವುದೇ ಸೂಕ್ತ ಎಂದು ನನಗೆ ಅನಿಸಿತು. ಅವರಿಗೆ ನ್ಯಾಯ ಸಿಗುವ ಏಕೈಕ ಉದ್ದೇಶದಿಂದ ಇಂದು ಇಲ್ಲಿಗೆ ಕರೆದುಕೊಂಡು ಬಂದಿದ್ದೇನೆ' ಎಂದು ಚೌಧರಿ ಹೇಳಿದರು.
"ಗೃಹ ಸಚಿವರು ಸಂತ್ರಸ್ತೆಯವರ ಮಾತನ್ನು ಶ್ರದ್ಧೆಯಿಂದ ಕೇಳಿಕೊಂಡು, ಪ್ರಕರಣವನ್ನು ತಕ್ಷಣ ಸಿಐಡಿಗೆ ವರ್ಗಾಯಿಸಲು ಸೂಚಿಸಿದ್ದಾರೆ. ಸಂತ್ರಸ್ತೆಯರು ನೀಡಿದ ಸಾಕ್ಷ್ಯಗಳು ತನಿಖೆಗೆ ಪೂರಕವಾಗಿವೆ. ಸತ್ಯಾಸತ್ಯತೆ ಬೇಗವೇ ಬಹಿರಂಗವಾಗಲಿದೆ," ಎಂದರು. ಸರ್ಕಾರವು ಪೊಲೀಸ್ ಇಲಾಖೆ ಮೇಲೆ ಸಾರ್ವಜನಿಕ ನಂಬಿಕೆ ಉಳಿಸಿಕೊಳ್ಳಲು ಕಠಿಣ ಕ್ರಮ ಕೈಗೊಂಡಿದ್ದು, ಸಂತ್ರಸ್ತೆಯರಿಗೆ ಸೂಕ್ತ ಭದ್ರತೆ ಮತ್ತು ನ್ಯಾಯ ಒದಗಿಸುವಂತೆ ಭರವಸೆ ನೀಡಿದೆ.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am