ಬ್ರೇಕಿಂಗ್ ನ್ಯೂಸ್
26-03-26 10:51 pm HK News Staffer ಕರಾವಳಿ
ಮಂಗಳೂರು, ಮಾರ್ಚ್ 26: ಗುರುಪುರದ ಮಾಣಿಬೆಟ್ಟುವಿನಲ್ಲಿ ಏ.4ರ ಶನಿವಾರ 3ನೇ ವರ್ಷದ ಹೊನಲು ಬೆಳಕಿನ ಮೂಳೂರು-ಅಡ್ಡೂರು ಜೋಡುಕರೆ ಕಂಬಳವನ್ನು ವಿಜೃಂಭಣೆಯಿಂದ ಆಯೋಜಿಸಲಾಗಿದೆ ಎಂದು ಕಂಬಳ ಸಮಿತಿ ಅಧ್ಯಕ್ಷ ಇನಾಯತ್ ಅಲಿ ತಿಳಿಸಿದ್ದಾರೆ.
ನಗರದ ಖಾಸಗಿ ಹೋಟೆಲ್‌ನಲ್ಲಿ ಗುರುವಾರ ಕಂಬಳದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿ, ಕಂಬಳ ಅನ್ನುವಂತಹುದು ಕೇವಲ ಒಂದು ಕ್ರೀಡೆಯಲ್ಲ, ಇದು ಈ ನೆಲೆದ ಸಂಸ್ಕೃತಿ, ಅಸ್ಮಿತೆಯಾಗಿದೆ. ಗುರುಪುರ ಕಂಬಳೋತ್ಸವವನ್ನು ಜಾತಿ, ಮತ, ಪಕ್ಷ ಭೇದ ಮರೆತು ಎಲ್ಲರೂ ಒಂದಾಗಿ ಆಚರಿಸುವ ಮೂಲಕ ನಮ್ಮ ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವುದು ನಮ್ಮ ಮುಖ್ಯ ಉದ್ದೇಶವಾಗಿದೆ. ಆ ನಿಟ್ಟಿನಲ್ಲಿ ಪೂರ್ವ ಸಿದ್ಧತೆಗಳು ಭರದಿಂದ ನಡೆಯುತ್ತಿದೆ ಎಂದರು.
ಏ.4ರಂದು ಬೆಳಗ್ಗೆ 8.30ಕ್ಕೆ ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಅವರು ಕಂಬಳವನ್ನು ಉದ್ಘಾಟಿಸಲಿದ್ದಾರೆ. ಸಂಜೆ 6.30ಕ್ಕೆ ನಡೆಯುವ ಸಭಾ ಕಾರ್ಯಕ್ರಮವನ್ನು ಮಾಜಿ ಸಂಸದ, ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಉದ್ಘಾಟಿಸಲಿದ್ದಾರೆ. ವಿಧಾನಸಭಾ ಅಧ್ಯಕ್ಷ ಯು.ಟಿ. ಖಾದರ್, ಸಚಿವ ದಿನೇಶ್ ಗುಂಡೂರಾವ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದರು.
ಸ್ಪರ್ಧಾಳುಗಳಿಗೆ ವಿಶೇಷ ಗೌರವ:
ಈ ಬಾರಿಯ ಕಂಬಳದಲ್ಲಿ ಭಾಗವಹಿಸುವ ಪ್ರತಿಯೊಂದು ಕೋಣಗಳ ಮಾಲೀಕರಿಗೆ ಬೆಳ್ಳಿಯ ನಾಣ್ಯ ಹಾಗೂ 30 ಕೆಜಿ ಹುರುಳಿಯನ್ನು ವಿತರಿಸಲಾಗುವುದು. ಅಲ್ಲದೆ, ಕನೆಹಲಗೆ ವಿಭಾಗದಲ್ಲಿ ನಿಗದಿತ ಎತ್ತರಕ್ಕೆ ನೀರು ಹಾಯಿಸದ ಎಲ್ಲಾ ಕೋಣಗಳಿಗೆ ಚಿನ್ನದ ಪದಕ ನೀಡಿ ಗೌರವಿಸಲಾಗುವುದು ಎಂದರು.
ಕಂಬಳ ಅಕಾಡೆಮಿ ಸಂಚಾಲಕರಾದ ಗುಣಪಾಲ ಕಡಂಬ, ರಾಜ್ಯ ಕಂಬಳ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ಲೋಕೇಶ್ ಶೆಟ್ಟಿ ಮುಚ್ಚೂರು ಮಾತನಾಡಿದರು. ಕಂಬಳ ಸಮಿತಿ ಗೌರವಾಧ್ಯಕ್ಷ ಪದ್ಮನಾಭ ಕೋಟ್ಯಾನ್, ಕಾರ್ಯಾಧ್ಯಕ್ಷ ಜಗದೀಶ್ ಶೆಟ್ಟಿ ಮಾಣಿಬೆಟ್ಟುಗುತ್ತು, ಪ್ರಧಾನ ಕಾರ್ಯದರ್ಶಿ ಯಶವಂತ್ ಕುಮಾರ್ ಶೆಟ್ಟಿ ಬೆಳ್ಳೂರುಗುತ್ತು, ವ್ಯವಸ್ಥಾಪಕ ವಿನಯ ಕುಮಾರ್ ಶೆಟ್ಟಿ ಮಾಣಿಬೆಟ್ಟುಗುತ್ತು, ಕೆಪಿಸಿಸಿ ಸದಸ್ಯ, ಸಮಿತಿ ಉಪಾಧ್ಯಕ್ಷ ಆರ್.ಕೆ. ಪೃಥ್ವಿರಾಜ್, ಮಾಜಿ ಉಪ ಮೇಯರ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪುರುಷೋತ್ತಮ ಚಿತ್ರಾಪುರ, ಗಿರೀಶ್ ಆಳ್ವ, ಭಾಷಾ ಗುರುಪುರ, ಜಿ. ಮೊಹಮ್ಮದ್, ಪದ್ಮನಾಭ ಶೆಟ್ಟಿ, ಹರೀಶ್ ಭಂಡಾರಿ ಹಾಗೂ ಉಪಸ್ಥಿತರಿದ್ದರು.

ಮುಂದಿನ ದಸರಾದಲ್ಲಿ ಕಂಬಳೋತ್ಸವ:
2025ರ ಗುರುಪುರ ಕಂಬಳದಲ್ಲಿ ಭಾಗವಹಿಸಿದ್ದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕರಾವಳಿಯ ಜಾನಪದ ಕ್ರೀಡೆಗೆ ಮನಸೋತು, ಮೈಸೂರು ದಸರಾದಲ್ಲೂ ಕಂಬಳ ಆರಂಭಿಸುವ ಭರವಸೆ ನೀಡಿದ್ದರು. ತಾಂತ್ರಿಕ ಕಾರಣಗಳಿಂದ ಕಳೆದ ಬಾರಿ ಇದು ಸಾಧ್ಯವಾಗದಿದ್ದರೂ, ಮುಂದಿನ ದಸರಾ ಉತ್ಸವದಲ್ಲಿ ಕಂಬಳಕ್ಕೆ ಅವಕಾಶ ಕಲ್ಪಿಸುವ ಭರವಸೆಯನ್ನು ಅವರು ನೀಡಿದ್ದಾರೆ ಎಂದು ಇನಾಯತ್ ಅಲಿ ಹೇಳಿದರು.
ಕಂಬಳೋತ್ಸವದಲ್ಲಿ ಯಕ್ಷಗಾನ ಸಾಧಕರಿಗೆ ಸನ್ಮಾನ, ಫುಡ್ ಫೆಸ್ಟಿವಲ್, ಕೇರಳದ ಪ್ರಸಿದ್ಧ ಚೆಂಡೆವಾದನ ಮತ್ತು ಆಕರ್ಷಕ ಸುಡುಮದ್ದು ಪ್ರದರ್ಶನ ಕಂಬಳದ ಮೆರುಗು ಹೆಚ್ಚಿಸಲಿವೆ ಎಂದರು.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am