ಬ್ರೇಕಿಂಗ್ ನ್ಯೂಸ್
01-04-26 09:04 pm HK News Staffer ಕರಾವಳಿ
ಬೆಂಗಳೂರು, ಎಪ್ರಿಲ್ 1: ಅಮಾನತುಗೊಂಡ ಮೂಡುಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ವಿರುದ್ಧ ದಾಖಲಾಗಿರುವ ಅತ್ಯಾಚಾರ ಪ್ರಕರಣ ಭಾರಿ ಚರ್ಚೆಗೆ ಗ್ರಾಸವಾಗಿದ್ದು, ಪ್ರಕರಣ ರದ್ದುಪಡಿಸುವಂತೆ ಸಲ್ಲಿಸಿದ್ದ ಅರ್ಜಿಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಲು ನಿರಾಕರಿಸಿದೆ. ಇನ್ಸ್ಪೆಕ್ಟರ್ ತನ್ನ ಅಧಿಕಾರದ ದುರುಪಯೋಗ ಮಾಡಿಲ್ಲವೇ ಎಂದು ನ್ಯಾಯಾಲಯ ಗಂಭೀರ ಪ್ರಶ್ನೆ ಎತ್ತಿದ್ದು, ಅರ್ಜಿ ವಿಚಾರಣೆಯನ್ನು ಏಪ್ರಿಲ್ 6ಕ್ಕೆ ಮುಂದೂಡಿದೆ.
ಪ್ರಕರಣಕ್ಕೆ ಸಂಬಂಧಿಸಿ ಸಂದೇಶ್ ಪರ ವಕೀಲರು ನ್ಯಾಯಾಲಯದಲ್ಲಿ ವಾದ ಮಂಡಿಸಿ, ಮಹಿಳೆಯೊಂದಿಗೆ ಒಪ್ಪಿತ ಸಂಬಂಧವಿದ್ದು, ಅತ್ಯಾಚಾರ ಆರೋಪಕ್ಕೆ ಸ್ಪಷ್ಟವಾದ ಸಾಕ್ಷ್ಯಗಳಿಲ್ಲ ಎಂದು ತಿಳಿಸಿದರು. ಆದರೆ ಈ ವಾದವನ್ನು ತಳ್ಳಿ ಹಾಕಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ, ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸಿದರೆ ಅದು ಅಧಿಕಾರದ ದುರುಪಯೋಗವಲ್ಲವೇ ಎಂದು ಕಟುವಾಗಿ ಪ್ರಶ್ನಿಸಿತು.
ಶಿಕ್ಷಕಿ ನೀಡಿದ ದೂರಿನ ಆಧಾರದ ಮೇಲೆ ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣೆಯಲ್ಲಿ ಸಂದೇಶ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ 376(2)(a)(1), 376(2)(n), 384 ಹಾಗೂ 506 ಕಲಂಗಳಡಿ ಎಫ್ಐಆರ್ ದಾಖಲಾಗಿದೆ. ಈಗಾಗಲೇ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪಗಳು ಅವರ ವಿರುದ್ಧ ಕೇಳಿಬಂದಿದ್ದು, ಇತ್ತೀಚೆಗೆ ಇಬ್ಬರು ಮಹಿಳೆಯರು ಮಾಡಿದ್ದ ಆರೋಪಗಳು ಭಾರೀ ಚರ್ಚೆಗೆ ಕಾರಣವಾಗಿದ್ದವು. ಆದರೆ ಪ್ರಾಥಮಿಕ ತನಿಖೆಯಲ್ಲಿ ಅವು ಪ್ರಚೋದಿತ ಹಾಗೂ ಸುಳ್ಳು ಆರೋಪಗಳಾಗಿವೆ ಎಂಬ ಮಾಹಿತಿ ಹೊರಬಂದಿತ್ತು.
ಇದೀಗ ಶಿಕ್ಷಕಿಯೊಬ್ಬರು ನೀಡಿರುವ ದೂರಿನಿಂದ ಪ್ರಕರಣ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಂಡಿದೆ. ಬೆಳ್ತಂಗಡಿ ತಾಲೂಕಿನಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಆಗಿದ್ದ ಅವಧಿಯಲ್ಲಿ 2018ರಿಂದ 2023ರ ವರೆಗೆ ಮನೆಗೆ ಬಂದು ನಿರಂತರವಾಗಿ ಅತ್ಯಾಚಾರ ಎಸಗಿದ್ದಾರೆ ಎಂದು ಶಿಕ್ಷಕಿ ಆರೋಪಿಸಿದ್ದಾರೆ. ವಿವಿಧ ಪ್ರಕರಣಗಳ ಹೆಸರಿನಲ್ಲಿ ಬೆದರಿಕೆ ಹಾಕಿ, ಜೀವ ಭಯ ಹಾಗೂ ಕುಟುಂಬದ ಮಾನ ಹಾನಿಯಾಗುವ ಭೀತಿಯಿಂದ ಇಷ್ಟು ವರ್ಷ ಮೌನವಾಗಿದ್ದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಪ್ರಕರಣದ ಗಂಭೀರತೆಯನ್ನು ಗಮನಿಸಿದ ಹೈಕೋರ್ಟ್, ಬಂಧನದಿಂದ ಮಧ್ಯಂತರ ರಕ್ಷಣೆ ನೀಡಲು ನಿರಾಕರಿಸಿದ್ದು, ಮುಂದಿನ ವಿಚಾರಣೆಯಲ್ಲಿ ಪ್ರಕರಣದ ವಿವರಗಳನ್ನು ಪರಿಗಣಿಸಲು ನಿರ್ಧರಿಸಿದೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am