ಬ್ರೇಕಿಂಗ್ ನ್ಯೂಸ್
06-04-26 07:43 pm HK News Staffer ಕರಾವಳಿ
ಉಡುಪಿ, ಏಪ್ರಿಲ್ 06: 'ಮುಳುಗುವವನಿಗೆ ಹುಲ್ಲುಕಡ್ಡಿಯೂ ಆಸರೆ’ ಎಂಬ ಗಾದೆ ಮಾತಿಗೆ ಜ್ವಲಂತ ಉದಾಹರಣೆ ಆಗಬಲ್ಲ ಅಪರೂಪದ ಘಟನೆ ಉಡುಪಿ ಜಿಲ್ಲೆಯ ಕೊಡವೂರಿನಲ್ಲಿ ನಡೆದಿದೆ. ಬಾವಿಗೆ ಬಿದ್ದು ಮೂರು ದಿನಗಳಿಂದ ನರಳಾಡುತ್ತಿದ್ದ ವೃದ್ಧನ ಜೀವವನ್ನು ಗ್ಯಾಸ್ ಸಿಲಿಂಡರ್ ಎತ್ತಿಕೊಂಡು ಬಂದಿದ್ದ ಸಿಬಂದಿ OTP ಕಾರಣಕ್ಕೆ ಹುಡುಕಾಡಿ ರಕ್ಷಿಸಿದ ಅಚ್ಚರಿಯ ಘಟನೆ ನಡೆದಿದೆ.
ಕೊಡವೂರು ಪ್ರದೇಶದ ಕಂಬ್ಲಕಟ್ಟದ ಮನೆಯೊಂದರಲ್ಲಿ ಒಬ್ಬರೇ ವಾಸಿಸುತ್ತಿದ್ದ ಶ್ರೀನಿವಾಸ್ ಆಚಾರ್ಯ (62) ತೋಟಕ್ಕೆ ನೀರು ಹಾಯಿಸಲು ಹೋಗಿದ್ದ ವೇಳೆ ಬಾವಿಗೆ ಬಿದ್ದಿದ್ದರು. ಬಾವಿಯಲ್ಲಿ ಅಳವಡಿಸಿದ್ದ ಪಂಪ್‌ನಲ್ಲಿ ಕಸ ತುಂಬಿದ್ದರಿಂದ ಅದನ್ನು ಸ್ವಚ್ಛಗೊಳಿಸಲು ತೆರಳಿದ್ದ ಅವರು, ಪೈಪ್ ಎಳೆಯುವ ವೇಳೆ ಹಗ್ಗ ತುಂಡಾಗಿ, ಸುಮಾರು 15–20 ಅಡಿ ಆಳದ ಬಾವಿಗೆ ಬಿದ್ದಿದ್ದಾರೆ. ಒಂಟಿಯಾಗಿ ವಾಸಿಸುತ್ತಿದ್ದ ಕಾರಣ, ಅವರ ಕೂಗು ಯಾರಿಗೂ ಕೇಳಿಸದೇ ಹೋಗಿದ್ದು, ಅವರು ಬಾವಿಯೊಳಗೆ ಪೈಪ್ ಹಿಡಿದು ಮೂರು ದಿನಗಳ ಕಾಲ ಜೀವ ಉಳಿಸಿಕೊಂಡಿದ್ದರು.
ಜೀವ ಉಳಿಸಿದ್ದು ಗ್ಯಾಸ್ ಸಿಲಿಂಡರ್
ಶ್ರೀನಿವಾಸ್ ಆಚಾರ್ಯರ ಜೀವ ಉಳಿಸಿದ್ದು ಒಂದು ಗ್ಯಾಸ್ ಸಿಲಿಂಡರ್ ಎಂದರೆ ಅಚ್ಚರಿ ಆಗಬಹುದು. ಶ್ರೀನಿವಾಸ್ ಅವರು ಸಿಂಗಲ್ ಗ್ಯಾಸ್ ಸಿಲಿಂಡರ್ ಹೊಂದಿದ್ದು ತಿಂಗಳು ತುಂಬುತ್ತಲೇ ಹೊಸ ಸಿಲಿಂಡರ್‌ಗೆ ಬುಕ್ ಮಾಡಿ ಪರಿಚಯದ ಗಣೇಶ್ ಎಂಬವರಿಂದ ಖಾಲಿ ಸಿಲಿಂಡರ್ ಪಡೆದಿದ್ದರು. ಈ ನಡುವೆ ಗ್ಯಾಸ್ ಸಿಲಿಂಡರ್ ಬುಕ್ಕಿಂಗ್ ಮಾಡಿದ ಕಾರಣ OTP ಅಗತ್ಯವಿತ್ತು. ಗ್ಯಾಸ್ ಡೆಲಿವರಿ ವೇಳೆ ಸಿಬಂದಿ ಮನೆಯಲ್ಲಿ ಹುಡುಕಾಡಿದ್ದು ಯಾರೂ ಹೊರಗೆ ಬಾರದ ಹಿನ್ನೆಲೆಯಲ್ಲಿ ಅನುಮಾನಗೊಂಡು ಸ್ಥಳೀಯರಿಗೆ ಮಾಹಿತಿ ನೀಡಿದ್ದರು.
ಇದರಿಂದ ಅವರ ಪರಿಚಯದ ಗಣೇಶ್ ಹುಡುಕಾಟ ನಡೆಸಿದಾಗ, ತೋಟದ ಬಾವಿಯಲ್ಲಿ ಶ್ರೀನಿವಾಸ್ ಬಿದ್ದಿರುವುದು ಬೆಳಕಿಗೆ ಬಂದಿದೆ. ತಕ್ಷಣ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಕಾರ್ಯಾಚರಣೆ ನಡೆಸಿ ವೃದ್ಧರನ್ನು ಸುರಕ್ಷಿತವಾಗಿ ಮೇಲಕ್ಕೆ ಎತ್ತಿದ್ದಾರೆ. ಸದ್ಯ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯ ಸ್ಥಿತಿ ಸುಧಾರಿಸಿದೆ. ಬಾವಿಗೆ ಬಿದ್ದರೂ ಅದಕ್ಕೂ ಮೊದಲೇ ಗ್ಯಾಸ್ ಬುಕ್ಕಿಂಗ್ ಮಾಡಿದ್ದರಿಂದ ಸಿಬ್ಬಂದಿ ಬಂದು ಹುಡುಕಾಡಿದ್ದರಿಂದ ಕಾಕತಾಳೀಯ ಎನ್ನುವಂತೆ ಜೀವ ಉಳಿಸಲು ಕಾರಣವಾಗಿದೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am