ಬ್ರೇಕಿಂಗ್ ನ್ಯೂಸ್
04-01-21 01:49 pm Mangalore Correspondent ಕರಾವಳಿ
ಪುತ್ತೂರು, ಜ.4: ಯುವತಿಯೊಬ್ಬಳು ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿ ಸಮೀಪದ ನೆಲ್ಯಾಡಿಯಲ್ಲಿ ನಡೆದಿದೆ.
ನೆಲ್ಯಾಡಿ ನಿವಾಸಿ, ಉದ್ಯಮಿಯಾಗಿರುವ ವಿ.ಜೆ.ಜೋಸೆಫ್ ಅವರ ಪುತ್ರಿ ನವ್ಯಾ ಜೋಸೆಫ್ (22) ಆತ್ಮಹತ್ಯೆ ಮಾಡಿಕೊಂಡ ಯುವತಿ. ಬಿಬಿಎ ಪದವಿ ಮುಗಿಸಿದ್ದ ನವ್ಯಾ ಈ ಬಾರಿ ಕಾಲೇಜಿಗೆ ತೆರಳದೆ ಮನೆಯಲ್ಲೇ ಇದ್ದಳು. ಮನೆಯಲ್ಲಿ ನಿನ್ನೆ ರಾತ್ರಿ ಊಟ ಮಾಡಿ, 10:30ರ ವೇಳೆಗೆ ಮನೆಯಲ್ಲಿ ತನ್ನ ಕೊಠಡಿಗೆ ತೆರಳಿದ್ದಳು ಎನ್ನಲಾಗಿದೆ.

ಆದರೆ, ಬೆಳಗ್ಗೆ ಕೊಠಡಿ ಬಾಗಿಲು ತೆರೆದಿರಲಿಲ್ಲ. ಈ ಹಿನ್ನೆಲೆ ಬಾಗಿಲು ಮುರಿದು ನೋಡಿದಾಗ ನವ್ಯಾ ಆತ್ಮಹತ್ಯೆ ಮಾಡಿಕೊಂಡಿದ್ದು ತಿಳಿದುಬಂದಿದೆ. ಮೈಗೆ ಸೀಮೆ ಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗುತ್ತಿದೆ.
ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ. ಆದರೆ, ಮನೆಯ ಒಳಗೇ ಯುವತಿ ಬೆಂಕಿ ಹಚ್ಚಿಕೊಂಡು ಸಾವಿಗೆ ಶರಣಾಗಿದ್ದು ಬೆಳಗಿನ ವರೆಗೂ ಮನೆಯವರಿಗೆ ತಿಳಿದುಬಂದಿಲ್ಲ ಎನ್ನುವುದೇ ಸಂಶಯಾಸ್ಪದ. ಬೆಂಕಿಯ ಕೆನ್ನಾಲಿಗೆ ಬೀರುವಾಗ ಯಾರೇ ಆದ್ರೂ ಬೊಬ್ಬಿಡುತ್ತಾರೆ. ಬೆಂಕಿ ಮನೆಯ ಕೊಠಡಿಯನ್ನು ಪೂರ್ತಿ ಹತ್ತಿಕೊಂಡು ಸುಟ್ಟು ಹಾಕುತ್ತದೆ. ಆದರೆ, ಇಲ್ಲಿ ಬೆಳಗ್ಗೆಯೇ ಕೃತ್ಯ ತಿಳಿದುಬಂದಿದೆ ಎನ್ನಲಾಗುತ್ತಿದ್ದು ಮನೆಯಲ್ಲಿ ಯಾರಿದ್ದರು, ಯಾಕೆ ಗೊತ್ತಾಗಿಲ್ಲ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸಬೇಕಾಗಿದೆ.
Girl committed suicide by setting herself on fire on at Nelyadi, Puttur. The deceased has been identified as Navya Joseph (21).
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
10-10-26 10:31 pm
HK News Staffer
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
ನಂದಿಗ್ರಾಮ, ರೇಜಿನಗರದಲ್ಲಿ ಬಿಜೆಪಿಗೆ ಭರ್ಜರಿ ಜಯ ;...
09-10-26 11:04 pm
ಸರ್ಕಾರಿ ಸಂಸ್ಥೆಯಿಂದ ಕೋಟ್ಯಂತರ ದೇಣಿಗೆ ; ಪಿಣರಾಯಿ...
09-10-26 05:40 pm
Prakash Raj, Dhruv Rathee: SIR ರದ್ದತಿಗೆ ಬೆಂಗಳ...
08-10-26 08:03 pm
10-10-26 09:27 pm
HK News Staffer
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
ಮೂಡುಶೆಡ್ಡೆ ; ಮುಸ್ಲಿಮರ ದಫನಕ್ಕೆ 2 ಎಕರೆ ಪಿಲಿಕುಳದ...
10-10-26 03:21 pm
Nana patekar: ಮಂಗಳೂರು, ಉಡುಪಿಯೊಂದಿಗೆ ನಾನಾ ಪಾಟೇ...
08-10-26 04:30 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm