ಬ್ರೇಕಿಂಗ್ ನ್ಯೂಸ್
11-04-26 05:05 pm Mangalore Correspondent ಕರಾವಳಿ
ಬಂಟ್ವಾಳ, ಎಪ್ರಿಲ್ 11: ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ್ತಿದ್ದ ಮಾಜಿ ಪತ್ರಕರ್ತ, ಯುವಕನೊಬ್ಬ ಕುಸಿದು ಬಿದ್ದು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ನಾಯಿಲ ಎಂಬಲ್ಲಿ ಸಂಭವಿಸಿದೆ. ನಿನ್ನೆ ರಾತ್ರಿ ಘಟನೆ ನಡೆದಿದ್ದು ಕಾರ್ಯಕ್ರಮದ ನಿರೂಪಣೆ ಮಾಡುತ್ತಿದ್ದಾಗಲೇ ವೇದಿಕೆಯಲ್ಲಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ.
ಫರಂಗಿಪೇಟೆ ಅಬ್ಬೆಟ್ಟು ನಿವಾಸಿ, ಹತ್ತು ವರ್ಷಗಳ ಹಿಂದೆ ಮಂಗಳೂರಿನಲ್ಲಿ ರಾಜ್ ಟಿವಿ ಸೇರಿದಂತೆ ಸ್ಥಳೀಯ ಕೇಬಲ್ ವಾಹಿನಿಗಳಲ್ಲಿ ವರದಿಗಾರನಾಗಿದ್ದ ಅಶ್ವಿತ್ ಕುಮಾರ್ (32) ಮೃತಪಟ್ಟ ಯುವಕ. ಪತ್ರಕರ್ತ ಕೆಲಸ ಬಿಟ್ಟು ಮೋಟಾರ್ಸ್ ಸಂಸ್ಥೆಯೊಂದರಲ್ಲಿ ಸುಪರ್ ವೈಸರ್ ಆಗಿದ್ದರು. ಇದರ ನಡುವೆ, ಸ್ಥಳೀಯ ಕಾರ್ಯಕ್ರಮಗಳಲ್ಲಿ ನಿರೂಪಕರಾಗಿ ಗುರುತಿಸಿಕೊಂಡಿದ್ದರು. ನಾಯಿಲದಲ್ಲಿರುವ ಸಂಬಂಧಿಕರ ಮನೆಯ ಮದರಂಗಿ ಕಾರ್ಯಕ್ರಮದಲ್ಲಿ ಅಶ್ವಿತ್ ನಿರೂಪಣೆ ಜವಾಬ್ದಾರಿ ವಹಿಸಿಕೊಂಡಿದ್ದರು.
ಅದರಂತೆ ಶುಕ್ರವಾರ ರಾತ್ರಿ (ಏಪ್ರಿಲ್ 10) ಎಂದಿನಂತೆ ವೇದಿಕೆ ಏರಿ ಕಾರ್ಯಕ್ರಮ ಆರಂಭಿಸಲು ತಯಾರಿ ನಡೆಸುತ್ತಿದ್ದರು. ಮಾತು ಆರಂಭಿಸಿದ ಕೆಲವೇ ನಿಮಿಷಗಳಲ್ಲಿ ತೀವ್ರ ಅಸ್ವಸ್ಥಗೊಂಡು ಇದ್ದಕ್ಕಿದ್ದಂತೆ ವೇದಿಕೆಯಲ್ಲೇ ಕುಸಿದು ಬಿದ್ದಿದ್ದಾರೆ.
ಕೂಡಲೇ ಅವರನ್ನು ತುಂಬೆಯ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದು ಅಷ್ಟರಲ್ಲಿ ಮೃತಪಟ್ಟಿದ್ದಾರೆ. ಸಂಭ್ರಮ ಮನೆ ಮಾಡಿದ್ದ ಮನೆಯಲ್ಲಿ ಕ್ಷಣಾರ್ಧದಲ್ಲಿ ಶೋಕ ಆವರಿಸಿದೆ. ಮದರಂಗಿ, ಮದುವೆ ಕಾರ್ಯಕ್ರಮಕ್ಕೆ ನಿರೂಪಣೆ ಮಾಡಲಿಕ್ಕಿದ್ದ ಯುವಕನ ಸಾವು ಕುಟುಂಬಸ್ಥರಲ್ಲಿ ಬೇಸರ ಮೂಡಿಸಿದೆ. ಅಶ್ವಿತ್ ಮದುವೆ ಆಗಿರಲಿಲ್ಲ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm