ಬ್ರೇಕಿಂಗ್ ನ್ಯೂಸ್
18-04-26 08:10 pm HK News Staffer ಕರಾವಳಿ
ಮಂಗಳೂರು, ಎಪ್ರಿಲ್ 18: ದಾವಣಗೆರೆ ಉಪ ಚುನಾವಣೆ ಸಂಬಂಧಿಸಿ ಪಕ್ಷ ಕೈಗೊಂಡ ಕ್ರಮಗಳಿಗೂ, ಚುನಾವಣಾ ಫಲಿತಾಂಶಕ್ಕೂ ಯಾವುದೇ ಸಂಬಂಧ ಇಲ್ಲ. ಫಲಿತಾಂಶ ಏನಾಗುತ್ತೆ ಎಂದು ಯಾರಿಗೂ ಗೊತ್ತಿಲ್ಲ. ಅದರ ಬಗ್ಗೆ ಹೇಳಲು ನಾನು ಜ್ಯೋತಿಷಿ ಅಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಪಕ್ಷ ವಿರೋಧಿ ಚಟುವಟಿಕೆ ಬಗ್ಗೆ ಪಕ್ಷದ ಚೌಕಟ್ಟಿನಲ್ಲಿ ಕೆಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಜಮೀರ್ ಅಹಮ್ಮದ್ ಅವರನ್ನು ಸಚಿವ ಸ್ಥಾನದಿಂದ ಇಳಿಸೋದು ಕೇವಲ ಉಹಾಪೋಹ. ಜಮೀರ್ ಅಹಮ್ಮದ್ ಪಕ್ಷದ ಹಿರಿಯ ಮುಖಂಡ. ಪ್ರಾಮಾಣಿಕವಾಗಿ ಪಕ್ಷಕ್ಕಾಗಿ ದುಡಿಯುತ್ತಿದ್ದಾರೆ. ಆದ್ರೆ ಕೆಲವರು ಅದಕ್ಕೆ ಬಣ್ಣ ಕಟ್ಟಲು ಹೊರಟಿರಬಹುದು. ಈ ವಿಚಾರಗಳು ಪಕ್ಷದ ಚೌಕಟ್ಟಿನಲ್ಲಿ ಚರ್ಚೆ ಆಗುತ್ತದೆ.
ಸಿದ್ದರಾಮಯ್ಯ ಟೀಮನ್ನು ಟಾರ್ಗೆಟ್ ಮಾಡಿದ್ದಾರೆಂಬ ರಾಜಣ್ಣ ಹೇಳಿಕೆ ಬಗ್ಗೆ ನನಗೆ ಗೊತ್ತಿಲ್ಲ. ಅದನ್ನು ರಾಜಣ್ಣ ಅವರ ಬಳಿಯೇ ಕೇಳಬೇಕು. ಇದೆಲ್ಲ ಪಕ್ಷದ ಶಿಸ್ತಿನ ವಿಚಾರ. ಕಾಂಗ್ರೆಸ್ ನಲ್ಲಿ ಯಾರನ್ನು ಟಾರ್ಗೆಟ್ ಮಾಡುವ ಪ್ರಶ್ನೆ ಬರಲ್ಲ. ಕಾಂಗ್ರೆಸ್ ನಲ್ಲಿ ಎಲ್ಲಾ ಧರ್ಮದವರು ಒಂದೇ ಸಮಾನ. ಏನೋ ತಪ್ಪಾಗಿದ್ದರೆ ಪಕ್ಷ ಕ್ರಮ ತೆಗೆದುಕೊಳ್ಳುತ್ತದೆ ಎಂದು ದಿನೇಶ್ ಗುಂಡೂರಾವ್ ಹೇಳಿದರು.
ಮಹಿಳಾ ಮೀಸಲಾತಿ ಮಸೂದೆಗೆ ಸಂಸತ್ತಿನಲ್ಲಿ ಸೋಲಾದ ಬಗ್ಗೆ ಪ್ರತಿಕ್ರಿಯಿಸಿದ ಗುಂಡೂರಾವ್, ಕೇಂದ್ರ ಸರ್ಕಾರ ಮಹಿಳೆಯರ ಹೆಸರಿನಲ್ಲಿ ವಂಚನೆ ಮಾಡಲು ಹೊರಟಿದೆ. ವಿಶೇಷ ಅಧಿವೇಶನ ಕರೆದು ಮುಖಭಂಗ ಆಗಿರೋದಕ್ಕೆ ಅವರೇ ಕಾರಣ. ಮಹಿಳೆಯರಿಗೆ ವಾಸ್ತವದಲ್ಲಿ ವಿರೋಧ ಮಾಡಿರೋದು ಬಿಜೆಪಿಯವರು. ಮಹಿಳಾ ಮೀಸಲಾತಿಗೆ ಯಾರೂ ವಿರೋಧ ಇಲ್ಲ. 2023ರಲ್ಲಿ ಈ ಮಸೂದೆ ತಂದಾಗ ಸರ್ವಾನುಮತದಿಂದ ನಾವು ಒಪ್ಪಿಕೊಂಡಿದ್ದೆವು. ಮಹಿಳಾ ಮೀಸಲಾತಿಗೂ ಕ್ಷೇತ್ರ ಪುನರ್ ವಿಂಗಡನೆಗೂ ಸಂಬಂಧ ಇಲ್ಲ. ಮಹಿಳೆಯರಿಗೆ 33% ಮೀಸಲಾತಿ ನೀಡುವ ಬಗ್ಗೆ ತೀರ್ಮಾನಿಸಿದರೆ ನಾವು ಸ್ವಾಗತಿಸುತ್ತೇವೆ. ರಾಜ್ಯದ 224 ಕ್ಷೇತ್ರಗಳ ಪೈಕಿ 33% ಮಹಿಳೆಯರಿಗೆ ಮೀಸಲಾತಿ ಕೊಟ್ರೆ ನಮಗೆ ಸಮಸ್ಯೆ ಇಲ್ಲ. ನಾವೆಲ್ಲರೂ ಆ ಮಸೂದೆಯ ಪರವಾಗಿ ಇದ್ದೇವೆ.
ಈಗ ಕೆಲವು ಕಡೆ ಚುನಾವಣೆ ನಡೆಯುತ್ತಿದೆ. ಈ ಮಸೂದೆ ಹಿಂದೆಯೆ ಜಾರಿಗೆ ತಂದಿದ್ರೆ ಚುನಾವಣೆಯಲ್ಲಿ 33% ಮಹಿಳೆಯರಿಗೆ ಸೀಟು ಸಿಗ್ತಿತ್ತು. ಮಹಿಳೆಯರ ಹೆಸರಿನಲ್ಲಿ ತಮ್ಮ ಅಧಿಕಾರ ಉಳಿಸಿಕೊಳ್ಳಲು ಕ್ಷೇತ್ರ ಪುನರ್ ವಿಂಗಡನೆ ಮಾಡಬೇಕೆಂಬ ಹುನ್ನಾರ ಇವರದ್ದು. ದಕ್ಷಿಣ ಭಾರತದ ರಾಜ್ಯಗಳಿಗೆ ಇದರಿಂದ ದೊಡ್ಡ ಸಮಸ್ಯೆ ಆಗಲಿದೆ ಮತ್ತು ಇದರ ಬಗ್ಗೆ ಅನೇಕ ಅನುಮಾನಗಳಿವೆ. ಮಹಿಳೆಯರ ಹೆಸರಿನಲ್ಲಿ ಅಧಿಕಾರ ಹಿಡಿಯಬೇಕೆಂದು ಮಾಡಿದ ಪ್ರಯತ್ನ ಈಗ ವಿಫಲವಾಗಿದೆ. ಇದೊಂದು ಮೋದಿ ಮತ್ತು ಬಿಜೆಪಿಯವರ ಸಂಚು ಎಂದು ಸಚಿವ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದರು.
ಪಂಚಾಯತ್ ಚುನಾವಣೆ ಪ್ರಕ್ರಿಯೆ ಆರಂಭ
ಸ್ಥಳೀಯಾಡಳಿತ ಚುನಾವಣೆ ನಡೆಸುವ ಬಗ್ಗೆ ಈಗಾಗಲೇ ಪ್ರಕ್ರಿಯೆಗಳು ಆರಂಭವಾಗಿದೆ. ಹೈಕೋರ್ಟ್ ಆದೇಶದ ಪ್ರಕಾರ ಜೂನ್ ಮೊದಲು ಚುನಾವಣೆ ನಡೆಸಬೇಕು. ಈಗಾಗಲೇ ಅದರ ಬಗ್ಗೆ ತಯಾರಿಗಳು ಆರಂಭವಾಗಿದೆ. ಚುನಾವಣೆ ನಡೆಸಲು ಕಾಲಾವಕಾಶ ಕೇಳಿದ ಬಗ್ಗೆ ನನಗೆ ಮಾಹಿತಿಯಿಲ್ಲ. ಚುನಾವಣೆ ನಡೆದೇ ನಡೆಯುತ್ತದೆ. ಸೆಪ್ಟೆಂಬರ್ ನಲ್ಲಿ ನಡೆಸಲು ಹೈಕೋರ್ಟ್ ಕಾಲಾವಕಾಶ ಕೊಟ್ರೆ ಮಾಡ್ತೇವೆ. ಜೂನ್ ಒಳಗೆ ಮಾಡಬೇಕಂದ್ರೆ ಜೂನ್ ನಲ್ಲಿ ನಡೆಸುತ್ತೇವೆ ಎಂದರು.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm