ಬ್ರೇಕಿಂಗ್ ನ್ಯೂಸ್
12-05-26 06:26 pm HK News Staffer ಕರಾವಳಿ
ಮಂಗಳೂರು, ಮೇ 12: ದೇಶಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿರುವ NEET-UG 2026 ಪರೀಕ್ಷೆ ರದ್ದತಿ ವಿಚಾರಕ್ಕೆ ಸಂಬಂಧಿಸಿ ದಕ್ಷಿಣ ಕನ್ನಡ ಜಿಲ್ಲಾ NSUI ಅಧ್ಯಕ್ಷ ಸುಹಾನ್ ಆಳ್ವ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆ ಮೇ 3ರಂದು ನಡೆದಿದ್ದ ರಾಷ್ಟ್ರೀಯ ವೈದ್ಯಕೀಯ ಪ್ರವೇಶ ಪರೀಕ್ಷೆಯನ್ನು ರದ್ದುಗೊಳಿಸಿರುವ ಕ್ರಮವನ್ನು ಅವರು “ವಿದ್ಯಾರ್ಥಿಗಳ ಭವಿಷ್ಯದ ಜೊತೆ ನಡೆಸಿದ ಅನ್ಯಾಯ” ಎಂದು ಖಂಡಿಸಿದ್ದಾರೆ.
ಈ ವರ್ಷ ಸುಮಾರು 22.5 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣದ ಕನಸು ಹೊತ್ತು NEET ಪರೀಕ್ಷೆ ಬರೆದಿದ್ದರು. ಆದರೆ ಪ್ರಶ್ನೆಪತ್ರಿಕೆ ಸೋರಿಕೆಯಂತಹ ಗಂಭೀರ ಲೋಪದೋಷಗಳಿಂದ ಇಡೀ ಪರೀಕ್ಷಾ ವ್ಯವಸ್ಥೆಯ ವಿಶ್ವಾಸಾರ್ಹತೆ ಕುಸಿದಿದೆ. ಇದರಿಂದ ಲಕ್ಷಾಂತರ ವಿದ್ಯಾರ್ಥಿಗಳು ಮಾನಸಿಕ ಒತ್ತಡ ಮತ್ತು ಅನಿಶ್ಚಿತತೆಗೆ ಒಳಗಾಗಿದ್ದಾರೆ ಎಂದು ಸುಹಾನ್ ಆಳ್ವ ಆರೋಪಿಸಿದ್ದಾರೆ.
“ವಿದ್ಯಾರ್ಥಿಗಳು ಹಗಲಿರುಳು ಶ್ರಮಪಟ್ಟು ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದರೆ, ಮತ್ತೊಂದೆಡೆ ಪ್ರಶ್ನೆಪತ್ರಿಕೆ ಸೋರಿಕೆಯಂತಹ ಹಗರಣಗಳು ನಿರಂತರವಾಗಿ ನಡೆಯುತ್ತಿವೆ. ಪರೀಕ್ಷೆಯ ಪಾವಿತ್ರ್ಯತೆ ಮತ್ತು ಭದ್ರತೆಯನ್ನು ಕಾಪಾಡುವಲ್ಲಿ ಕೇಂದ್ರ ಶಿಕ್ಷಣ ಇಲಾಖೆ ಸಂಪೂರ್ಣ ವಿಫಲವಾಗಿದೆ,” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪದೇ ಪದೇ ಇಂತಹ ಅಕ್ರಮಗಳು ನಡೆಯುತ್ತಿರುವುದು ಕೇಂದ್ರ ಸರ್ಕಾರದ ಆಡಳಿತ ವೈಫಲ್ಯವನ್ನು ಸ್ಪಷ್ಟಪಡಿಸುತ್ತದೆ ಎಂದು ಹೇಳಿದ ಅವರು, “ವಿದ್ಯಾರ್ಥಿಗಳ ಜೀವನದ ಜೊತೆ ಚೆಲ್ಲಾಟವಾಡುತ್ತಿರುವ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು” ಎಂದು ಆಗ್ರಹಿಸಿದ್ದಾರೆ.
ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹಿಂದೆ ಇರುವ ಜಾಲವನ್ನು ಪತ್ತೆಹಚ್ಚಲು ನಿಷ್ಪಕ್ಷಪಾತ ಮತ್ತು ಉನ್ನತ ಮಟ್ಟದ ತನಿಖೆ ನಡೆಸಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳದಿದ್ದರೆ ಜಿಲ್ಲಾದ್ಯಂತ ವಿದ್ಯಾರ್ಥಿ ಹೋರಾಟ ಮತ್ತು ಪ್ರತಿಭಟನೆ ನಡೆಸುವುದಾಗಿ ಸುಹಾನ್ ಆಳ್ವ ಎಚ್ಚರಿಕೆ ನೀಡಿದ್ದಾರೆ.
“ಒಂದು ರಾಷ್ಟ್ರೀಯ ಮಟ್ಟದ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯನ್ನು ತಡೆಯಲು ಸಾಧ್ಯವಾಗದವರು ದೇಶದ ಶಿಕ್ಷಣ ವ್ಯವಸ್ಥೆಯನ್ನು ಹೇಗೆ ನಿರ್ವಹಿಸುತ್ತಾರೆ? ವಿದ್ಯಾರ್ಥಿಗಳ ಕನಸಿನ ಮೇಲೆ ಗದಾಪ್ರಹಾರ ಮಾಡಿದ ಸರ್ಕಾರಕ್ಕೆ ಯುವಜನತೆ ಮುಂದಿನ ದಿನಗಳಲ್ಲಿ ತಕ್ಕ ಉತ್ತರ ನೀಡಲಿದೆ,” ಎಂದು ಅವರು ಕಿಡಿಕಾರಿದ್ದಾರೆ.
ಪರೀಕ್ಷಾ ವ್ಯವಸ್ಥೆಯ ಮೇಲಿನ ನಂಬಿಕೆ ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯವನ್ನು ನಿರ್ಧರಿಸುತ್ತದೆ. ಪ್ರಶ್ನೆಪತ್ರಿಕೆ ಸೋರಿಕೆಯಂತಹ ಘಟನೆಗಳು ಪ್ರತಿಭಾವಂತ ವಿದ್ಯಾರ್ಥಿಗಳ ಶ್ರಮವನ್ನು ವ್ಯರ್ಥಗೊಳಿಸುವುದಷ್ಟೇ ಅಲ್ಲ, ಶಿಕ್ಷಣ ವ್ಯವಸ್ಥೆಯ ವಿಶ್ವಾಸವನ್ನೂ ಕುಸಿತಗೊಳಿಸುತ್ತವೆ. ಪಾರದರ್ಶಕ ಮತ್ತು ಭದ್ರ ಪರೀಕ್ಷಾ ವ್ಯವಸ್ಥೆ ನಿರ್ಮಾಣವು ಸರ್ಕಾರದ ಪ್ರಮುಖ ಜವಾಬ್ದಾರಿಯಾಗಿದೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 04:14 pm
HK News Staffer
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am