ಬ್ರೇಕಿಂಗ್ ನ್ಯೂಸ್
19-05-26 05:57 pm HK News Staffer ಕರಾವಳಿ
ಮಂಗಳೂರು, ಮೇ 19: ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ಜಾಗತಿಕ ತೈಲ ಬಿಕ್ಕಟ್ಟಿನ ಆತಂಕದ ಚರ್ಚೆಗಳು ನಡೆಯುತ್ತಿರುವ ನಡುವೆಯೇ, ಬಂದರು ನಗರಿ ಮಂಗಳೂರಿನಲ್ಲಿ ಬೆಚ್ಚಿಬೀಳಿಸುವಂತಹ ವಿಚಿತ್ರ ಹಾಗೂ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. ನಗರದ ಕಾವೂರು ಪ್ರದೇಶದ ಮೂರು ಮನೆಗಳ ಬಾವಿಗಳಲ್ಲಿ ದಿಢೀರನೆ ಡೀಸೆಲ್ ಮಿಶ್ರಿತ ನೀರು ಮೇಲೇಳುತ್ತಿದ್ದು, ಸ್ಥಳೀಯ ನಿವಾಸಿಗಳು ಭಾರೀ ಆತಂಕಕ್ಕೊಳಗಾಗಿದ್ದಾರೆ.
ಬಾವಿಯ ನೀರನ್ನು ಪರೀಕ್ಷೆಗೆ ಒಳಪಡಿಸಿದಾಗ ಅದರಲ್ಲಿ ಬರೋಬ್ಬರಿ ಶೇ.28 ರಷ್ಟು ಡೀಸೆಲ್ ಅಂಶ ಇರುವುದು ಪ್ರಯೋಗಾಲಯ ವರದಿಯಲ್ಲಿ ದೃಢಪಟ್ಟಿದೆ. ಈ ಬೆಳವಣಿಗೆ ಇಡೀ ಕರಾವಳಿ ಭಾಗದಲ್ಲಿ ಸಂಚಲನ ಮೂಡಿಸಿದ್ದು, ಅಂತರ್ಜಲ ಕಲುಷಿತವಾಗಿರುವ ಭೀತಿ ಜನರಲ್ಲಿ ಮನೆ ಮಾಡಿದೆ.
ಬಾವಿ ಖಾಲಿ ಮಾಡಿದರೂ ಮತ್ತೆ ಡೀಸೆಲ್!
ಸ್ಥಳೀಯರ ಪ್ರಕಾರ, ಬಾವಿಯ ನೀರನ್ನು ಮೋಟಾರ್ ಮೂಲಕ ಸಂಪೂರ್ಣ ಖಾಲಿ ಮಾಡಿ ಸ್ವಚ್ಛಗೊಳಿಸಿದರೂ ಕೆಲವೇ ಗಂಟೆಗಳಲ್ಲಿ ಮತ್ತೆ ಡೀಸೆಲ್ ಮಿಶ್ರಿತ ನೀರು ಮೇಲೇಳುತ್ತಿದೆ. ನೀರಿನ ಮೇಲ್ಭಾಗದಲ್ಲಿ ದಪ್ಪನೆಯ ಎಣ್ಣೆ ಪದರ ಕಾಣಿಸಿಕೊಳ್ಳುತ್ತಿದ್ದು, ತೀವ್ರ ದುರ್ವಾಸನೆಯೂ ಬರುತ್ತಿದೆ.
ಇದರಿಂದಾಗಿ ಆ ಮನೆಗಳ ನಿವಾಸಿಗಳಿಗೆ ಕುಡಿಯುವ ನೀರು ಮಾತ್ರವಲ್ಲದೆ, ಅಡುಗೆ, ಪಾತ್ರೆ ತೊಳೆಯುವುದು ಸೇರಿದಂತೆ ದಿನನಿತ್ಯದ ಬಳಕೆಯ ನೀರಿಗೂ ಭಾರೀ ಸಮಸ್ಯೆ ಎದುರಾಗಿದೆ. ಸದ್ಯ ಟ್ಯಾಂಕರ್ ನೀರಿನ ಮೇಲೆಯೇ ಅವಲಂಬಿತರಾಗಿರುವ ಪರಿಸ್ಥಿತಿ ನಿರ್ಮಾಣವಾಗಿದೆ.

ಪೆಟ್ರೋಲ್ ಬಂಕ್‌ನಿಂದ ಸೋರಿಕೆ?
ಸಂತ್ರಸ್ತರ ಮನೆಗಳ ಸಮೀಪದಲ್ಲೇ ಪೆಟ್ರೋಲ್ ಬಂಕ್ ಇದ್ದು, ಅದರ ಅಂಡರ್‌ಗ್ರೌಂಡ್ ಡೀಸೆಲ್ ಟ್ಯಾಂಕ್‌ನಿಂದ ಸೋರಿಕೆ ಆಗಿ ಅಂತರ್ಜಲ ಸೇರಿರಬಹುದೆಂಬ ಅನುಮಾನ ವ್ಯಕ್ತವಾಗಿದೆ. ಆದರೆ, ಈ ಆರೋಪವನ್ನು ಪೆಟ್ರೋಲ್ ಬಂಕ್ ಮಾಲೀಕರು ತಳ್ಳಿಹಾಕಿದ್ದಾರೆ.
“ನಮ್ಮ ಡೀಸೆಲ್ ಸ್ಟಾಕ್‌ನಲ್ಲಿ ಯಾವುದೇ ವ್ಯತ್ಯಾಸ ಇಲ್ಲ. ಟ್ಯಾಂಕ್ ಲೀಕ್ ಆಗಿದ್ದರೆ ಪ್ರಮಾಣದಲ್ಲಿ ವ್ಯತ್ಯಾಸ ಕಾಣಿಸಿಕೊಳ್ಳಬೇಕಿತ್ತು. ನಮ್ಮಿಂದ ಸಮಸ್ಯೆ ಆಗಿಲ್ಲ,” ಎಂದು ಬಂಕ್ ಸಿಬ್ಬಂದಿ ಸ್ಪಷ್ಟನೆ ನೀಡಿದ್ದಾರೆ.
‘ಪೇಪರ್ ಮುಳುಗಿಸಿ ಬೆಂಕಿ ಹಚ್ಚಿದರೆ ಉರಿಯುತ್ತಿದೆ' ;
ಸಂತ್ರಸ್ತರಾದ ಸದಾಶಿವ ಎಂಬವರು ಮಾತನಾಡಿ, “ಮೊದಲು ನೀರಿನಲ್ಲಿ ವಿಚಿತ್ರ ವಾಸನೆ ಬರುತ್ತಿತ್ತು. ನಂತರ ಪರಿಶೀಲಿಸಿದಾಗ ಡೀಸೆಲ್ ಮಿಶ್ರಣ ಇರುವುದನ್ನು ಗಮನಿಸಿದ್ದೇವೆ. ಬಾವಿಯನ್ನು ಸಂಪೂರ್ಣ ಕ್ಲೀನ್ ಮಾಡಿದರೂ ಮತ್ತೆ ಡೀಸೆಲ್ ಬರುತ್ತಿದೆ. ಬಾವಿಯಿಂದ ತೆಗೆದ ನೀರಿಗೆ ಪೇಪರ್ ಮುಳುಗಿಸಿ ಬೆಂಕಿ ಹಚ್ಚಿದರೆ ಅದು ಉರಿಯುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಬದುಕುವುದು ತುಂಬಾ ಭಯಾನಕವಾಗಿದೆ,” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
“ಈಗ ನಾವು ಹೊರಗಿನಿಂದ ಟ್ಯಾಂಕರ್ ನೀರು ತರಿಸಿ ಬಕೆಟ್‌ಗಳಲ್ಲಿ ಸಂಗ್ರಹಿಸಿ ಬಳಸುತ್ತಿದ್ದೇವೆ. ಅಧಿಕಾರಿಗಳು ಕೇವಲ ವರದಿ ಪಡೆದು ಸುಮ್ಮನಾಗದೇ ತಕ್ಷಣ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಬೇಕು,” ಎಂದು ಅವರು ಆಗ್ರಹಿಸಿದ್ದಾರೆ.
ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯದ ಆರೋಪ;
ಆರೋಗ್ಯ ಇಲಾಖೆ ಅಧಿಕಾರಿಗಳು ನೀರಿನ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆ ನಡೆಸಿದ್ದು, ನೀರು ಕುಡಿಯಲು ಯೋಗ್ಯವಲ್ಲ ಎಂದು ವರದಿ ನೀಡಿದ್ದಾರೆ. ಆದರೂ ಪಾಲಿಕೆ ಹಾಗೂ ಸಂಬಂಧಿತ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿಲ್ಲ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.
ಅಂತರ್ಜಲ ಕಲುಷಿತ ಭೀತಿ
ಈ ರಹಸ್ಯ ಸೋರಿಕೆ ಮುಂದುವರಿದರೆ ಸುತ್ತಮುತ್ತಲಿನ ಪ್ರದೇಶಗಳ ಅಂತರ್ಜಲ ಸಂಪೂರ್ಣ ಕಲುಷಿತಗೊಳ್ಳುವ ಅಪಾಯವಿದೆ ಎಂಬ ಆತಂಕ ವ್ಯಕ್ತವಾಗಿದೆ. ಡೀಸೆಲ್ ಯಾವ ಮೂಲದಿಂದ ಭೂಮಿಯೊಳಗೆ ಸೇರಿದೆ? ಪೆಟ್ರೋಲ್ ಬಂಕ್ ಟ್ಯಾಂಕ್ ಸೋರಿಕೆಯೇ ಕಾರಣವೇ? ಅಥವಾ ಬೇರೆ ಮೂಲವಿದೆಯೇ? ಎಂಬುದರ ಕುರಿತು ತಕ್ಷಣ ಸಮಗ್ರ ತನಿಖೆ ನಡೆಸಬೇಕೆಂದು ಸ್ಥಳೀಯರು ಜಿಲ್ಲಾಡಳಿತಕ್ಕೆ ಒತ್ತಾಯಿಸಿದ್ದಾರೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am