ಬ್ರೇಕಿಂಗ್ ನ್ಯೂಸ್
26-05-26 07:52 pm HK News Staffer ಕರಾವಳಿ
ಮಂಗಳೂರು, ಮೇ 25 : ದೊಡ್ಡ ಹುದ್ದೆಯ ಕನಸು ಕಾಣುವ ಪ್ರತಿಯೊಬ್ಬರಿಗೂ ಮಂಗಳೂರಿನ ನಿಶೆಲ್ ಫ್ಲೋರಾ ಡಿ’ಅಲ್ಮೇಡಾ ಅವರ ಬದುಕಿನ ಪಯಣ ಸ್ಫೂರ್ತಿಯಾಗಿದೆ. ಮಂಗಳೂರಿನ ಸೇಂಟ್ ಅಲೋಶಿಯಸ್ ಶಿಕ್ಷಣ ಸಂಸ್ಥೆಯ ಹಳೆ ವಿದ್ಯಾರ್ಥಿನಿಯಾಗಿರುವ ನಿಶೆಲ್, ಪ್ರತಿಷ್ಠಿತ ಸರ್ವೀಸಸ್ ಸೆಲೆಕ್ಷನ್ ಬೋರ್ಡ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಸೇನಾ ತರಬೇತಿ ಪೂರ್ಣಗೊಳಿಸಿ ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಹುದ್ದೆಗೆ ನೇಮಕಗೊಂಡಿದ್ದಾರೆ.
ಅವರ ಈ ಸಾಧನೆ ಕೇವಲ ಕುಟುಂಬಕ್ಕಷ್ಟೇ ಸೀಮಿತವಾಗಿಲ್ಲ ; ಸಾಮಾನ್ಯ ವಿದ್ಯಾರ್ಥಿನಿಯಿಂದ ದೇಶಸೇವೆಯ ಜವಾಬ್ದಾರಿಯುತ ಹುದ್ದೆಯ ವರೆಗೆ ಅವರ ಪಯಣ ಅನೇಕ ಯುವಕರಿಗೆ ಪ್ರೇರಣೆಯ ಕಥೆಯಾಗಿದೆ. ಶಾಲಾ ದಿನಗಳಿಂದಲೇ ನಿಶೆಲ್ ಪ್ರತಿಭಾವಂತೆ ಹಾಗೂ ಶಿಸ್ತುಬದ್ಧ ವಿದ್ಯಾರ್ಥಿನಿಯಾಗಿದ್ದರು. ವಿದ್ಯಾಭ್ಯಾಸದ ಜೊತೆಗೆ ಕಲೆ, ಕ್ರೀಡೆ, ನಾಯಕತ್ವ ಕಾರ್ಯಕ್ರಮಗಳು, ನೃತ್ಯ, ಸಂಗೀತ, ಚಿತ್ರಕಲೆ, ಕರಾಟೆ ಹಾಗೂ ಕಾರ್ಯಕ್ರಮ ನಿರೂಪಣೆಯಲ್ಲೂ ಅವರು ಸಕ್ರಿಯವಾಗಿದ್ದರು. ಅವರ ಬಹುಮುಖ ಪ್ರತಿಭೆ ಮತ್ತು ಆತ್ಮವಿಶ್ವಾಸವೇ ಅವರನ್ನು ಇತರರಿಂದ ವಿಭಿನ್ನವಾಗಿಸಿತ್ತು.
ಎನ್ಸಿಸಿ ತರಬೇತಿಯಲ್ಲಿ ಭಾಗವಹಿಸಿದ್ದ ನಿಶೆಲ್, ತಮ್ಮ ನಾಯಕತ್ವ ಗುಣಗಳಿಂದ ವಿಶೇಷ ಮೆಚ್ಚುಗೆ ಗಳಿಸಿದ್ದರು. ತಮ್ಮ ಶಿಕ್ಷಣ ಸಂಸ್ಥೆಯಿಂದ ಗಣರಾಜ್ಯೋತ್ಸವ ಪಥಸಂಚಲನ ಶಿಬಿರಕ್ಕೆ ಆಯ್ಕೆಯಾದ ಮೊದಲ ವಿದ್ಯಾರ್ಥಿನಿ ಎಂಬ ಹೆಗ್ಗಳಿಕೆಯೂ ಅವರಿಗೆ ಸಂದಿತ್ತು. ಇದೇ ಅವರ ದೇಶಸೇವೆಯ ಕನಸಿಗೆ ಬಲವಾದ ಅಡಿಪಾಯವಾಗಿತ್ತು.
ಪಿಯು ಶಿಕ್ಷಣದ ಬಳಿಕ ಏರೋನಾಟಿಕಲ್ ಎಂಜಿನಿಯರಿಂಗ್ ಪದವಿ ಪಡೆದು ಶೈಕ್ಷಣಿಕವಾಗಿ ಉನ್ನತ ಸಾಧನೆ ಮಾಡಿದರು. ಆದರೆ ಅವರ ಕನಸು ಅಲ್ಲಿ ನಿಂತಿರಲಿಲ್ಲ. ಭಾರತೀಯ ಸಶಸ್ತ್ರ ಪಡೆಗಳಿಗೆ ಪ್ರವೇಶ ನೀಡುವ ಆಯ್ಕೆ ಪ್ರಕ್ರಿಯೆಗಳಲ್ಲಿ ಒಂದಾದ SSB ಪರೀಕ್ಷೆಗೆ ಸಿದ್ಧತೆ ನಡೆಸಿದರು. ಅದರಲ್ಲಿ ತೇರ್ಗಡೆಗೊಂಡು ಸೇನಾ ತರಬೇತಿ ಪೂರ್ತಿಗೊಳಿಸಿ ಇದೀಗ ಸಬ್ ಲೆಫ್ಟಿನೆಂಟ್ ಹುದ್ದೆಗೆ ನೇಮಕಗೊಂಡಿದ್ದಾರೆ.
ಅವರ ಈ ಸಾಧನೆಯ ಹಿಂದೆ ಹಲವು ವರ್ಷಗಳ ತ್ಯಾಗ, ಪರಿಶ್ರಮ ಮತ್ತು ದೇಶಸೇವೆಯ ಮೇಲಿನ ಅಚಲ ನಂಬಿಕೆ ಅಡಗಿದೆ. ಇದೀಗ ನಿಶೆಲ್ ಫ್ಲೋರಾ ಡಿ’ಅಲ್ಮೇಡಾ ಸಬ್ ಲೆಫ್ಟಿನೆಂಟ್ ಹುದ್ದೆಯೊಂದಿಗೆ ರಾಷ್ಟ್ರಸೇವೆಯ ಹಾದಿಯಲ್ಲಿ ಹೆಜ್ಜೆ ಇಟ್ಟಿದ್ದಾರೆ. ಅವರ ಈ ಸಾಧನೆಯನ್ನು ಗೌರವಿಸಲು ಮೇ 29ರಂದು ಸಂಜೆ 4 ಗಂಟೆಗೆ ಮಂಗಳೂರಿನಲ್ಲಿ ನಾಗರಿಕ ಸನ್ಮಾನ ಹಾಗೂ ಭವ್ಯ ಮೆರವಣಿಗೆ ಆಯೋಜಿಸಲಾಗಿದೆ. ಮೆರವಣಿಗೆಯಲ್ಲಿ ಕುಟುಂಬಸ್ಥರು, ಸ್ನೇಹಿತರು, ಶಿಕ್ಷಕರು, ಹಿತೈಷಿಗಳು ಹಾಗೂ ಸಾರ್ವಜನಿಕರು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಸೇಂಟ್ ಅಲೋಶಿಯಸ್ ಕಾಲೇಜಿನ ತರಗತಿ ಕೊಠಡಿಯಿಂದ ಭಾರತೀಯ ನೌಕಾಪಡೆಯ ಅಧಿಕಾರಿ ಹುದ್ದೆಯ ವರೆಗೆ ನಿಶೆಲ್ ಅವರ ಪಯಣ, ಪರಿಶ್ರಮ ಮತ್ತು ಧೈರ್ಯ ಇದ್ದರೆ ಯಾವುದೇ ಗುರಿ ಅಸಾಧ್ಯವಲ್ಲ ಎಂಬುದಕ್ಕೆ ನಿಶೆಲ್ ಸಾಧನೆ ಸಾಕ್ಷಿಯಾಗಿದೆ.
30-07-26 09:27 pm
HK News Staffer
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
30-07-26 09:24 pm
HK News Staffer
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm
ಪರಿಷತ್ ಸ್ಥಾನ ಕೊಡಿಸುವುದಾಗಿ ಹೇಳಿ ಒಂದೂವರೆ ಕೋಟಿ ಪ...
30-07-26 12:18 pm
ಮಂಗಳೂರು ಪೊಲೀಸರಿಂದ 82 ಕೋಟಿ ರೂ. ಮೌಲ್ಯದ ಡ್ರಗ್ಸ್...
29-07-26 10:45 pm