ಬ್ರೇಕಿಂಗ್ ನ್ಯೂಸ್
30-05-26 08:06 pm HK News Desk ಕರಾವಳಿ
ಮಂಗಳೂರು, ಮೇ 30: ರಸ್ತೆ ಅಪಘಾತಗಳನ್ನು ತಡೆಗಟ್ಟುವ ಹಾಗೂ ದ್ವಿಚಕ್ರ ವಾಹನ ಸವಾರರ ಸುರಕ್ಷತೆಯನ್ನು ಹೆಚ್ಚಿಸುವ ದೃಷ್ಟಿಯಿಂದ ಕಳೆದ ಒಂದು ವಾರದ ಅವಧಿಯಲ್ಲಿ ಹೆಲ್ಮೆಟ್ ಧರಿಸದೇ ವಾಹನ ಚಲಾಯಿಸುವವರು ಮತ್ತು Wrong Side ವಾಹನ ಚಲಾಯಿಸುವವರ ವಿರುದ್ಧ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ದ್ವಿಚಕ್ರ ವಾಹನಗಳಿಗೆ ಸಂಬಂಧಿಸಿದ ಅಪಘಾತಗಳಲ್ಲಿ ತಲೆಗೆ ಗಂಭೀರ ಗಾಯಗಳಾಗಿ ಸಾವನ್ನಪ್ಪುವ ಹಾಗೂ ಗಂಭೀರ ಗಾಯಗೊಳ್ಳುವ ಪ್ರಕರಣಗಳು ಹೆಚ್ಚುತ್ತಿದೆ. ಸಂಚಾರ ನಿಯಮಗಳನ್ನು ಉಲ್ಲಂಘಿಸಿ Wrong Side ವಾಹನ ಚಲಾಯಿಸುವುದರಿಂದ ಮುಖಾಮುಖಿ ಡಿಕ್ಕಿ, ಪಾದಚಾರಿಗಳಿಗೆ ಅಪಾಯ ಹಾಗೂ ಇತರೆ ವಾಹನಗಳಿಗೆ ತೊಂದರೆಯಾಗುವ ಘಟನೆಗಳು ನಡೆಯುತ್ತಿದೆ.
ಈ ಹಿನ್ನೆಲೆಯಲ್ಲಿ ಸಂಚಾರ ನಿಯಮಗಳ ಕಟ್ಟುನಿಟ್ಟಿನ ಅನುಷ್ಠಾನ ಹಾಗೂ ಸಾರ್ವಜನಿಕರಲ್ಲಿ ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ವಿಶೇಷ ಕಾರ್ಯಾಚರಣೆ ಹಮ್ಮಿಕೊಳ್ಳಲಾಗಿದೆ. ಕಾರ್ಯಾಚರಣೆ ವೇಳೆ ನಗರದ ಪ್ರಮುಖ ಜಂಕ್ಷನ್‌ಗಳು, ಎನ್.ಹೆಚ್. 66 ಮತ್ತು 169 ಹೆದ್ದಾರಿಗಳಲ್ಲಿ, ನಗರದ ಹೊರವಲಯಗಳಲ್ಲಿ ಹಾಗೂ ಅಪಘಾತ ಹೆಚ್ಚಾಗಿ ಸಂಭವಿಸುವ ಸ್ಥಳಗಳಲ್ಲಿ ವಿಶೇಷ ತಪಾಸಣೆ ನಡೆಸಿ ಪ್ರಕರಣ ದಾಖಲಿಸಲಾಯಿತು.
ಕಾರ್ಯಾಚರಣೆ ಸಂದರ್ಭದಲ್ಲಿ ಹೆಲ್ಮೆಟ್ ಧರಿಸದೇ ವಾಹನ ಚಲಾಯಿಸಿದವರ ವಿರುದ್ಧ 1050 ಪ್ರಕರಣಗಳನ್ನು ದಾಖಲಿಸಿದ್ದು, ನಿಯಮ ಉಲ್ಲಂಘಿಸಿದ ವಾಹನ ಸವಾರರಿಗೆ ಒಟ್ಟು ₹ 4,63,500/- ದಂಡ ವಿಧಿಸಲಾಗಿದೆ. ಅದೇ ರೀತಿ, Wrong Side ವಾಹನ ಚಲಾಯಿಸಿದ 322 ಪ್ರಕರಣಗಳು ಪತ್ತೆಯಾಗಿದ್ದು, ಸದರಿ ವಾಹನ ಸವಾರರಿಗೆ ಒಟ್ಟು ₹1,61,000/- ದಂಡ ವಿಧಿಸಲಾಗಿರುತ್ತದೆ. ಈ ವಿಶೇಷ ಕಾರ್ಯಾಚರಣೆಯಲ್ಲಿ ಒಟ್ಟು ದ್ವಿಚಕ್ರ ವಾಹನಗಳ ವಿರುದ್ದ 1372 ಪ್ರಕರಣಗಳನ್ನು ದಾಖಲಿಸಲಾಗಿದೆ.
ಅಲ್ಲದೇ, ರಾಷ್ಟೀಯ ಹೆದ್ದಾರಿ-169 (ಬಿಕರ್ನಕಟ್ಟೆ – ಮೂಡುಬಿದ್ರೆ – ಬೆಳುವಾಯಿ ರಸ್ತೆ) ಯಲ್ಲಿ ನಡೆಯುವ ರಸ್ತೆ ಅಪಘಾತ ಪ್ರಕರಣಗಳಲ್ಲಿ ಶೀಘ್ರವಾಗಿ ಸ್ಪಂದಿಸಲು, ಸಾರ್ವಜನಿಕರಲ್ಲಿ ರಸ್ತೆ ಸುರಕ್ಷತೆ ಕುರಿತು ಜಾಗೃತಿ ಮೂಡಿಸಲು ಹಾಗೂ ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಕ್ಕೆ ತರಲು ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಎನ್.ಹೆಚ್. 169 ಹೆದ್ದಾರಿಯ ಬೈತುರ್ಲಿಯಿಂದ ಮಿಜಾರ್ ವರೆಗೆ ಹೆಚ್ಚುವರಿಯಾಗಿ ಹೈವೇ ಪೆಟ್ರೋಲ್ ವಾಹನವನ್ನು ನಿಯೋಜಿಸಲಾಗಿದೆ. (ಸುಮಾರು 20 ಕಿಮೀ) ಮೂಡಬಿದ್ರೆ ಠಾಣಾ ಸರಹದ್ದಿನಲ್ಲಿ ಹಾದು ಹೋಗುವ ರಾ.ಹೆ.ಯಲ್ಲಿ ಈಗಾಗಲೇ ಒಂದು ಹೈವೇ ಪ್ರಟ್ರೋಲ್ ವಾಹನವು ಕಾರ್ಯಾಚರಣೆ ನಡೆಸುತ್ತಿದೆ. ಈ ವಾಹನಗಳು ನಿಗದಿಪಡಿಸಿದ ಕಾರ್ಯ ವ್ಯಾಪ್ತಿಯೊಳಗೆ 24*7 ಕಾಲ ಕರ್ತವ್ಯದಲ್ಲಿರುತ್ತದೆ ಎಂದು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ತಿಳಿಸಿದ್ದಾರೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm