ಬ್ರೇಕಿಂಗ್ ನ್ಯೂಸ್
05-06-26 01:25 pm HK News Staffer ಕರಾವಳಿ
ಕಾರವಾರ, ಜೂನ್ 5: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಮೇ 24ರಂದು ನಡೆದ ಮುರಿನಕಟ್ಟೆ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ವಿವಿಧ ಹಿಂದೂಪರ ಸಂಘಟನೆಗಳು ಇಂದು ಸ್ವಯಂಪ್ರೇರಿತ ಭಟ್ಕಳ ಬಂದ್‌ಗೆ ಕರೆ ನೀಡಿವೆ. ಪ್ರಕರಣದಲ್ಲಿ ಪ್ರಮುಖ ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಂಡಿಲ್ಲ ಹಾಗೂ ಹಿಂದೂ ಕಾರ್ಯಕರ್ತರನ್ನೇ ಗುರಿಯಾಗಿಸಲಾಗಿದೆ ಎಂಬ ಆರೋಪ ಮುಂದಿಟ್ಟು ಪ್ರತಿಭಟನೆ ಕೈಗೊಳ್ಳಲಾಗಿದೆ.
ಮೇ 24ರಂದು ಭಟ್ಕಳದ ಶಿರಾಲಿಯ ವೆಂಕಟಾಪುರ ನದಿ ತೀರದಲ್ಲಿ ಕಪ್ಪೆಚಿಪ್ಪು ಸಂಗ್ರಹಿಸಲು ತೆರಳಿದ್ದ ಮಹಿಳೆಯರು ಸೇರಿದಂತೆ 11 ಮಂದಿ ಮೃತಪಟ್ಟ ಘಟನೆ ಇಡೀ ಪ್ರದೇಶವನ್ನು ಶೋಕದಲ್ಲಿ ಮುಳುಗಿಸಿತ್ತು. ಇದೇ ಸಂದರ್ಭದಲ್ಲಿ ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದಲ್ಲಿದ್ದ ನಿರ್ಮಾಣ ಹಂತದ ಮುರಿನಕಟ್ಟೆಯನ್ನು ಗುಂಪೊಂದು ಧ್ವಂಸಗೊಳಿಸಿದ ಘಟನೆ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಘಟನೆಯನ್ನು ತಡೆಯಲು ಬಂದ ಪೊಲೀಸರ ಮೇಲೆಯೂ ಹಲ್ಲೆ ನಡೆದಿರುವ ಆರೋಪ ಕೇಳಿಬಂದಿದ್ದು, ಬಳಿಕ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು.
ನಿಷೇಧಾಜ್ಞೆ, ಭಾರಿ ಪೊಲೀಸ್ ಬಂದೋಬಸ್ತ್
ವಿಷಯ ಗಂಭೀರ ಸ್ವರೂಪ ಪಡೆಯುತ್ತಿದ್ದಂತೆ ಜಿಲ್ಲಾಡಳಿತ ಮೇ 25ರಿಂದ ಮೇ 27ರ ವರೆಗೆ ಭಾರತೀಯ ನಾಗರಿಕ ಸುರಕ್ಷತಾ ಸಂಹಿತೆ (ಬಿಎನ್‌ಎಸ್‌ಎಸ್) ಕಲಂ 163ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿತ್ತು. ಭಟ್ಕಳ ನಗರ ಹಾಗೂ ಜಾಲಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಮದ್ಯ ಮಾರಾಟಕ್ಕೂ ತಾತ್ಕಾಲಿಕ ನಿಷೇಧ ಹೇರಲಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಐದು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ಅಪ್ರಾಪ್ತರು ಸೇರಿದಂತೆ ಹಲವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ 40ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ. ಆದರೆ ಗಲಾಟೆಯಲ್ಲಿ ಭಾಗಿಯಾಗಿದ್ದ ಪ್ರಮುಖ ವ್ಯಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳದೆ, ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಹಿಂದೂ ಮುಖಂಡರು ಹಾಗೂ ಕಾರ್ಯಕರ್ತರ ವಿರುದ್ಧವೇ ಹೆಚ್ಚಿನ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಹಿಂದೂಪರ ಸಂಘಟನೆಗಳು ಆರೋಪಿಸಿವೆ. ಈ ಹಿನ್ನೆಲೆಯಲ್ಲಿ ಮಾಜಿ ಶಾಸಕ ಸುನಿಲ್ ನಾಯ್ಕ ಸೇರಿದಂತೆ ಹಲವರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಲಾಗಿದೆ.
ಬಂದ್ ಮತ್ತು ಪ್ರತಿಭಟನಾ ಮೆರವಣಿಗೆ
ಇಂದು ಮಧ್ಯಾಹ್ನ 3 ಗಂಟೆಗೆ ನಗರದ ಚನ್ನಪಟ್ಟಣ ಹನುಮ ದೇವಾಲಯದಿಂದ ಪ್ರತಿಭಟನಾ ಮೆರವಣಿಗೆ ಆರಂಭವಾಗಿ ರಾಷ್ಟ್ರೀಯ ಹೆದ್ದಾರಿ 66 ಮೂಲಕ ಉಪ ವಿಭಾಗಾಧಿಕಾರಿಗಳ ಕಚೇರಿ ವರೆಗೆ ಸಾಗಲಿದೆ. ಧ್ವಂಸಗೊಂಡ ಸ್ಥಳದ ಸಮೀಪದಲ್ಲೇ ಪರ್ಯಾಯ ಜಾಗ ಗುರುತಿಸಿ ಹೊಸ ಕಟ್ಟೆ ನಿರ್ಮಿಸಲು ಜಿಲ್ಲಾಡಳಿತ ಮುಂದಾಗಿದೆ. ಈ ಬಗ್ಗೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾಹಿತಿ ನೀಡಿದ್ದು, ಶೀಘ್ರದಲ್ಲೇ ಕಟ್ಟೆ ನಿರ್ಮಾಣ ಕಾಮಗಾರಿ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ.
30-07-26 09:27 pm
HK News Staffer
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
30-07-26 09:24 pm
HK News Staffer
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm
ಪರಿಷತ್ ಸ್ಥಾನ ಕೊಡಿಸುವುದಾಗಿ ಹೇಳಿ ಒಂದೂವರೆ ಕೋಟಿ ಪ...
30-07-26 12:18 pm
ಮಂಗಳೂರು ಪೊಲೀಸರಿಂದ 82 ಕೋಟಿ ರೂ. ಮೌಲ್ಯದ ಡ್ರಗ್ಸ್...
29-07-26 10:45 pm