ಬ್ರೇಕಿಂಗ್ ನ್ಯೂಸ್
06-01-21 04:09 pm Mangalore Correspondent ಕರಾವಳಿ
ಮಂಗಳೂರು, ಜ. 6: ಡ್ರಗ್ಸ್ ಸೇವನೆ ಮತ್ತು ಮಾರಾಟ ಪ್ರಕರಣಗಳಲ್ಲಿ ಆರೋಪಿಗಳಾಗಿರುವ ಮಂದಿಯನ್ನು ಕರೆದು ಪರೇಡ್ ನಡೆಸುವ ಮೂಲಕ ನೂತನ ಪೊಲೀಸ್ ಆಯುಕ್ತ ಎಂ. ಶಶಿ ಕುಮಾರ್ ಖಡಕ್ ವಾರ್ನ್ ಮಾಡಿದ್ದಾರೆ.
ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಕಮಿಷನರೇಟ್ ವ್ಯಾಪ್ತಿಯ ಆರೋಪಿಗಳ ಪರೇಡ್ ನಡೆಸಿದ್ದಾರೆ. ಡ್ರಗ್ಸ್ ಪ್ರಕರಣದಲ್ಲಿ ಪೊಲೀಸರು ಮನೆಗೆ ಬಂದು ವಿಚಾರಿಸುವುದು, ಇದರಿಂದ ಮನೆಯವರು ಕೋರ್ಟ್ ಕಚೇರಿ ಅಲೆದಾಡುವ ಸ್ಥಿತಿಗೆ ಅವಕಾಶ ನೀಡಬಾರದು. ವ್ಯಸನ ಮುಂದುವರಿಸಿದರೆ ಕಾನೂನಿನಲ್ಲಿ ಇರುವ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸಮಾಜದಲ್ಲಿ ತಮ್ಮ ಸುತ್ತಮುತ್ತ ಇಂತಹ ದುಶ್ಚಟಗಳ ಬಗ್ಗೆ ಮಾಹಿತಿ ಇದ್ದಲ್ಲಿ, 112ಗೆ ದೂರು ನೀಡಿದರೆ ಕ್ರಮ ಕೈಗೊಳ್ಳಲಾಗುವುದು. ಪೊಲೀಸ್ ಅಧಿಕಾರಿಗಳು ಕೂಡ ತಮ್ಮ ಠಾಣೆ ವ್ಯಾಪ್ತಿಯಲ್ಲಿ ಈ ನಿಟ್ಟಿನಲ್ಲಿ ನಿಗಾ ವಹಿಸಿ ವ್ಯಾಪ್ತಿಯನ್ನು ಡ್ರಗ್ಸ್ ಮುಕ್ತವಾಗಿಸಲು ಪ್ರಯತ್ನಿಸಬೇಕು ಎಂದು ಆಯುಕ್ತರು ಹೇಳಿದರು.


ಡ್ರಗ್ಸ್ ಸೇವನೆ ಹಾಗೂ ಅಡ್ಡಾಗಳ ಮೇಲೆ ಅಧಿಕಾರಿಗಳು ನಿಗಾ ಇರಿಸಬೇಕು. ವ್ಯಸನಿಗಳು ಪತ್ತೆಯಾದಾಗ ಅವರ ಕುಟುಂಬದವನ್ನು ಸಂಪರ್ಕಿಸಿ ಮಾಹಿತಿಯನ್ನು ಕಲೆ ಹಾಕಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಸ್ಸು ನಿಲ್ದಾಣ, ಮೈದಾನಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ರಾತ್ರಿ ಹೊತ್ತು ಕುಡಿಯುವುದು, ಸಾರ್ವಜನಿಕರಿಗೆ ತೊಂದರೆ ಕೊಡುವವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ವಹಿಸಲಾಗುವುದು. ನಿನ್ನೆ ರಾತ್ರಿ ಮತ್ತೆ ಮದ್ಯಪಾನ ನಿರತರಾಗಿದ್ದ 6 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳಲ್ಲಿ ತಮ್ಮ ಕೆಟ್ಟ ಹವ್ಯಾಸವನ್ನು ಬಿಟ್ಟು ಉತ್ತಮವಾಗಿ ಬದುಕಲು, ಉದ್ಯೋಗಕ್ಕೆ ಮುಂದಾಗುವುದಿದ್ದಲ್ಲಿ ನಮಗೆ ತಿಳಿಸಿದರೆ ಕ್ರಮ ವಹಿಸಲಾಗುವುದು ಎಂದು ಮಿಷನರ್ ಶಶಿಕುಮಾರ್ ತಿಳಿಸಿದರು.


ಈ ಸಂಧರ್ಭ ಡಿಸಿಪಿ ವಿನಯ್ ಗಾಂವ್ಕರ್ ಹಾಗೂ ಎಸಿಪಿಗಳು ಸೇರಿದಂತೆ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.
ಪರೇಡ್ ಜತೆ ಮಾರ್ಚ್ ಫಾಸ್ಟ್...!
ಪರೇಡ್ ಬಳಿಕ ಮೈದಾನದಲ್ಲಿ ಠಾಣಾ ವ್ಯಾಪ್ತಿಯ ಆರೋಪಿಗಳನ್ನು ಮೈದಾನಕ್ಕೆ ಸುಮಾರು 3 ಸುತ್ತುಗಳ ಮಾರ್ಚ್ ಫಾಸ್ಟನ್ನು ಪೊಲೀಸ್ ಆಯುಕ್ತ ಶಶಿಕುಮಾರ್ ನಡೆಸಿದರು.
Video:
Police commissioner N Shashi Kumar on Wednesday January 6 issued stringent warning to offenders of Narcotic Drugs and Psychotropic Substances Act (NDPS) and asked them to refrain from illegal activities.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
10-10-26 10:31 pm
HK News Staffer
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
ನಂದಿಗ್ರಾಮ, ರೇಜಿನಗರದಲ್ಲಿ ಬಿಜೆಪಿಗೆ ಭರ್ಜರಿ ಜಯ ;...
09-10-26 11:04 pm
ಸರ್ಕಾರಿ ಸಂಸ್ಥೆಯಿಂದ ಕೋಟ್ಯಂತರ ದೇಣಿಗೆ ; ಪಿಣರಾಯಿ...
09-10-26 05:40 pm
Prakash Raj, Dhruv Rathee: SIR ರದ್ದತಿಗೆ ಬೆಂಗಳ...
08-10-26 08:03 pm
10-10-26 09:27 pm
HK News Staffer
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
ಮೂಡುಶೆಡ್ಡೆ ; ಮುಸ್ಲಿಮರ ದಫನಕ್ಕೆ 2 ಎಕರೆ ಪಿಲಿಕುಳದ...
10-10-26 03:21 pm
Nana patekar: ಮಂಗಳೂರು, ಉಡುಪಿಯೊಂದಿಗೆ ನಾನಾ ಪಾಟೇ...
08-10-26 04:30 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm