ಬ್ರೇಕಿಂಗ್ ನ್ಯೂಸ್
12-06-26 04:31 pm HK News Staffer ಕರಾವಳಿ
ಉಡುಪಿ, ಜೂನ್ 12: ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಕೊಲ್ಲೂರು ಮೂಕಾಂಬಿಕೆಯ ದರ್ಶನ ಮಾಡಿ ವಿಶೇಷ ಪೂಜೆ ನೆರವೇರಿಸಿದ್ದಾರೆ. ಈ ವೇಳೆ, ಒಂದು ಕೇಜಿ 600 ಗ್ರಾಮ್ ತೂಕದ ಬೆಳ್ಳಿ ಕಡಗವನ್ನು ದೇವಿಗೆ ಅರ್ಪಿಸಿದ್ದಾರೆ.
ಮಧ್ಯಾಹ್ನ 3.30ರ ವೇಳೆಗೆ ಮಂಗಳೂರು ವಿಮಾನ ನಿಲ್ದಾಣದಿಂದ ರಸ್ತೆ ಮೂಲಕ ಉಡುಪಿ ಜಿಲ್ಲೆಯ ಕೊಲ್ಲೂರಿಗೆ ಆಗಮಿಸಿದ ವಿಜಯ್ ಶರ್ಟ್, ಬನಿಯಾನ್ ಕಳಚಿ ಕೇವಲ ಲುಂಗಿ ಮತ್ತು ಶಲ್ಯವನ್ನು ಮೈಗೆ ಸುತ್ತಿಕೊಂಡು ದೇವರ ದರ್ಶನ ಮಾಡಿದ್ದಾರೆ. ದೇವರಿಗೆ ಸಂಕಲ್ಪ ಪೂಜೆ ಮಾಡಿ ಕೇವಲ 20 ನಿಮಿಷ ಮಾತ್ರ ದೇವಸ್ಥಾನದಲ್ಲಿ ಕಳೆದಿದ್ದಾರೆ.

ದೇವರ ದರ್ಶನ ಸಂದರ್ಭದಲ್ಲಿ ವಿಜಯ್ ಅವರು 1 ಕೇಜಿ 600 ಗ್ರಾಮ್ ತೂಕದ ಬೆಳ್ಳಿ ಕಡಗವನ್ನು ಅರ್ಪಿಸಿದ್ದಾರೆಂದು ಕೊಲ್ಲೂರು ದೇಗುಲದ ಆಡಳಿತ ಸಮಿತಿ ಅಧ್ಯಕ್ಷ ಬಾಬು ಹೆಗ್ಡೆ ಮಾಧ್ಯಮಕ್ಕೆ ತಿಳಿಸಿದ್ದಾರೆ. ಕೊಲ್ಲೂರು ದೇಗುಲ ದೇಶದ ಪ್ರಖ್ಯಾತ ಶಕ್ತಿಪೀಠಗಳಲ್ಲಿ ಒಂದಾಗಿದ್ದು ತಮಿಳುನಾಡು ಮತ್ತು ಕೇರಳದ ಅಸಂಖ್ಯಾತ ಭಕ್ತರು ಆಗಮಿಸುತ್ತಾರೆ. ಹಿಂದೆ ತಮಿಳುನಾಡು ಸಿಎಂ ಆಗಿದ್ದ ಎಂಜಿಆರ್, ಜಯಲಲಿತಾ ಕೂಡ ಹಲವು ಬಾರಿ ಕೊಲ್ಲೂರಿಗೆ ಭೇಟಿ ನೀಡಿದ್ದರು. ಎಂಜಿಆರ್ ಅವರು ಒಂದು ಕೇಜಿಯ ಚಿನ್ನದ ಖಡ್ಗವನ್ನು ದೇವಿಗೆ ಅರ್ಪಿಸಿದ್ದರು.
ಈ ಬಾರಿ ಜೋಸೆಫ್ ವಿಜಯ್ ಸಿಎಂ ಹುದ್ದೆಗೇರಿ ಒಂದು ತಿಂಗಳು ಭರ್ತಿ ಆಗುತ್ತಲೇ ದಿಢೀರ್ ಆಗಿ ಕೊಲ್ಲೂರಿಗೆ ಆಗಮಿಸಿ ದೇವಿಯ ದರ್ಶನ ಪಡೆದಿದ್ದು ವಿಶೇಷ. ವಿಜಯ್ ಹೆತ್ತವರು ಚುನಾವಣೆಗೂ ಮುನ್ನ ಹರಕೆ ಹೊತ್ತಿದ್ದು ಪ್ರಾರ್ಥನೆ ಫಲಿಸಿದ ಹಿನ್ನೆಲೆಯಲ್ಲಿ ವಿಜಯ್ ಈಗ ದೇಗುಲಕ್ಕೆ ಬಂದಿದ್ದಾರೆ ಎನ್ನಲಾಗುತ್ತಿದೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm