ಬ್ರೇಕಿಂಗ್ ನ್ಯೂಸ್
19-06-26 09:05 pm HK News Staffer ಕರಾವಳಿ
ಮಂಗಳೂರು, ಜೂನ್ 19: ಕರಾವಳಿ ಸಂಸ್ಕೃತಿಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಸಾರ ಮಾಡುವುದರ ಜತೆಗೆ ಹೆಚ್ಚು ಉದ್ಯೋಗ ಸೃಷ್ಟಿ, ಆರ್ಥಿಕ ಬೆಳವಣಿಗೆಗೆ ಆದ್ಯತೆ ನೀಡಬೇಕು. ಇದಕ್ಕಾಗಿ ಸಿಆರ್ ಝೆಡ್, ಅರಣ್ಯ ಇಲಾಖೆಯ ತೊಡಕುಗಳನ್ನು ನಿವಾರಿಸಬೇಕು. ಈ ಬಗ್ಗೆ ಚರ್ಚಿಸಲು ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ನಡೆಸಲಾಗುವುದು ಎಂದು ಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶುಕ್ರವಾರ ಸಿಎಂ ಡಿ.ಕೆ ಶಿವಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿ ಕುರಿತ ಸಮಾಲೋಚನೆ ಸಭೆಯಲ್ಲಿ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಯಿತು. ಅತಿ ಉದ್ದದ ಸಮುದ್ರ ತೀರಗಳು ಇರುವ ಪ್ರದೇಶಗಳಲ್ಲಿ ರಾಜ್ಯದ ಕರಾವಳಿಯೂ ಸೇರಿದೆ. ನಮ್ಮ ಪರಿಸರಕ್ಕೆ ಧಕ್ಕೆ ಆಗದಂತೆ ಸಮುದ್ರ ತೀರಗಳನ್ನು ಪ್ರವಾಸೋದ್ಯಮ ಅಭಿವೃದ್ಧಿಯಲ್ಲಿ ಪರಿಗಣಿಸಬೇಕಾಗಿದ್ದು ಈ ಬಗ್ಗೆ ಅಧಿಕಾರಿಗಳು ಮುತುವರ್ಜಿ ವಹಿಸಬೇಕು. ಸಿಆರ್‌ಝಡ್ ಮತ್ತು ಅರಣ್ಯ ಇಲಾಖೆಯಿಂದ ಆಗುತ್ತಿರುವ ತಾಂತ್ರಿಕ ತಕರಾರುಗಳ ಬಗ್ಗೆ 15-20 ದಿನಗಳಲ್ಲಿ ವರದಿ ಸಿದ್ದಪಡಿಸಬೇಕು. ಸಮಸ್ಯೆಗಳು ಮತ್ತು ಪರಿಹಾರ ಕ್ರಮಗಳ ಬಗ್ಗೆಯೂ ವರದಿ ಸಿದ್ದಪಡಿಸಿ ಎಂದು ಸಿಎಂ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.
ಪ್ತವಾಸೋದ್ಯಮ ಅಭಿವೃದ್ಧಿ ವಿಚಾರದಲ್ಲಿ ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ನಡೆಸಲಾಗುವುದು. ಅಷ್ಟರೊಳಗೆ ಯಾವುದೇ ತಾಂತ್ರಿಕ ಸಮಸ್ಯೆಗಳಿದ್ದರೂ ಪರಿಹಾರ ಸಿದ್ಧಪಡಿಸಿರಬೇಕು ಎಂದು ಡಿ.ಕೆ.ಶಿವಕುಮಾರ್ ಸೂಚನೆ ನೀಡಿದ್ದಾರೆ. ಹೂಡಿಕೆದಾರರಿಗೆ ಸರಳವಾದ ಮಾರ್ಗಗಳನ್ನು ಸೃಜಿಸಬೇಕಿದ್ದು ಕಾನೂನು ನೆಪದಲ್ಲಿ ಆಗುತ್ತಿರುವ ಕಿರಿಕಿರಿಗಳಿಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಸಭೆಯಲ್ಲಿ ಸಿಎಂ ಸೂಚನೆ ನೀಡಿದ್ದಾರೆ.

ಸದ್ಯ ಅನುಮೋದಿಸಿರುವ 45 ಯೋಜನೆಗಳಿಂದ 4500 ಉದ್ಯೋಗ ಸೃಷ್ಟಿಯಾಗಲಿದೆ. ಈ ಪ್ರಮಾಣ ಇನ್ನಷ್ಟು ಹೆಚ್ಚಾಗಬೇಕು. ಇದಕ್ಕಾಗಿ ಇಲಾಖೆಯಿಂದ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ವರದಿ ತಯಾರಿಸಬೇಕು ಎಂದು ಡಿಕೆಶಿ ಹೇಳಿದ್ದಾರೆ.
ಸಭೆಯಲ್ಲಿ ಉಪಸ್ಥಿತರಿದ್ದ ನಟ ರಿಷಬ್ ಶೆಟ್ಟಿ, ಕಲೆಗೆ ಪ್ರಾಶಸ್ತ್ಯ ಹೆಚ್ಚಿಸಬೇಕು, ಕರಾವಳಿಯ ಜನಪದ ಕಲೆ, ಸಂಗೀತಕ್ಕೆ ಪ್ರೋತ್ಸಾಹ ನೀಡುವಂತಾಗಬೇಕು ಎಂದು ಸಲಹೆ ಮಾಡಿದರು. ಕರಾವಳಿಯಲ್ಲಿ ಸಿನಿಮಾ ಚಿತ್ರೀಕರಣಕ್ಕೆ ಹೆಚ್ಚಿನ ಅನುಕೂಲ ಕಲ್ಪಿಸುವುದರಿಂದ ಕೇರಳ- ಗೋವಾ-ಕರ್ನಾಟಕದ ಸಿನಿಮಾ ಜಗತ್ತಿಗೆ ಹೆಚ್ಚು ಅನುಕೂಲವಾಗಲಿದೆ ಎಂದು ಹೇಳಿದರು. ಇದೇ ವೇಳೆ, ಅಭಿವೃದ್ಧಿ ಯೋಜನೆಗಳಿಗೆ ತಾಂತ್ರಿಕ ತೊಂದರೆ ಆಗದಂತೆ ನಾನಾ ಅನುಮತಿಗಳನ್ನು ಪಡೆಯಲು ಏಕಗವಾಕ್ಷಿ (ಸಿಂಗಲ್ ವಿಂಡೋ) ವ್ಯವಸ್ಥೆ ಜಾರಿಗೆ ಸಿಎಂ ಒಲವು ತೋರಿದರು.
ಹೆಲಿ ಟೂರಿಸಂ ಅಭಿವೃದ್ಧಿಗೆ ಒತ್ತು ನೀಡಬೇಕೆಂದು ಸಿಎಂಗೆ ಕೆಲವು ಉದ್ಯಮಿಗಳು ಮನವಿ ಮಾಡಿದರು. ಇದಲ್ಲದೆ, ಪ್ರವಾಸೋದ್ಯಮ ವಲಯಗಳು, ಬೃಹತ್ ಪ್ರವಾಸೋದ್ಯಮ ಯೋಜನೆಗಳು, ಕರಾವಳಿ ಮೇಳಗಳು, ಉತ್ಸವವಗಳು ಮತ್ತು ಮಾರ್ಕೆಟಿಂಗ್, ಕರಾವಳಿ ಸಂಸ್ಕೃತಿ, ಆಚರಣೆ ಮಹತ್ವವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಸಾರ ಮತ್ತು ಪ್ರಚಾರ ಮಾಡುವ ಬಗ್ಗೆ ಸರ್ಕಾರದಿಂದ ಬಂಡವಾಳ ಆಕರ್ಷಿಸಲು ಸಹಾಯಧನ, ಬಡ್ಡಿ ಸಹಾಯಧನ ಮತ್ತು ರಿಯಾಯ್ತಿಗಳನ್ನು ನೀಡುವ ಬಗ್ಗೆ ಮುಖ್ಯಮಂತ್ರಿಗಳು ಸಲಹೆ ನೀಡಿದರು.
ಸಭೆಯಲ್ಲಿ ಇಂಧನ ಮತ್ತು ಪ್ರವಾಸೋದ್ಯಮ ಸಚಿವ ಕೆ.ಜೆ ಜಾರ್ಜ್, ಖ್ಯಾತ ನಟ ರಿಷಬ್ ಶೆಟ್ಟಿ, ಶಾಸಕರಾದ ಜಿ.ಟಿ ದೇವೇಗೌಡ, ಸತೀಶ್ ಸೈಲ್, ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಶ್ರೀನಿವಾಸ್, ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿ ತ್ರಿಲೋಕ್ ಚಂದ್ರ ಮತ್ತಿತರರು ಉಪಸ್ಥಿತರಿದ್ದರು.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
08-10-26 08:03 pm
HK News Staffer
ಭಾರತೀಯ ಪೈಲಟ್ ಸಾಹಸಕ್ಕೆ ಅಮೆರಿಕ ಸಂಸತ್ ಗೌರವ ; 17...
07-10-26 01:10 pm
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
08-10-26 04:30 pm
HK News Staffer
Santhosh laad, Araga jnanendra ಕಾರ್ಮಿಕ ಇಲಾಖೆಯ...
08-10-26 04:27 pm
ಆಟೋದಲ್ಲಿ 48 ಗ್ರಾಂ ಚಿನ್ನ ಬಿಟ್ಟುಹೋದ ಮಹಿಳೆ ; ‘ಚಿ...
08-10-26 12:06 pm
Kural Tulu Touch, Tulu lipi: ತುಳು ಲಿಪಿಗೆ ಡಿಜಿ...
07-10-26 02:39 pm
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
09-10-26 10:01 am
HK News Staffer
ದಾಂಡಿಯಾ ಹೆಸರಿನಲ್ಲಿ ಅಸಭ್ಯ ನೃತ್ಯ, ಫ್ಯಾಷನ್ ಶೋ, ಪ...
08-10-26 08:44 pm
ಹೆದ್ದಾರಿ ದಾಟುತ್ತಿದ್ದ ಕುರಿ-ಮೇಕೆಗಳ ಹಿಂಡಿಗೆ ಲಾರಿ...
08-10-26 08:07 pm
Online game, Death: ಆನ್ಲೈನ್ ಗೇಮ್ಗಾಗಿ 4 ಲಕ್ಷ...
08-10-26 04:56 pm
CBI ಹೆಸರಲ್ಲಿ ಬೆದರಿಕೆ, ‘ಡಿಜಿಟಲ್ ಅರೆಸ್ಟ್’ ನಾಟಕ...
08-10-26 11:08 am