ಬ್ರೇಕಿಂಗ್ ನ್ಯೂಸ್
06-01-21 10:34 pm Mangaluru Correspondent ಕರಾವಳಿ
ಕೊಣಾಜೆ, ಜ .6: ಮುಡಿಪು ಸಮೀಪದ ಬಾಳೆಪುಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಂಡಿಕಟ್ಟ ಗಣಿಗಾರಿಕೆ ಚಟುವಟಿಕೆ ಪ್ರದೇಶಕ್ಕೆ ಗಣಿ ಮತ್ತು ಭೂ ವಿಜ್ಞಾನ ಸಚಿವರಾದ ಸಿ.ಸಿ. ಪಾಟೀಲ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸಚಿವರು ಗಣಿಗಾರಿಕೆ ಹಾಗೂ ಅಕ್ರಮ ಮಣ್ಣು ಸಾಗಾಟ ಆರೋಪ ವಿಷಯಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕುಮಾರ್ ಅವರಿಂದ ಮಾಹಿತಿ ಪಡೆದುಕೊಂಡರು.
ಈ ಸಂದರ್ಭದಲ್ಲಿ ಗಣಿಗಾರಿಕೆ ಪ್ರದೇಶದ ಕುರಿತು ವಿವರಿಸಿದ ಜಿಲ್ಲಾಧಿಕಾರಿಯವರು, ಇದು ಗ್ರಾಮೀಣ ಪ್ರದೇಶವಾಗಿದ್ದು, ಈಗಾಗಲೇ ಈ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ನಿಲ್ಲಿಸಲಾಗಿದೆ. ನೆಲ ಸಮತಟ್ಟು ಮಾಡಲು ಪರವಾನಿಗೆ ಪಡೆದುಕೊಂಡು ಅದಕ್ಕಿಂತ ವಿಸ್ತಾರವಾದ ಜಾಗದಲ್ಲಿ ಸಮತಟ್ಟು ಮಾಡಿ, ಮಣ್ಣು ಸಾಗಾಟ ಮಾಡಿದ ಆರೋಪ ಕೇಳಿಬಂದಿದೆ. ಅದಕ್ಕಾಗಿ ಕಾನೂನು ಕ್ರಮ ತೆಗೆದುಕೊಂಡು ತನಿಖೆ ನಡೆಸಲಾಗುತ್ತಿದೆ ಎಂದರು.
ಬಳಿಕ ಈ ಬಗ್ಗೆ ಮಾತನಾಡಿದ ಸಚಿವ ಸಿ.ಸಿ.ಪಾಟೀಲ, ಉತ್ತರ ಕನ್ನಡ, ಬೀದರ್ ಉಡುಪಿ, ದಕ್ಷಿಣ ಕನ್ನಡದಲ್ಲಿ ಇಂತಹ ಗಣಿಗಾರಿಕೆ ವಿಷಯಕ್ಕೆ ಸಂಬಂಧಿಸಿದಂತೆ ಸಮಸ್ಯೆಗಳು ಹೆಚ್ಚಿವೆ. ಗಣಿಗಾರಿಕೆ ವಿವಾದ, ಸಮಸ್ಯೆಗಳಿಗೆ ಸಂಬಂಧಿಸಿದಂತೆ ನ್ಯಾಯಯುತವಾಗಿ ಕ್ರಮ ತೆಗೆದುಕೊಂಡು ಮುನ್ನಡೆಯಬೇಕಿದೆ ಎಂದರು.
ಈ ಸಂದರ್ಭದಲ್ಲಿ ಮಂಗಳೂರು ಉಪ ವಿಭಾಗಾಧಿಕಾರಿ ಮದನ್ ಮೋಹನ್, ತಹಶಿಲ್ದಾರ್ ಗುರುಪ್ರಸಾದ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಪ್ರಭಾರ ಉಪನಿರ್ದೇಶಕ ನಿರಂಜನ್, ಭೂ ಹಾಗೂ ಗಣಿ ಇಲಾಖೆಯ ಎಂಜಿನಿಯರ್ ಸುಷ್ಮಾ, ಬಾಳೆಪುಣಿ ಗ್ರಾಮ ಪಂಚಾಯಿತಿ ಪಿಡಿಒ ಸುನೀಲ್, ಕೊಣಾಜೆ ಠಾಣೆಯ ಪಿಎಸ್ಐ ಯೋಗೀಶ್ವರನ್ ಮೊದಲಾದವರು ಉಪಸ್ಥಿತರಿದ್ದರು.
Minister of Mines and Geology C C Patil visited mining centres in Mudipu, Konaje in Mangalore.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
10-10-26 10:31 pm
HK News Staffer
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
ನಂದಿಗ್ರಾಮ, ರೇಜಿನಗರದಲ್ಲಿ ಬಿಜೆಪಿಗೆ ಭರ್ಜರಿ ಜಯ ;...
09-10-26 11:04 pm
ಸರ್ಕಾರಿ ಸಂಸ್ಥೆಯಿಂದ ಕೋಟ್ಯಂತರ ದೇಣಿಗೆ ; ಪಿಣರಾಯಿ...
09-10-26 05:40 pm
Prakash Raj, Dhruv Rathee: SIR ರದ್ದತಿಗೆ ಬೆಂಗಳ...
08-10-26 08:03 pm
10-10-26 09:27 pm
HK News Staffer
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
ಮೂಡುಶೆಡ್ಡೆ ; ಮುಸ್ಲಿಮರ ದಫನಕ್ಕೆ 2 ಎಕರೆ ಪಿಲಿಕುಳದ...
10-10-26 03:21 pm
Nana patekar: ಮಂಗಳೂರು, ಉಡುಪಿಯೊಂದಿಗೆ ನಾನಾ ಪಾಟೇ...
08-10-26 04:30 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm