ಬ್ರೇಕಿಂಗ್ ನ್ಯೂಸ್
25-06-26 10:56 pm HK News Staffer ಕರಾವಳಿ
ಬೆಂಗಳೂರು, ಜೂನ್ 24: ರಾಜ್ಯದ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಆಧುನೀಕರಿಸುವ ಮಹತ್ವದ ಹೆಜ್ಜೆಯಾಗಿ ಕರ್ನಾಟಕ ಸರ್ಕಾರವು 2026-27ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ "PM e-Bus Sewa" ಯೋಜನೆಯಡಿ 10 ನಗರಗಳಲ್ಲಿ ಎಲೆಕ್ಟ್ರಿಕ್ ಬಸ್‌ಗಳ ಕಾರ್ಯಾಚರಣೆಗೆ ಅಗತ್ಯ ಮೂಲಸೌಕರ್ಯ ನಿರ್ಮಾಣಕ್ಕಾಗಿ ₹2,583 ಕೋಟಿ ಮೊತ್ತದ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡಿದೆ.
ನಗರಾಭಿವೃದ್ಧಿ ಇಲಾಖೆಯಿಂದ ಹೊರಡಿಸಲಾದ ಆದೇಶದ ಪ್ರಕಾರ, ಕೇಂದ್ರ ಸರ್ಕಾರದ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ (MoHUA) PM e-Bus Sewa ಯೋಜನೆಯಡಿ ರಾಜ್ಯದ ಆಯ್ದ ನಗರಗಳಲ್ಲಿ ಎಲೆಕ್ಟ್ರಿಕ್ ಬಸ್‌ಗಳ ಸೇವೆ ವಿಸ್ತರಣೆಗೊಳ್ಳಲಿದೆ. ಈ ಯೋಜನೆಯ ಉದ್ದೇಶ ಪರಿಸರ ಸ್ನೇಹಿ ಸಾರ್ವಜನಿಕ ಸಾರಿಗೆಯನ್ನು ಉತ್ತೇಜಿಸುವುದು ಹಾಗೂ ನಗರ ಪ್ರದೇಶಗಳಲ್ಲಿ ಮಾಲಿನ್ಯ ಕಡಿಮೆ ಮಾಡುವುದಾಗಿದೆ.
ಯೋಜನೆಯಡಿ ಮಂಗಳೂರು, ಮೈಸೂರು, ದಾವಣಗೆರೆ, ತುಮಕೂರು, ಶಿವಮೊಗ್ಗ, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಲಬುರಗಿ, ವಿಜಯಪುರ ಹಾಗೂ ಬಳ್ಳಾರಿ ಸೇರಿದಂತೆ 10 ನಗರಗಳಲ್ಲಿ ಬಸ್ ಡಿಪೋ ಹಾಗೂ ಚಾರ್ಜಿಂಗ್ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲಾಗುವುದು.
ಕೇಂದ್ರ ಸರ್ಕಾರದ PM e-Bus Sewa ಯೋಜನೆಯಡಿಯಲ್ಲಿ ನಗರಗಳ ಜನಸಂಖ್ಯೆ ಆಧರಿಸಿ ಬಸ್‌ಗಳ ಹಂಚಿಕೆ ಮಾಡಲಾಗಿದೆ. 20 ರಿಂದ 40 ಲಕ್ಷ ಜನಸಂಖ್ಯೆಯ ನಗರಗಳಿಗೆ 150 ಬಸ್‌ಗಳು, 10 ರಿಂದ 20 ಲಕ್ಷ ಜನಸಂಖ್ಯೆಯ ನಗರಗಳಿಗೆ 100 ಬಸ್‌ಗಳು ಹಾಗೂ 5 ಲಕ್ಷಕ್ಕಿಂತ ಕಡಿಮೆ ಜನಸಂಖ್ಯೆಯ ನಗರಗಳಿಗೆ 50 ಬಸ್‌ಗಳನ್ನು ಒದಗಿಸುವ ವ್ಯವಸ್ಥೆ ರೂಪಿಸಲಾಗಿದೆ.
ಯೋಜನೆಯ ಒಟ್ಟು ವೆಚ್ಚ ₹2,583 ಕೋಟಿ ಎಂದು ಅಂದಾಜಿಸಲಾಗಿದ್ದು, ಇದರಲ್ಲಿ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಪಾಲುದಾರಿಕೆ ಇರುತ್ತದೆ. ಈಗಾಗಲೇ ಕೇಂದ್ರ ಸರ್ಕಾರವು ವಿವಿಧ ಹಂತಗಳಲ್ಲಿ ಯೋಜನೆಗೆ ಅನುಮೋದನೆ ನೀಡಿದ್ದು, ಅದರಂತೆ ರಾಜ್ಯ ಸರ್ಕಾರವೂ ಆಡಳಿತಾತ್ಮಕ ಅನುಮೋದನೆ ನೀಡಿದೆ. ಯೋಜನೆಯಡಿ KSRTC ವ್ಯಾಪ್ತಿಯಲ್ಲಿ ಮಂಗಳೂರು, ಮೈಸೂರು, ದಾವಣಗೆರೆ, ತುಮಕೂರು ಹಾಗೂ ಶಿವಮೊಗ್ಗ ನಗರಗಳಲ್ಲಿ ಮೂಲಸೌಕರ್ಯ ನಿರ್ಮಾಣವಾಗಲಿದೆ. NWKRTC ವ್ಯಾಪ್ತಿಯಲ್ಲಿ ಹುಬ್ಬಳ್ಳಿ-ಧಾರವಾಡ ಮತ್ತು ಬೆಳಗಾವಿ ನಗರಗಳು ಸೇರಿದ್ದರೆ, KKRTC ವ್ಯಾಪ್ತಿಯಲ್ಲಿ ಕಲಬುರಗಿ, ವಿಜಯಪುರ ಮತ್ತು ಬಳ್ಳಾರಿ ನಗರಗಳು ಸೇರಿವೆ.
ಅಧಿಕೃತ ದಾಖಲೆಗಳ ಪ್ರಕಾರ, ಯೋಜನೆಗಾಗಿ ಕೇಂದ್ರ ಸರ್ಕಾರದಿಂದ ₹59.82 ಕೋಟಿ ನೆರವು ಮಂಜೂರಾಗಿದ್ದು, ಹೆಚ್ಚುವರಿಯಾಗಿ ಕೇಂದ್ರ ಹಾಗೂ ರಾಜ್ಯ ಪಾಲಿನ ಅನುದಾನವನ್ನು ವಿವಿಧ ಹಂತಗಳಲ್ಲಿ ಬಿಡುಗಡೆ ಮಾಡಲಾಗುತ್ತದೆ. ಎಲೆಕ್ಟ್ರಿಕ್ ಬಸ್‌ಗಳಿಗಾಗಿ ಚಾರ್ಜಿಂಗ್ ಸ್ಟೇಷನ್‌ಗಳು, ಡಿಪೋ ಅಭಿವೃದ್ಧಿ, ವಿದ್ಯುತ್ ಸಂಪರ್ಕ ಹಾಗೂ ಇತರೆ ಅಗತ್ಯ ಮೂಲಸೌಕರ್ಯಗಳನ್ನು ನಿರ್ಮಿಸಲು ಈ ಅನುದಾನ ಬಳಸಲಾಗುತ್ತದೆ.
ನಗರ ಸಾರಿಗೆ ಕ್ಷೇತ್ರದಲ್ಲಿ ಹಸಿರು ತಂತ್ರಜ್ಞಾನವನ್ನು ಉತ್ತೇಜಿಸುವ ಈ ಯೋಜನೆಯಿಂದ ನಗರ ಪ್ರದೇಶಗಳಲ್ಲಿ ವಾಯು ಮಾಲಿನ್ಯ ಕಡಿಮೆಯಾಗುವ ಜೊತೆಗೆ ಸಾರ್ವಜನಿಕ ಸಾರಿಗೆ ಸೇವೆಯ ಗುಣಮಟ್ಟವೂ ಸುಧಾರಿಸುವ ನಿರೀಕ್ಷೆ ಇದೆ. ಇಂಧನ ವೆಚ್ಚ ಕಡಿಮೆಯಾಗುವುದರಿಂದ ಸಾರಿಗೆ ಸಂಸ್ಥೆಗಳ ಆರ್ಥಿಕ ಸ್ಥಿತಿಗೂ ನೆರವಾಗಲಿದೆ.
The Karnataka government has approved a ₹2,583-crore electric bus project to strengthen sustainable public transport across 10 cities, including Mangaluru and Mysuru.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
ಒಂದು ವರ್ಷದಲ್ಲಿ 400 ಡ್ರಗ್ ಪೆಡ್ಲರ್ಗಳ ಬಂಧನ ; 2,...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm