ಬ್ರೇಕಿಂಗ್ ನ್ಯೂಸ್
27-06-26 02:44 pm HK News Staffer ಕರಾವಳಿ
ಮಂಗಳೂರು, ಜೂನ್ 27: ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಬಗ್ಗೆ ಅವಹೇಳನ ಮಾಡಬಾರದೆಂಬ ಕೋರ್ಟ್ ಮಧ್ಯಂತರ ಆದೇಶ ಉಲ್ಲಂಘಿಸಿದ ಆರೋಪದಲ್ಲಿ ಸೌಜನ್ಯಾ ಪರ ಹೋರಾಟಗಾರ ವಿಠಲ ಗೌಡ ಅವರನ್ನು ಬಂಧಿಸಿ ಕೋರ್ಟಿಗೆ ಹಾಜರುಪಡಿಸುವಂತೆ ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ಆದೇಶ ಮಾಡಿದೆ.
ಹೆಗ್ಗಡೆಯವರ ಬಗ್ಗೆ ಮತ್ತು ಕ್ಷೇತ್ರದ ಬಗ್ಗೆ ಅಗೌರವ ಮೂಡಿಸುವ ರೀತಿ ಹೇಳಿಕೆ ನೀಡಬಾರದೆಂದು 2023ರಲ್ಲಿ ಹೊರಡಿಸಿದ್ದ ಆದೇಶವನ್ನು ಉಲ್ಲಂಘಿಸಿದ್ದಾರೆಂದು ಧರ್ಮಸ್ಥಳ ಪರವಾಗಿ ಶೀನಪ್ಪ ಮೂಲ್ಯ ಕೋರ್ಟಿಗೆ ಅಪೀಲು ಮಾಡಿದ್ದು ಇದರಂತೆ ವಿಠಲ ಗೌಡ ಅವರಿಗೆ 30 ದಿನಗಳ ಜೈಲು ಶಿಕ್ಷೆ ವಿಧಿಸಿ ಆದೇಶ ಮಾಡಿದೆ. ಇದರ ಬೆನ್ನಲ್ಲೇ ವಿಠಲ್ ಗೌಡ ತಲೆಮರೆಸಿಕೊಂಡಿದ್ದು ಜೂನ್ 30ರ ಒಳಗೆ ಬಂಧಿಸಿ ಕೋರ್ಟಿಗೆ ಹಾಜರುಪಡಿಸುವಂತೆ ಪೊಲೀಸರಿಗೆ ಆದೇಶ ಮಾಡಿದೆ.
ಇದರಂತೆ, ಬೆಂಗಳೂರು ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ವಿಠಲ ಗೌಡ ಬಂಧನಕ್ಕೆ ವಾರಂಟ್ ಜಾರಿ ಮಾಡಿದೆ. ಬೆಳ್ತಂಗಡಿ ಮತ್ತು ಧರ್ಮಸ್ಥಳದ ಠಾಣೆಯ ಪೊಲೀಸರ ನೆರವಿನೊಂದಿಗೆ ವಿಠ್ಠಲ ಗೌಡ ಬಂಧನಕ್ಕಾಗಿ ಬೆಂಗಳೂರು ಕೋರ್ಟ್ ಪೊಲೀಸರು ಶೋಧ ನಡೆಸಿದ್ದಾರೆ. ಕೋರ್ಟ್ ಆದೇಶ ಹಿನ್ನೆಲೆಯಲ್ಲಿ ವಿಠಲ ಗೌಡ ಕಳೆದ ನಾಲ್ಕು ತಿಂಗಳಿಂದ ಮನೆಗೆ ಬಾರದೆ ತಲೆಮರೆಸಿಕೊಂಡಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಸ್ಥಳೀಯ ಪೊಲೀಸರ ಸಹಕಾರದೊಂದಿಗೆ ವಿಠ್ಠಲ ಗೌಡ ಮನೆ, ಕುಸುಮಾವತಿ ನಿವಾಸಕ್ಕೆ ಕೋರ್ಟ್ ಅಧಿಕಾರಿಗಳ ಭೇಟಿ ನೀಡಿದ್ದು ವಾರಂಟ್ ಆದೇಶವನ್ನು ನೀಡಿದ್ದಾರೆ. ಉಜಿರೆ ಪರಿಸರದಲ್ಲಿ ವಿಠ್ಠಲ ಗೌಡ ಇರುವ ಬಗ್ಗೆ ಮಾಹಿತಿ ಆಧರಿಸಿ ದಿಢೀರ್ ಉಜಿರೆಗೆ ಆಗಮಿಸಿ ಶೋಧ ನಡೆಸಿದ್ದಾರೆ.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
08-10-26 08:03 pm
HK News Staffer
ಭಾರತೀಯ ಪೈಲಟ್ ಸಾಹಸಕ್ಕೆ ಅಮೆರಿಕ ಸಂಸತ್ ಗೌರವ ; 17...
07-10-26 01:10 pm
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
08-10-26 04:30 pm
HK News Staffer
Santhosh laad, Araga jnanendra ಕಾರ್ಮಿಕ ಇಲಾಖೆಯ...
08-10-26 04:27 pm
ಆಟೋದಲ್ಲಿ 48 ಗ್ರಾಂ ಚಿನ್ನ ಬಿಟ್ಟುಹೋದ ಮಹಿಳೆ ; ‘ಚಿ...
08-10-26 12:06 pm
Kural Tulu Touch, Tulu lipi: ತುಳು ಲಿಪಿಗೆ ಡಿಜಿ...
07-10-26 02:39 pm
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
09-10-26 10:01 am
HK News Staffer
ದಾಂಡಿಯಾ ಹೆಸರಿನಲ್ಲಿ ಅಸಭ್ಯ ನೃತ್ಯ, ಫ್ಯಾಷನ್ ಶೋ, ಪ...
08-10-26 08:44 pm
ಹೆದ್ದಾರಿ ದಾಟುತ್ತಿದ್ದ ಕುರಿ-ಮೇಕೆಗಳ ಹಿಂಡಿಗೆ ಲಾರಿ...
08-10-26 08:07 pm
Online game, Death: ಆನ್ಲೈನ್ ಗೇಮ್ಗಾಗಿ 4 ಲಕ್ಷ...
08-10-26 04:56 pm
CBI ಹೆಸರಲ್ಲಿ ಬೆದರಿಕೆ, ‘ಡಿಜಿಟಲ್ ಅರೆಸ್ಟ್’ ನಾಟಕ...
08-10-26 11:08 am