ಆರೆಂಜ್ ಅಲರ್ಟ್ ಸೂಚನೆ ; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆ, ಕಾಲೇಜಿಗೆ ರಜೆ ವಿಸ್ತರಣೆ

02-07-26 10:11 pm       HK News Staffer   ಕರಾವಳಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು ಜುಲೈ 3ರ ಶುಕ್ರವಾರ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲೆ, ಕಾಲೇಜುಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.

ಮಂಗಳೂರು, ಜುಲೈ 2: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು ಜುಲೈ 3ರ ಶುಕ್ರವಾರ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲೆ, ಕಾಲೇಜುಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.  

ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ  ಜಿಲ್ಲೆಯಲ್ಲಿ ಅಂಗನವಾಡಿಯಿಂದ 12ನೇ ತರಗತಿ ವರೆಗಿನ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಅನುದಾನಿತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಆದೇಶ ಮಾಡಿದ್ದಾರೆ. 

ಜಿಲ್ಲಾಡಳಿತದ ಆದೇಶದ ವಿರುದ್ಧವಾಗಿ ಶಾಲೆ, ಕಾಲೇಜುಗಳಲ್ಲಿ ತರಗತಿಗಳನ್ನು ನಡೆಸುವುದು ಕಂಡುಬಂದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ 2005 ರಡಿ ಕಾನೂನು ಕ್ರಮದ ಎಚ್ಚರಿಕೆಯನ್ನೂ ನೀಡಲಾಗಿದೆ. ಜುಲೈ 2ರಂದು ರೆಡ್ ಅಲರ್ಟ್ ನೀಡಿದ್ದರಿಂದ ಶಾಲೆ, ಕಾಲೇಜಿಗೆ ರಜೆ ನೀಡಲಾಗಿತ್ತು. ಆದರೆ ನಿರೀಕ್ಷೆಯಷ್ಟು ಮಳೆ ಬಂದಿರಲಿಲ್ಲ. ಇದೇ ವೇಳೆ, ನೀರು ನಿಲ್ಲುವ ಪ್ರದೇಶಕ್ಕೆ ತೆರಳದಂತೆ ಮತ್ತು ಸಮುದ್ರ ಮೀನುಗಾರಿಕೆ ಮಾಡದಂತೆಯೂ ಸೂಚನೆ ನೀಡಲಾಗಿದೆ.