ಬ್ರೇಕಿಂಗ್ ನ್ಯೂಸ್
20-07-26 09:32 pm HK News Staffer ಕರಾವಳಿ
ಮಂಗಳೂರು, ಜುಲೈ 20 : ಸಾಮಾಜಿಕ ಹೋರಾಟಗಾರ ಸೋನಂ ವಾಂಗ್ಚುಕ್ ನೇತೃತ್ವದಲ್ಲಿ ದೆಹಲಿಯ ಜಂತರ್ ಮಂತರ್ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿ, ಮಂಗಳೂರಿನ ನಿವೃತ್ತ ಪತ್ರಕರ್ತ ಹಾಗೂ ಶೈಕ್ಷಣಿಕ ಕಾರ್ಯಕರ್ತ ಶ್ರೀನಿವಾಸನ್ ನಂದಗೋಪಾಲ್ ಮಂಗಳೂರಿನಲ್ಲಿ 48 ಗಂಟೆಗಳ ಸಾಂಕೇತಿಕ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ ಪಾರದರ್ಶಕತೆ, ಉತ್ತರದಾಯಿತ್ವ ಮತ್ತು ಸುಧಾರಣೆಗಾಗಿ ಈ ಹೋರಾಟ ಕೈಗೊಂಡಿರುವುದಾಗಿ ಅವರು ತಿಳಿಸಿದ್ದಾರೆ.
ಕದ್ರಿ ಮಲ್ಲಿಕಟ್ಟೆಯ ಸೆಂಟರ್ ಫಾರ್ ಇಂಟಿಗ್ರೇಟೆಡ್ ಲರ್ನಿಂಗ್ ಸಂಸ್ಥೆಯ ಕಚೇರಿಯಲ್ಲಿ ಭಾನುವಾರ ಬೆಳಗ್ಗೆ 8 ಗಂಟೆಗೆ ಆರಂಭವಾದ ಉಪವಾಸ ಮಂಗಳವಾರ ಬೆಳಗ್ಗೆ 8 ಗಂಟೆಗೆ ಮುಕ್ತಾಯಗೊಳ್ಳಲಿದೆ. ಈ ಅವಧಿಯಲ್ಲಿ ಅವರು ನೀರು ಮಾತ್ರ ಸೇವಿಸಿ ಉಪವಾಸ ಆಚರಿಸಲಿದ್ದಾರೆ.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಆಕ್ರೋಶ
ಶಿಕ್ಷಣ ಕ್ಷೇತ್ರದಲ್ಲಿನ ಅಕ್ರಮಗಳು, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ವ್ಯವಸ್ಥೆಯಲ್ಲಿ ಹೊಣೆಗಾರಿಕೆ ಮೂಡಿಸುವ ಉದ್ದೇಶದಿಂದ ಈ ಸತ್ಯಾಗ್ರಹ ನಡೆಸುತ್ತಿರುವುದಾಗಿ ನಂದಗೋಪಾಲ್ ತಿಳಿಸಿದ್ದಾರೆ. "ಶಿಕ್ಷಣ ಮತ್ತು ಆರೋಗ್ಯ ಯಾವುದೇ ದೇಶದ ಪ್ರಗತಿಯ ಎರಡು ಪ್ರಮುಖ ಆಧಾರ ಸ್ತಂಭಗಳು. ಆದರೆ ಕಳೆದ ಕೆಲವು ವರ್ಷಗಳಲ್ಲಿ ಸಾವಿರಾರು ಸರ್ಕಾರಿ ಶಾಲೆಗಳು ಮುಚ್ಚಲ್ಪಟ್ಟಿವೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಸುಮಾರು 22 ಲಕ್ಷ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟ ನಡೆದಿದೆ. ಇಂತಹ ಗಂಭೀರ ಬೆಳವಣಿಗೆಗಳ ನಡುವೆಯೂ ಸರ್ಕಾರ ಮೌನ ವಹಿಸಿರುವುದು ಆತಂಕಕಾರಿ ಎಮನದು ಹೇಳಿದ್ದಾರೆ.
'ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು'
"ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು. ಅದು ಸಮಸ್ಯೆಗೆ ಸಂಪೂರ್ಣ ಪರಿಹಾರವಾಗದಿದ್ದರೂ, ಆಡಳಿತದಲ್ಲಿ ಉತ್ತರದಾಯಿತ್ವ ಸ್ಥಾಪಿಸುವ ಮೊದಲ ಹೆಜ್ಜೆಯಾಗುತ್ತದೆ ಎಂದು ನಂದಗೋಪಾಲ್ ಹೇಳಿದ್ದಾರೆ.
'ಇದು ಪ್ರಚಾರಕ್ಕಾಗಿ ಅಲ್ಲ'
ದೆಹಲಿಯಲ್ಲಿ ನಡೆಯುತ್ತಿರುವ 'ಸಂಸತ್ ಚಲೋ' ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗದ ಕಾರಣ ಮಂಗಳೂರಿನಲ್ಲೇ ಸಾಂಕೇತಿಕ ಉಪವಾಸ ಕೈಗೊಂಡಿರುವುದಾಗಿ ಅವರು ಸ್ಪಷ್ಟಪಡಿಸಿದರು."ಇದು ಯಾವುದೇ ಪ್ರಚಾರಕ್ಕಾಗಿ ನಡೆಸುತ್ತಿರುವ ಹೋರಾಟವಲ್ಲ. ಶಿಕ್ಷಣ ಕ್ಷೇತ್ರದಲ್ಲಿ ಅಗತ್ಯ ಸುಧಾರಣೆ ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಒತ್ತಾಯಿಸುವ ಉದ್ದೇಶದಿಂದ ಕೈಗೊಂಡಿರುವ ಸತ್ಯಾಗ್ರಹ ಮಾಡುತ್ತಿದ್ದೇನೆ. ಯುವಜನತೆ ದೇಶದ ಶಿಕ್ಷಣ ಮತ್ತು ಆಡಳಿತ ವ್ಯವಸ್ಥೆಯ ಕುರಿತು ಗಂಭೀರವಾಗಿ ಚಿಂತನೆ ನಡೆಸಬೇಕಾದ ಸಮಯ ಬಂದಿದೆ ಎಂದು ನಂದಗೋಪಾಲ್ ಅಭಿಪ್ರಾಯಪಟ್ಟರು."ದೇಶದಲ್ಲಿ ಉತ್ತಮ ಬದಲಾವಣೆ ತರಬೇಕಾದರೆ ಯುವಕರು ರಾಜಕೀಯ ಮತ್ತು ಸಾಮಾಜಿಕವಾಗಿ ಹೆಚ್ಚು ಸಕ್ರಿಯರಾಗಬೇಕು. ಉತ್ತಮ ಆಡಳಿತಕ್ಕಾಗಿ ಒತ್ತಡ ಹಾಕಿ ಸರ್ಕಾರದಿಂದ ಉತ್ತರದಾಯಿತ್ವ ಕೇಳುವ ಸಮಯ ಬಂದಿದೆ."
ಶ್ರೀನಿವಾಸನ್ ನಂದಗೋಪಾಲ್ ಅವರು ಸೆಂಟರ್ ಫಾರ್ ಇಂಟಿಗ್ರೇಟೆಡ್ ಲರ್ನಿಂಗ್ ಸಂಸ್ಥೆಯ ಸಹ ಸಂಸ್ಥಾಪಕರಾಗಿದ್ದು, ಮಕ್ಕಳ ಹಾಗೂ ಯುವಜನರ ಶಿಕ್ಷಣ ಮತ್ತು ವ್ಯಕ್ತಿತ್ವ ವಿಕಸನಕ್ಕಾಗಿ ಹಲವು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇತ್ತೀಚೆಗೆ 'ಡ್ರೀಮ್ಸ್ ಆನ್ ವೀಲ್ಸ್' ಬೈಕ್ ಅಭಿಯಾನದ ಮೂಲಕ ಸುಮಾರು 6,500 ಕಿಲೋಮೀಟರ್ ಸಂಚರಿಸಿ, 5,000ಕ್ಕೂ ಹೆಚ್ಚು ಸರ್ಕಾರಿ ಶಾಲಾ ವಿದ್ಯಾರ್ಥಿಗಳೊಂದಿಗೆ ಪರೀಕ್ಷಾ ಸಿದ್ಧತೆ, ವೃತ್ತಿ ಮಾರ್ಗದರ್ಶನ ಹಾಗೂ ಜೀವನ ಕೌಶಲ್ಯ ಕುರಿತು ಸಂವಾದ ನಡೆಸುವ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ಗಮನಾರ್ಹ ಸೇವೆ ಸಲ್ಲಿಸಿದ್ದಾರೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm