ಬ್ರೇಕಿಂಗ್ ನ್ಯೂಸ್
25-07-26 02:42 pm HK News Staffer ಕರಾವಳಿ
ಮಂಗಳೂರು, ಜುಲೈ 25 : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳು ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಿದ್ದು, ಇಲ್ಲಿನ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾಭ್ಯಾಸ ಮಾಡಲು ಬೇರೆ ಬೇರೆ ಜಿಲ್ಲೆಗಳಿಂದಲೂ ವಿದ್ಯಾರ್ಥಿಗಳು ಆಗಮಿಸುತ್ತಿದ್ದಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಹವಾಮಾನ ಇಲಾಖೆಯು ವಾಸ್ತವಿಕ ಸ್ಥಿತಿಯನ್ನು ಅರಿಯದೆ ನೀಡುತ್ತಿರುವ ಅವೈಜ್ಞಾನಿಕ ವರದಿಗಳಿಂದ ಶೈಕ್ಷಣಿಕ ವಲಯಕ್ಕೆ ತೊಂದರೆಯಾಗುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೆಗೌಡ ಕಳವಳ ವ್ಯಕ್ತಪಡಿಸಿದ್ದಾರೆ.
ಮಳೆಯೇ ಇಲ್ಲದಿದ್ದರೂ ಮುಂಜಾಗ್ರತಾ ಕ್ರಮವಾಗಿ ಸತತವಾಗಿ ರಜೆಗಳನ್ನು ಘೋಷಿಸುತ್ತಿರುವುದು ಮತ್ತು ವಸತಿ ಶಾಲೆಗಳಿಗೂ ಅನ್ವಯವಾಗುವಂತೆ ರಜೆ ನೀಡುವುದು ಎಷ್ಟರಮಟ್ಟಿಗೆ ಸರಿ ಎಂದು ಅವರು ಪ್ರಶ್ನಿಸಿದ್ದಾರೆ. ಸರ್ಕಾರದ ಈ ಮುಂಜಾಗ್ರತಾ ನಿರ್ಧಾರವನ್ನು ಒಟ್ಟಾರೆಯಾಗಿ ಸ್ವಾಗತಿಸಿದರೂ ಸಹ, ಮಳೆಯಿಲ್ಲದೆ ಬಿಸಿಲು ಅಥವಾ ಸಾಮಾನ್ಯ ವಾತಾವರಣವಿರುವ ಸಂದರ್ಭದಲ್ಲಿ ಅನಗತ್ಯವಾಗಿ ರಜೆ ನೀಡುವುದರಿಂದ ವಿದ್ಯಾರ್ಥಿಗಳ ಪಠ್ಯಕ್ರಮ ಮತ್ತು ಶೈಕ್ಷಣಿಕ ಪ್ರಗತಿಗೆ ಭಾರೀ ನಷ್ಟವಾಗುತ್ತದೆ ಎಂದು ಅವರು ತನ್ನ ಹೇಳಿಕೆಯಲ್ಲಿ ಆಕ್ಷೇಪಿಸಿದ್ದಾರೆ.
ಹವಾಮಾನ ಇಲಾಖೆಯು ವಾಸ್ತವಿಕ ಪರಿಸ್ಥಿತಿಯನ್ನು ಪರಿಗಣಿಸದೆ ಅವೈಜ್ಞಾನಿಕವಾದ ವರದಿಗಳನ್ನು ನೀಡುತ್ತಿದ್ದು, ಮಳೆಯೇ ಇಲ್ಲದಿದ್ದರೂ ರಜೆ ಘೋಷಿಸುವಂತಾಗಿದೆ. ಇದು ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ದೊಡ್ಡ ಮಟ್ಟದಲ್ಲಿ ಅಡ್ಡಿಯುಂಟುಮಾಡುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಸರಕಾರ ಮತ್ತು ಜಿಲ್ಲಾಡಳಿತ ಕೈಗೊಳ್ಳುವ ನಿರ್ಧಾರಗಳು ಸರಿಯಿರಬಹುದು, ಆದರೆ ಎಲ್ಲೆಡೆ ಮಳೆ ಇಲ್ಲದಿರುವಾಗ ವಸತಿ ಶಾಲೆಗಳಿಗೂ ರಜೆ ನೀಡುವುದು ಎಷ್ಟು ಸರಿ? ಇದು ಗಂಭೀರವಾಗಿ ಯೋಚಿಸಬೇಕಾದ ವಿಷಯ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಬೇರೆ ಬೇರೆ ತಾಲೂಕುಗಳಲ್ಲಿ ವಿಭಿನ್ನವಾದ ಹವಾಮಾನ ಪರಿಸ್ಥಿತಿ ಇರುತ್ತದೆ. ಒಂದು ತಾಲೂಕಿನಲ್ಲಿ ಮಳೆಯಿದ್ದರೆ, ಮತ್ತೊಂದು ತಾಲೂಕಿನಲ್ಲಿ ಬಿಸಿಲು ಇರಬಹುದು. ಆದ್ದರಿಂದ ಜಿಲ್ಲಾಡಳಿತ ಹಾಗೂ ಸರ್ಕಾರವು ಕೇವಲ ಒಟ್ಟಾರೆ ಮುನ್ಸೂಚನೆಯನ್ನು ಆಧರಿಸದೆ, ಆಯಾ ತಾಲೂಕುಗಳ ಸ್ಥಳೀಯ ಹವಾಮಾನ ಪರಿಸ್ಥಿತಿಯನ್ನು ಗಮನಿಸಿ, ವಲಯವಾರು ನಿರ್ಧಾರಗಳನ್ನು ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಪಟ್ಟ ಸರಕಾರಿ ಇಲಾಖೆಗಳು ಗಮನಹರಿಸಿ, ವಿದ್ಯಾರ್ಥಿಗಳ ಭವಿಷ್ಯ ಮತ್ತು ಶೈಕ್ಷಣಿಕ ಹಿತಾಸಕ್ತಿಯನ್ನು ಕಾಪಾಡುವಂತೆ ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೆಗೌಡ ಕಳಕಳಿಯ ವ್ಯಕ್ತಪಡಿಸಿದ್ದಾರೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm