ಬ್ರೇಕಿಂಗ್ ನ್ಯೂಸ್
05-08-26 08:08 pm HK News Staffer ಕರಾವಳಿ
ಮಂಗಳೂರು, ಆ.5: ಸುರತ್ಕಲ್ ಬಳಿಯ ಪ್ರತಿಷ್ಠಿತ ಎನ್ಐಟಿಕೆ ಇಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿ ಸ್ವಯಂಪ್ರೇರಿತವಾಗಿ ಹಾಸ್ಟೆಲ್ ವಿದ್ಯಾರ್ಥಿಗಳನ್ನು ತಪಾಸಣೆ ನಡೆಸಿದ ಸಂದರ್ಭದಲ್ಲಿ 290 ಗ್ರಾಂ ಗಾಂಜಾ ಪತ್ತೆಯಾಗಿದ್ದು ಮೂವರು ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇತ್ತೀಚೆಗೆ ಪೊಲೀಸರು ಕಾಲೇಜು ವಿದ್ಯಾರ್ಥಿಗಳನ್ನು ಗುರಿಯಾಗಿಸಿ ನಡೆಸಿದ ಡ್ರಗ್ಸ್ ಜಾಗೃತಿ ಅಭಿಯಾನದ ನಂತರ, ಕಾಲೇಜು ಆಡಳಿತ ಮಂಡಳಿಗಳು ತನ್ನ ಮೇಲ್ವಿಚಾರಣಾ ವ್ಯವಸ್ಥೆಯನ್ನು ಬಿಗಿಗೊಳಿಸಿತ್ತು. ಆಂತರಿಕ ಕಮಿಟಿ ಸದಸ್ಯರು ತಪಾಸಣೆ ನಡೆಸುತ್ತಿದ್ದ ವೇಳೆ ಹಾಸ್ಟೆಲ್ ನಲ್ಲಿ ಉಳಿದುಕೊಂಡಿದ್ದ ಮೂವರು ವಿದ್ಯಾರ್ಥಿಗಳ ಬಳಿ ಗಾಂಜಾ ಇರುವುದು ಪತ್ತೆಯಾಗಿದೆ. ತಕ್ಷಣವೇ ಎಚ್ಚೆತ್ತ ಕಾಲೇಜು ಆಡಳಿತ ಮಂಡಳಿ ಸುರತ್ಕಲ್ ಪೊಲೀಸ್ ಠಾಣೆಗೆ ಮಾಹಿತಿ ನೀಡಿದೆ.
ಗಾಂಜಾ ಪೊಟ್ಟಣಗಳಿದ್ದ ಮೂವರು ವಿದ್ಯಾರ್ಥಿಗಳನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಮೂವರೂ ಮಾದಕವಸ್ತು ಸೇವಿಸಿರುವುದು ದೃಢಪಟ್ಟಿದೆ. ಈ ಸಂಬಂಧ ಎನ್‌ಡಿಪಿಎಸ್ (NDPS) ಕಾಯ್ದೆಯ ಸೆಕ್ಷನ್ 27(b) (ಮಾದಕದ್ರವ್ಯ ಸೇವನೆ) ಹಾಗೂ 8(c) ಸೇರಿದಂತೆ ವಿವಿಧ ಕಲಂ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿರುವ ಪೊಲೀಸರು ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ. ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯ ಹಾಗೂ ಗಾಂಜಾದ ಪ್ರಮಾಣ ಕಡಿಮೆ ಇರುವುದನ್ನು ಪರಿಗಣಿಸಿ, ನ್ಯಾಯಾಲಯವು ಶ್ಯೂರಿಟಿ ಪಡೆದು ಜಾಮೀನು ನೀಡಿದೆ. ವಿದ್ಯಾರ್ಥಿಗಳಿಗೆ ಗಾಂಜಾ ಪೂರೈಸುತ್ತಿದ್ದ ಡ್ರಗ್ ಪೆಡ್ಲರ್‌ನ ಪತ್ತೆಗೆ ಪೊಲೀಸರು ಜಾಲ ಬೀಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ, ಡ್ರಗ್ಸ್ ವಿರೋಧಿ ಅಭಿಯಾನದ ನಂತರ ಶಿಕ್ಷಣ ಸಂಸ್ಥೆಗಳು ಸ್ವಯಂ ತಪಾಸಣೆ ಕೈಗೊಳ್ಳುತ್ತಿರುವುದು ಉತ್ತಮ ಬೆಳವಣಿಗೆ. ಕಾಲೇಜುಗಳಲ್ಲಿ ಈ ರೀತಿಯ ತಪಾಸಣೆಯನ್ನು ನಿರಂತರ ನಡೆಸಿದರೆ, ಶಿಕ್ಷಣ ಸಂಸ್ಥೆಗಳ ಆವರಣವನ್ನು ಡ್ರಗ್ಸ್ ಮುಕ್ತ ಮಾಡಬಹುದು ಎಂದು ತಿಳಿಸಿದ್ದಾರೆ.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
08-10-26 08:03 pm
HK News Staffer
ಭಾರತೀಯ ಪೈಲಟ್ ಸಾಹಸಕ್ಕೆ ಅಮೆರಿಕ ಸಂಸತ್ ಗೌರವ ; 17...
07-10-26 01:10 pm
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
08-10-26 04:30 pm
HK News Staffer
Santhosh laad, Araga jnanendra ಕಾರ್ಮಿಕ ಇಲಾಖೆಯ...
08-10-26 04:27 pm
ಆಟೋದಲ್ಲಿ 48 ಗ್ರಾಂ ಚಿನ್ನ ಬಿಟ್ಟುಹೋದ ಮಹಿಳೆ ; ‘ಚಿ...
08-10-26 12:06 pm
Kural Tulu Touch, Tulu lipi: ತುಳು ಲಿಪಿಗೆ ಡಿಜಿ...
07-10-26 02:39 pm
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
08-10-26 08:44 pm
HK News Staffer
ಹೆದ್ದಾರಿ ದಾಟುತ್ತಿದ್ದ ಕುರಿ-ಮೇಕೆಗಳ ಹಿಂಡಿಗೆ ಲಾರಿ...
08-10-26 08:07 pm
Online game, Death: ಆನ್ಲೈನ್ ಗೇಮ್ಗಾಗಿ 4 ಲಕ್ಷ...
08-10-26 04:56 pm
CBI ಹೆಸರಲ್ಲಿ ಬೆದರಿಕೆ, ‘ಡಿಜಿಟಲ್ ಅರೆಸ್ಟ್’ ನಾಟಕ...
08-10-26 11:08 am
ಮಂಗಳೂರು ರೈಲಿನಲ್ಲಿ ಲ್ಯಾಪ್ಟಾಪ್, ಚಿನ್ನದ ಸರ ಕಳವು...
08-10-26 10:59 am