ಬ್ರೇಕಿಂಗ್ ನ್ಯೂಸ್
16-08-26 03:47 pm HK News Staffer ಕರಾವಳಿ
ಮಂಗಳೂರು, ಆ.16 : ದೆಹಲಿ ಕಾಂಗ್ರೆಸ್ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ವಂದೇ ಮಾತರಂ ಗೀತೆಯನ್ನು ಅರ್ಧಕ್ಕೆ ನಿಲ್ಲಿಸಲು ಸೂಚಿಸಿ ಅವಮಾನ ಮಾಡಿದ್ದಾರೆಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ವಿರುದ್ಧ ಮಂಗಳೂರಿನ ಉರ್ವಾ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ಬಿಜೆಪಿ ಮುಖಂಡ ವಿಕಾಸ್ ಪುತ್ತೂರು ದೂರು ನೀಡಿದ್ದು, ಸೋನಿಯಾ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ರಾಷ್ಟ್ರೀಯ ಗೌರವಕ್ಕೆ ಅಪಮಾನ ಹಾಗೂ ಉದ್ದೇಶಪೂರ್ವಕವಾಗಿ ರಾಷ್ಟ್ರಗೀತೆಯನ್ನು ಅವಮಾನಿಸಿ ಶಾಂತಿಭಂಗಕ್ಕೆ ಕಾರಣವಾಗುವ ರೀತಿ ನಡೆದುಕೊಂಡಿದ್ದಾರೆ. ಇದು ರಾಷ್ಟ್ರೀಯ ಗೌರವಕ್ಕೆ ಅಪಮಾನ ತಡೆಗಟ್ಟುವ ಕಾಯ್ದೆಯ ಕಲಂ 3ರಡಿ ಮತ್ತು ಬಿಎನ್ಎಸ್ ಸೆಕ್ಷನ್ 195 ಮತ್ತು 352 ಪ್ರಕಾರ ಅಪರಾಧವಾಗಿದ್ದು ಸೋನಿಯಾ ಗಾಂಧಿ ವಿರುದ್ಧ ಪ್ರಕರಣ ದಾಖಲಿಸುವಂತೆ ದೂರಿನಲ್ಲಿ ತಿಳಿಸಿದ್ದಾರೆ.
ದೂರು ಸ್ವೀಕರಿಸಿರುವ ಉರ್ವಾ ಪೊಲೀಸರು, ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ತಜ್ಞರ ಅಭಿಪ್ರಾಯ ಪಡೆದು ಮುಂದಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಪೊಲೀಸರು ಎಫ್‌ಐಆರ್ ದಾಖಲಿಸದಿದ್ದಲ್ಲಿ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸುವುದಾಗಿ ವಿಕಾಸ್ ತಿಳಿಸಿದ್ದಾರೆ.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
08-10-26 08:03 pm
HK News Staffer
ಭಾರತೀಯ ಪೈಲಟ್ ಸಾಹಸಕ್ಕೆ ಅಮೆರಿಕ ಸಂಸತ್ ಗೌರವ ; 17...
07-10-26 01:10 pm
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
08-10-26 04:30 pm
HK News Staffer
Santhosh laad, Araga jnanendra ಕಾರ್ಮಿಕ ಇಲಾಖೆಯ...
08-10-26 04:27 pm
ಆಟೋದಲ್ಲಿ 48 ಗ್ರಾಂ ಚಿನ್ನ ಬಿಟ್ಟುಹೋದ ಮಹಿಳೆ ; ‘ಚಿ...
08-10-26 12:06 pm
Kural Tulu Touch, Tulu lipi: ತುಳು ಲಿಪಿಗೆ ಡಿಜಿ...
07-10-26 02:39 pm
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
08-10-26 08:44 pm
HK News Staffer
ಹೆದ್ದಾರಿ ದಾಟುತ್ತಿದ್ದ ಕುರಿ-ಮೇಕೆಗಳ ಹಿಂಡಿಗೆ ಲಾರಿ...
08-10-26 08:07 pm
Online game, Death: ಆನ್ಲೈನ್ ಗೇಮ್ಗಾಗಿ 4 ಲಕ್ಷ...
08-10-26 04:56 pm
CBI ಹೆಸರಲ್ಲಿ ಬೆದರಿಕೆ, ‘ಡಿಜಿಟಲ್ ಅರೆಸ್ಟ್’ ನಾಟಕ...
08-10-26 11:08 am
ಮಂಗಳೂರು ರೈಲಿನಲ್ಲಿ ಲ್ಯಾಪ್ಟಾಪ್, ಚಿನ್ನದ ಸರ ಕಳವು...
08-10-26 10:59 am