ಬ್ರೇಕಿಂಗ್ ನ್ಯೂಸ್
08-01-21 05:18 pm Mangalore Correspondent ಕರಾವಳಿ
ಉಳ್ಳಾಲ, ಜ.8: ಉಳ್ಳಾಲದಲ್ಲಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ವ್ಯಕ್ತಿಯೋರ್ವನನ್ನು ರಾತ್ರಿ ರೌಂಡ್ಸಲ್ಲಿ ಇದ್ದ ಪೊಲೀಸರು ವಶಕ್ಕೆ ಪಡೆದು ವಿಚಾರಿಸಿದ್ದು , ಆತ ಮಾನಸಿಕನ ಅಸ್ವಸ್ಥನೆಂದು ಮನಗಂಡು ಮಾಹಿತಿ ಪಡೆದು ಪೋಷಕರಿಗೆ ಒಪ್ಪಿಸಿ ಮಾನವೀಯತೆ ಮೆರೆದಿದ್ದಾರೆ.
ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್ ಐ ರೇವಣ ಸಿದ್ಧಪ್ಪ ಮತ್ತು ಪಿಸಿಗಳಾದ ವಾಸುದೇವ ಚೌಹಾಣ್ ಮತ್ತು ಸಾಗರ ದೇವಕತ್ತಿ ಅವರು ಉಳ್ಳಾಲ ಪೇಟೆಯಲ್ಲಿ ಶಂಕಾಸ್ಪದವಾಗಿ ತಿರುಗುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಿಸಿದ್ದಾರೆ. ಈ ವೇಳೆ ಆತ ಮಾನಸಿಕ ಅಸ್ವಸ್ಥನೆಂದು ತಿಳಿದುಬಂದಿದ್ದು ಆತನನ್ನು ಉಪಚರಿಸಿದ್ದಾರೆ. ಮಾನಸಿಕ ಅಸ್ವಸ್ಥನಾದರೂ ತನ್ನ ಹೆಸರು ಮತ್ತು ವಿಳಾಸ ಹೇಳಿದ್ದಾನೆ. ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನ ಹಳ್ಳಿ ತಾಲೂಕಿನ ನಂದಿಪುರ ಗ್ರಾಮದ ನಿವಾಸಿ ಮಂಜುನಾಥನೆಂದು ತಿಳಿದಿದೆ.
ಬಳಿಕ ಉಳ್ಳಾಲ ಪಿಐ ಸಂದೀಪ್ ಅವರ ಮಾರ್ಗದರ್ಶನದಂತೆ ಬಳ್ಳಾರಿ ಜಿಲ್ಲೆಯ ಸಂಬಂಧಪಟ್ಟ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ ಪೊಲೀಸರು ಮಂಜುನಾಥನ ಇರುವಿಕೆಯ ಬಗ್ಗೆ ಆತನ ಪೋಷಕರಿಗೆ ತಿಳಿಸಿದ್ದಾರೆ. ಇಂದು ಮಂಜುನಾಥನ ಸಹೋದರರಾದ ಉಲುಗಪ್ಪ ಮತ್ತು ಶಿವ ಉಳ್ಳಾಲ ಠಾಣೆಗೆ ಬಂದಿದ್ದು ಮಂಜುನಾಥನ ಊರಿಗೆ ಕರೆದೊಯ್ದಿದ್ದಾರೆ.
ಈ ಸಂದರ್ಭ ಉಳ್ಳಾಲ ಪೊಲೀಸ್ ಇನ್ಸ್ ಪೆಕ್ಟರ್ ಸಂದೀಪ್, ಪಿಎಸ್ ಐಗಳಾದ ಪ್ರದೀಪ್, ರೇವಣ ಸಿದ್ಧಪ್ಪ, ಶಿವಕುಮಾರ್, ಸಿಬಂದಿ ಮನೋಹರ್, ಪ್ರಶಾಂತ್, ಅಕ್ಬರ್ , ವಾಸುದೇವ ಚೌಹಾಣ್, ಸಾಗರ ದೇವಕತ್ತಿ ಇದ್ದರು.
ನಂದಿಪುರ ನಿವಾಸಿ ಮುದುಕಪ್ಪರ ಮಗನಾದ ಮಂಜುನಾಥ ಕಳೆದ ಒಂದು ವರ್ಷದ ಹಿಂದೆ ಮಾನಸಿಕ ಖಿನ್ನತೆಗೊಳಗಾಗಿದ್ದು ಬಳಿಕ ನಾಪತ್ತೆಯಾಗಿ ಊರೂರು ಅಲೆಯುತ್ತಿದ್ದನೆನ್ನಲಾಗಿದೆ. ಉಳ್ಳಾಲ ಪೊಲೀಸರ ಮಾನವೀಯ ಕಳಕಳಿಗೆ ಮಂಜುನಾಥನ ಪೋಷಕರು ಕೃತಜ್ಞತೆ ಸಲ್ಲಿಸಿದ್ದಾರೆ.
The Ullal police have succeeded in reuniting mentally ill person to his family. This good gesture of Ullal police have given rise to a lot of praises.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
10-10-26 10:31 pm
HK News Staffer
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
ನಂದಿಗ್ರಾಮ, ರೇಜಿನಗರದಲ್ಲಿ ಬಿಜೆಪಿಗೆ ಭರ್ಜರಿ ಜಯ ;...
09-10-26 11:04 pm
ಸರ್ಕಾರಿ ಸಂಸ್ಥೆಯಿಂದ ಕೋಟ್ಯಂತರ ದೇಣಿಗೆ ; ಪಿಣರಾಯಿ...
09-10-26 05:40 pm
Prakash Raj, Dhruv Rathee: SIR ರದ್ದತಿಗೆ ಬೆಂಗಳ...
08-10-26 08:03 pm
10-10-26 09:27 pm
HK News Staffer
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
ಮೂಡುಶೆಡ್ಡೆ ; ಮುಸ್ಲಿಮರ ದಫನಕ್ಕೆ 2 ಎಕರೆ ಪಿಲಿಕುಳದ...
10-10-26 03:21 pm
Nana patekar: ಮಂಗಳೂರು, ಉಡುಪಿಯೊಂದಿಗೆ ನಾನಾ ಪಾಟೇ...
08-10-26 04:30 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm