ಬ್ರೇಕಿಂಗ್ ನ್ಯೂಸ್
21-08-26 08:17 pm HK News Staffer ಕರಾವಳಿ
ಮಂಗಳೂರು, ಆ.21: ಸರಿಯಾಗಿ ಬೇಯಿಸದ ಕಳಪೆ ದರ್ಜೆಯ ಆಹಾರ ಪದಾರ್ಥಗಳನ್ನು ಪೂರೈಕೆ ಮಾಡುತ್ತಿದ್ದಾರೆಂಬ ದೂರಿನ ಮೇರೆಗೆ ನಗರದ ಫಳ್ನೀರ್ ನಲ್ಲಿರುವ ಎಂಎಫ್ ಸಿ ರೆಸ್ಟೋರೆಂಟ್ ಮೇಲೆ ಆಹಾರ ಸುರಕ್ಷತೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಆಹಾರ ಕಳಪೆ ಬಗ್ಗೆ ಕ್ಯೂ ಆರ್ ಕೋಡ್ ಅಭಿಯಾನಕ್ಕೆ ಸಾರ್ವಜನಿಕರಿಂದ ಭಾರೀ ಸ್ಪಂದನೆ ವ್ಯಕ್ತವಾಗಿದ್ದು ಇದರಲ್ಲಿ ಬಂದ ದೂರಿನ ಆಧಾರದಲ್ಲಿ ಮಂಗಳೂರಿನ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಅಂಕಿತ ಅಧಿಕಾರಿ ಡಾ.ಪ್ರವೀಣ್ ಕುಮಾರ್ ನೇತೃತ್ವದಲ್ಲಿ ಸಿಬಂದಿ ದಾಳಿ ನಡೆಸಿದ್ದಾರೆ.
ರೆಸ್ಟೋರೆಂಟ್ ನಲ್ಲಿ ಶೋರ್ಮಾ ಸೇರಿದಂತೆ ಮಾಂಸಾಹಾರ ಖಾದ್ಯಗಳು ಮತ್ತು ಅವುಗಳಿಗೆ ಬಳಸುವ ಬಣ್ಣಗಳನ್ನು ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ, ಎಲ್ಲಾ ಖಾದ್ಯಗಳ ಸ್ಯಾಂಪಲ್ಸ್ ಸಂಗ್ರಹಿಸಿರುವ ಅಧಿಕಾರಿಗಳು ಅದನ್ನು ಪ್ರಯೋಗಾಲಯಕ್ಕೆ ಕಳಿಸಿಕೊಡುವುದಾಗಿ ತಿಳಿಸಿದ್ದಾರೆ. ಚಿಕನ್ ಮತ್ತಿತರ ಮಾಂಸಾಹಾರಿ ಖಾದ್ಯಗಳಿಗೆ ಕೃತಕ ಬಣ್ಣಗಳನ್ನು ಬಳಸಿ ಆಕರ್ಷಕವಾಗಿಸುವುದರ ಬಗ್ಗೆ ಖುದ್ದಾಗಿ ಪರಿಶೀಲನೆ ನಡೆಸಿದ್ದಾರೆ. '



ಹಸಿ ಮಾಂಸಗಳ ಸ್ಟೋರೇಜ್ ಮತ್ತು ಆಹಾರ ಪದಾರ್ಥಗಳ ತಯಾರಿ ಬಗ್ಗೆ ಶುಚಿತ್ವ ಇಟ್ಟುಕೊಂಡಿದ್ದಾರೆಯೇ ಎಂದು ಪರಿಶೀಲನೆ ನಡೆಸಿದ್ದಾರೆ. ಮಂಗಳೂರಿನಲ್ಲಿ ಕೆಎಫ್ ಸಿ, ಮೆಕ್ ಡೊನಾಲ್ಡ್ ಕಂಪನಿಗಳ ಆಹಾರ ಮಳಿಗೆಯಲ್ಲಿ ಪರಿಶೀಲನೆ ನಡೆಸಿದ ಬಳಿಕ ಇದೀಗ ಎಂಎಫ್ ಸಿ ಹೆಸರಿನ ಮಳಿಗೆಯಲ್ಲಿ ತಪಾಸಣೆ ಕೈಗೊಂಡಿದ್ದಾರೆ. ಹೈಜೀನ್ ಇಟ್ಟುಕೊಳ್ಳುವ ಬಗ್ಗೆ ನೋಟಿಸ್ ಜಾರಿ ಮಾಡಿದ್ದು ಮಾಂಸ, ಆಹಾರ ಪದಾರ್ಥಗಳಲ್ಲಿ ಮಾಲಿನ್ಯ ಕಂಡುಬಂದಲ್ಲಿ ಕೇಸು ದಾಖಲಿಸುವುದಾಗಿ ಪ್ರವೀಣ್ ಕುಮಾರ್ ತಿಳಿಸಿದ್ದಾರೆ. ಕೆಲವು ಬಣ್ಣಗಳನ್ನು ಬಳಸುವಂತಿಲ್ಲ, ಕೆಲವನ್ನು ನಿಗದಿಯಷ್ಟೇ ಬಳಸಬೇಕು. ಇದರ ಬಗ್ಗೆ ಸಾರ್ವಜನಿಕರೇ ಜಾಗೃತಿಯಾಗಬೇಕು. ಬಣ್ಣಗಳಿದ್ದ ಕಬಾಬ್ ತಿನ್ನದೆ ನಿರಾಕರಣೆ ಮಾಡಬೇಕು ಎಂದು ಪ್ರವೀಣ್ ಹೇಳಿದ್ದಾರೆ.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
08-10-26 08:03 pm
HK News Staffer
ಭಾರತೀಯ ಪೈಲಟ್ ಸಾಹಸಕ್ಕೆ ಅಮೆರಿಕ ಸಂಸತ್ ಗೌರವ ; 17...
07-10-26 01:10 pm
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
08-10-26 04:30 pm
HK News Staffer
Santhosh laad, Araga jnanendra ಕಾರ್ಮಿಕ ಇಲಾಖೆಯ...
08-10-26 04:27 pm
ಆಟೋದಲ್ಲಿ 48 ಗ್ರಾಂ ಚಿನ್ನ ಬಿಟ್ಟುಹೋದ ಮಹಿಳೆ ; ‘ಚಿ...
08-10-26 12:06 pm
Kural Tulu Touch, Tulu lipi: ತುಳು ಲಿಪಿಗೆ ಡಿಜಿ...
07-10-26 02:39 pm
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
08-10-26 08:44 pm
HK News Staffer
ಹೆದ್ದಾರಿ ದಾಟುತ್ತಿದ್ದ ಕುರಿ-ಮೇಕೆಗಳ ಹಿಂಡಿಗೆ ಲಾರಿ...
08-10-26 08:07 pm
Online game, Death: ಆನ್ಲೈನ್ ಗೇಮ್ಗಾಗಿ 4 ಲಕ್ಷ...
08-10-26 04:56 pm
CBI ಹೆಸರಲ್ಲಿ ಬೆದರಿಕೆ, ‘ಡಿಜಿಟಲ್ ಅರೆಸ್ಟ್’ ನಾಟಕ...
08-10-26 11:08 am
ಮಂಗಳೂರು ರೈಲಿನಲ್ಲಿ ಲ್ಯಾಪ್ಟಾಪ್, ಚಿನ್ನದ ಸರ ಕಳವು...
08-10-26 10:59 am