ಬ್ರೇಕಿಂಗ್ ನ್ಯೂಸ್
23-08-26 05:18 pm HK News Staffer ಕರಾವಳಿ
ಪುತ್ತೂರು, ಆ.23: ಪುತ್ತೂರು ದರ್ಭೆಯಲ್ಲಿ ಜೆರಾಕ್ಸ್ ಅಂಗಡಿಯಲ್ಲಿ ಲ್ಯಾಮಿನೇಶನ್ ಗೆ ಕೊಟ್ಟಿದ್ದ ದಾಖಲೆಯೊಂದು ತಾಂತ್ರಿಕ ದೋಷದಿಂದ ಸುಟ್ಟು ಹೋಯ್ತು ಎನ್ನುವ ಕಾರಣಕ್ಕೆ ಶುರುವಾದ ಗಲಾಟೆ ಹಿಂದು- ಮುಸ್ಲಿಂ ಕೋಮು ವೈಷಮ್ಯಕ್ಕೆ ನಾಂದಿ ಹಾಡಿದೆ. ಅಂಗಡಿ ಮಾಲಕರು ಹಿಂದು, ಗ್ರಾಹಕ ಮುಸ್ಲಿಂ ಎನ್ನುವ ನೆಲೆಯಲ್ಲಿ ಎರಡೂ ಕೋಮಿನ ಯುವಕರು ಸ್ಥಳದಲ್ಲಿ ಸೇರಿ ಹೊಯ್ ಕೈ ನಡೆಸಿದ್ದಲ್ಲದೆ, ಪರಸ್ಪರ ಘರ್ಷಣೆ ನಡೆಸಿದ್ದಾರೆ. ಘಟನೆ ಸಂಬಂಧಿಸಿ ಪುತ್ತೂರು ನಗರ ಠಾಣೆ ಪೊಲೀಸರು ಅಂಗಡಿ ಮಾಲಕಿ, ಗ್ರಾಹಕ ಮತ್ತು ಸ್ಥಳದಲ್ಲಿ ಗಲಾಟೆ ನಡೆಸಿದವರ ವಿರುದ್ಧ ಪ್ರತ್ಯೇಕ ಮೂರು ಎಫ್ಐಆರ್ ದಾಖಲಿಸಿದ್ದಾರೆ. ಅಲ್ಲದೆ, ಸ್ಥಳದಲ್ಲಿನ ವಿಡಿಯೋ, ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ತನಿಖೆ ಕೈಗೊಂಡಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ನಾನಾ ರೀತಿಯ ವದಂತಿ, ದ್ವೇಷದ ಪೋಸ್ಟ್ ಗಳು ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ದ.ಕ. ಎಸ್ಪಿ ಅರುಣ್ ಸ್ಪಷ್ಟನೆ ನೀಡಿದ್ದಾರೆ. ಜೆರಾಕ್ಸ್ ಅಂಗಡಿಯಲ್ಲಿದ್ದ ಲ್ಯಾಮಿಲೇಶನ್ ಯಂತ್ರದಲ್ಲಾದ ತಾಂತ್ರಿಕ ಸಮಸ್ಯೆಯಿಂದಾಗಿ ದಾಖಲೆಯೊಂದು ಹಾನಿಗೊಳಗಾದ ಘಟನೆ ಉಲ್ಬಣಗೊಂಡು, ಆಬಳಿಕ ಸದ್ರಿ ಘಟನೆಗೆ ಕೋಮು ಬಣ್ಣ ನೀಡಲಾಗುತ್ತಿದೆ. ಪ್ರಕರಣದ ತನಿಖೆಯು ಸಂಪೂರ್ಣವಾಗಿ ಸಾಕ್ಷ್ಯಾಧಾರಗಳು ಮತ್ತು ಕಾನೂನಿನ ಪ್ರಕಾರ ಪಾರದರ್ಶಕವಾಗಿ ನಡೆಯಲಿದ್ದು, ಸಾರ್ವಜನಿಕರು ಯಾವುದೇ ವದಂತಿಗಳಿಗೆ ಕಿವಿಗೊಡದೇ ಶಾಂತಿ ಕಾಪಾಡಿಕೊಳ್ಳಬೇಕು ಎಂದು ವಿನಂತಿಸಿದ್ದಾರೆ.
ತಾಂತ್ರಿಕ ದೋಷದಿಂದ ದಾಖಲೆಯೊಂದು ಸುಟ್ಟು ಹೋದಾಗ ವಿಷಯವನ್ನು ಶಾಂತಿಯುತವಾಗಿ ಬಗೆಹರಿಸಿಕೊಳ್ಳಬಹುದಾಗಿತ್ತು ಅಥವಾ ಅಗತ್ಯವಿದ್ದಲ್ಲಿ ಪೋಲಿಸ್ ಠಾಣೆ ಇಲ್ಲವೇ ಸೂಕ್ತ ಕಾನೂನು/ಗ್ರಾಹಕ ವೇದಿಕೆಯನ್ನು ಸಂಪರ್ಕಿಸುವುದು ಸೂಕ್ತ ಕ್ರಮವಾಗಿರುತ್ತಿತ್ತು. ಆದರೆ ಗ್ರಾಹಕರು ಅಂಗಡಿಯ ಕೆಲಸಗಾರನೊಂದಿಗೆ ಆಕ್ರೋಶದಿಂದ ವರ್ತಿಸಿದ್ದಾರೆ ಎನ್ನಲಾಗಿದ್ದು, ಅಂಗಡಿ ಮಾಲೀಕರಾದ ಅಂಜನಾ ಪೈ ಎಂಬವರೂ ಕೂಡ ಗಲಾಟೆಯಲ್ಲಿ ಭಾಗಿಯಾಗಿರುವುದು ಸಿಸಿಟಿವಿಯಲ್ಲಿ ಕಂಡುಬಂದಿದೆ. ಘಟನೆಯ ಸಂದರ್ಭದಲ್ಲಿ ಸುದರ್ಶನ್ ಪೈ ಎಂಬಾತ ಮಧ್ಯಪ್ರವೇಶಿಸಿ, ಘಟನೆಯನ್ನು ವೀಡಿಯೊ ಚಿತ್ರೀಕರಿಸಲು ಯತ್ನಿಸುತ್ತಿದ್ದ ಇನ್ನೊಬ್ಬ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿರುತ್ತಾನೆ. ಲಭ್ಯವಿರುವ ವೀಡಿಯೊ ದೃಶ್ಯಾವಳಿಗಳು ಘಟನೆಯಲ್ಲಿ ಭಾಗಿಯಾದ ವ್ಯಕ್ತಿಗಳ ಬಗ್ಗೆ ಸ್ಪಷ್ಟ ಸಾಕ್ಷ್ಯಾಧಾರವನ್ನು ಒದಗಿಸುತ್ತವೆ.
ಸುದರ್ಶನ್ ಪೈ ಅವರನ್ನು ಪೋಲಿಸ್ ವಶಕ್ಕೆ ಪಡೆದ ನಂತರವೂ ಕೆಲವು ವ್ಯಕ್ತಿಗಳು ಅತಿರೇಕದಿಂದ ವರ್ತಿಸಿದ್ದು, ಆ ಪೈಕಿ ನೌಶಾದ್ ಎಂಬಾತನು ಪೋಲಿಸ್ ವಾಹನದೊಳಗೆ ಇಣುಕಿ ಏನೋ ಕೃತ್ಯವೆಸಗಿರುವುದು ಕಂಡುಬಂದಿದ್ದು, ಆ ವೇಳೆ ಸದ್ರಿ ಇಲಾಖಾ ವಾಹನದಲ್ಲಿ ಕುಳಿತಿದ್ದ ಸುದರ್ಶನ್ ಪೈರವರ ತಂದೆಯವರನ್ನೂ ವಿಚಾರಣೆ ನಡೆಸುವ ಮುಲಕ ಹಾಗೂ ಇತರ ಲಭ್ಯವಿರುವ ಸಾಕ್ಷ್ಯಾಧಾರಗಳಿಂದ ಸ್ಪಷ್ಟ ಚಿತ್ರಣ ಸಿಗಲಿದೆ. ಅದರ ಆಧಾರದಲ್ಲಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಪಿ ತಿಳಿಸಿದ್ದಾರೆ.




ಸುದರ್ಶನ್ ಪೈ ವಿರುದ್ಧ ಈಗಾಗಲೇ ಕೊಲೆ ಯತ್ನ ಮತ್ತು ಡ್ರಗ್ಸ್ ದಂಧೆಗೆ ಸಂಬಂಧಿಸಿದ ಹಳೆಯ ಕ್ರಿಮಿನಲ್ ಪ್ರಕರಣಗಳಿದ್ದು, ನೌಶಾದ್ ವಿರುದ್ಧವೂ ರಸ್ತೆ ಜಗಳದಲ್ಲಿ ಹಲ್ಲೆ ನಡೆಸಿದ ಹಳೆಯ ಪ್ರಕರಣವಿರುತ್ತದೆ. ಸದಾಶಿವ ಪೈ ವಿರುದ್ಧವೂ ರಸ್ತೆ ಜಗಳದಲ್ಲಿ ಹಲ್ಲೆ ನಡೆಸಿದ ಹಳೆಯ ಪ್ರಕರಣವಿರುತ್ತದೆ. ಇವರನ್ನು ಹೊರತುಪಡಿಸಿ ಗಲಾಟೆಯ ವೇಳೆ ಅಂಗಡಿಯ ಮುಂದೆ ನೆರೆದಿದ್ದ ಇತರ ಇಬ್ಬರು ವ್ಯಕ್ತಿಗಳ ಮೇಲೆಯೂ ತಲಾ ಒಂದೊಂದು ಹಳೆಯ ಪ್ರಕರಣಗಳಿರುತ್ತದೆ. ಪ್ರಸ್ತುತ ಪ್ರಕರಣದಲ್ಲಿ ಪೋಲಿಸರು ಭಾವನಾತ್ಮಕವಾಗಿ, ಸಾರ್ವಜನಿಕ ಒತ್ತಡ ಅಥವಾ ಸಾಮಾಜಿಕ ಮಾಧ್ಯಮಗಳಲ್ಲಿ ತೋರಿಸಲಾಗುವ ದೃಷ್ಟಿಕೋನದ ಆಧಾರದಲ್ಲಿ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ. ಘಟನೆಗೆ ಸಂಬಂಧಿಸಿದ ಸಾಕ್ಷ್ಯಾಧಾರಗಳು, ನೈಜ ಸತ್ಯಾಂಶಗಳ ಆಧಾರದಲ್ಲಿ ಮತ್ತು ಕಾನೂನಿನಲ್ಲಿ ಅನ್ವಯವಾಗುವ ನಿಬಂಧನೆಗಳ ಆಧಾರದಲ್ಲೇ ಕಾರ್ಯ ನಿರ್ವಹಿಸಬೇಕಾಗುತ್ತದೆ.
ಇದೇ ವೇಳೆ ಆರೋಪಿಗಳೆಂದು ಗುರುತಿಸಲ್ಪಟ್ಟ ನೌಶಾದ್, ನಿಯಾಜ್, ಅಂಜನಾ ಪೈ, ಸದಾಶಿವ ಪೈ ಮತ್ತು ಇತರರ ಬಂಧನಕ್ಕೆ ಒತ್ತಾಯಿಸುತ್ತಿರುವ ಕುರಿತಾಗಿ ಪ್ರತಿಕ್ರಿಯಿಸಿರುವ ಎಸ್ಪಿ ಅರುಣ್, ಯಾವುದೇ ವ್ಯಕ್ತಿ ಅಪರಾಧ ಎಸಗಿರುವುದು ಕಂಡುಬಂದಾಗ, ಆತನ ಧರ್ಮ, ಸಮುದಾಯ ಅಥವಾ ಸಾಮಾಜಿಕ ಗುರುತನ್ನು ಲೆಕ್ಕಿಸದೆ ಪೋಲಿಸರು ಅಂತಹ ವ್ಯಕ್ತಿಯ ವಿರುದ್ಧ ಕಾನೂನು ಕ್ರಮ ಜರುಗಿಸಲಿದ್ದು, ಬಂಧನ ಮತ್ತು ಇತರ ಕಾನೂನು ಕ್ರಮಗಳು ಘಟನೆಯ ಸತ್ಯಾಸತ್ಯತೆ, ಸಾಕ್ಷ್ಯಾಧಾರಗಳು ಮತ್ತು ಕಾನೂನಿನ ಅಗತ್ಯತೆಗಳನ್ನು ಆಧರಿಸಿರುತ್ತದೆ. ಸಾರ್ವಜನಿಕರ ಅಥವಾ ಕೋಮು ಒತ್ತಡಕ್ಕೆ ಮಣಿದು ಯಾರನ್ನೂ ಬಂಧಿಸಲು ಸಾಧ್ಯವಿರುವುದಿಲ್ಲ. ಪ್ರಸ್ತುತ ನಡೆಯುತ್ತಿರುವ ತನಿಖೆಯ ಬಗ್ಗೆ ಯಾವುದೇ ಸಂದೇಹಗಳಿದ್ದಲ್ಲಿ ಅಂತಹವರು ತಮ್ಮಲ್ಲಿರುವ ಸತ್ಯಾಂಶಗಳೊಂದಿಗೆ ಬಂದು ಚರ್ಚಿಸಲು ಮುಕ್ತ ಅವಕಾಶವಿದೆ. ಯಾವುದೇ ಗೊಂದಲಗಳನ್ನು ನಿವಾರಿಸಲು ಎಲ್ಲಾ ಸತ್ಯಾಂಶಗಳನ್ನು ಮತ್ತು ಸಾಕ್ಷ್ಯಾಧಾರಗಳನ್ನು ಎಲ್ಲರ ಮುಂದೆ ಇಡಲು ಸಿದ್ಧವಿರುತ್ತೇವೆ. ಘಟನೆಯನ್ನು ಕೋಮು ವೈಷಮ್ಯದಿಂದ ಬಿಂಬಿಸಿ, ಸಮುದಾಯಗಳ ನಡುವೆ ದ್ವೇಷ ಸೃಷ್ಟಿಸಲು ಕೆಲವರು ಯತ್ನಿಸುತ್ತಿರುವುದು ಕಂಡುಬರುತ್ತಿದ್ದು, ಸಾರ್ವಜನಿಕರು ಯಾವುದೇ ವದಂತಿಗಳ ನೈಜತೆಯನ್ನು ಪರಿಶೀಲಿಸದೇ, ಕೇವಲ ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರವಾಗುವ ಪ್ರಚೋದನಕಾರಿ ಅಥವಾ ದಾರಿತಪ್ಪಿಸುವ ಹೇಳಿಕೆಗಳಿಗೆ ಮಹತ್ವ ಕೊಡಬಾರದಾಗಿ ವಿನಂತಿ.
ಜಿಲ್ಲೆಯ ಸಾರ್ವಜನಿಕ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಇಂದು (ಆ.23) ಸಂಜೆ 5 ಗಂಟೆಗೆ ಪುತ್ತೂರು ಪೊಲೀಸ್ ಉಪಾಧೀಕ್ಷಕರ ಕಚೇರಿಯಲ್ಲಿ ಶಾಂತಿ ಸಭೆ ಆಯೋಜಿಸಿದ್ದು, ಪ್ರತಿಯೊಬ್ಬರೂ ಸಭೆಯಲ್ಲಿ ಭಾಗವಹಿಸಿ ತಮ್ಮ ವಿನಂತಿ ಮತ್ತು ಕಳವಳಗಳನ್ನು ಶಾಂತಿಯುತ ಹಾಗೂ ರಚನಾತ್ಮಕ ರೀತಿಯಲ್ಲಿ ವ್ಯಕ್ತಪಡಿಸುವಂತೆ ಎಸ್ಪಿ ಅರುಣ್ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 05:36 pm
HK News Staffer
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm