ಬ್ರೇಕಿಂಗ್ ನ್ಯೂಸ್
23-08-26 06:17 pm HK News Staffer ಕರಾವಳಿ
ಪುತ್ತೂರು, ಆ.23: ಯಾರು ಹಲ್ಲೆಗೊಳಗಾಗಿದ್ದಾರೆ ಅವರ ಮೇಲೆ 307 ಅಡಿ ಕೊಲೆಯತ್ನ ಕೇಸ್ ಹಾಕಿದ್ದಾರೆ. ಆದರೆ ಹಲ್ಲೆ ಮಾಡಿದವರ ಮೇಲೆ ಯಾವುದೇ ಕೇಸ್ ಹಾಕಿಲ್ಲ. ಇದು ಯಾವ ರೀತಿಯ ಕಾನೂನು. ಪೊಲೀಸ್ ಇಲಾಖೆಗೆ ಯಾರಾದ್ರೂ ಒತ್ತಡ ಹೇರಿದ್ದಾರಾ?ಇದು ಕೇವಲ ಒಂದು ಧರ್ಮದ ಆಧಾರದಲ್ಲಿ ಕೇಸ್ ದಾಖಲಿಸುವಂತಹ ಕೆಲಸ ಆಗಿದೆ ಎಂದು ಮಾಜಿ ಸಂಸದ ನಳಿನ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪುತ್ತೂರಿನ ದರ್ಬೆಯಲ್ಲಿ ನಡೆದ ಗಲಾಟೆಗೆ ಸಂಬಂಧಿಸಿ ಹೇಳಿಕೆ ನೀಡಿರುವ ಅವರು, ಹಲ್ಲೆ ಮಾಡಿದವರ ಕೇಸು ದಾಖಲಿಸದಿರಲು ಯಾರ ಒತ್ತಡ ಇದೆ ಎಂಬುದು ಸ್ಪಷ್ಟ ಆಗಬೇಕು. ನೀವೇನು ತಾಲಿಬಾನ್ ಸಂಸ್ಕೃತಿಯನ್ನ ವಿಸ್ತಾರ ಮಾಡಲು ಹೊರಟಿದ್ದೀರಾ? ಗೃಹ ಸಚಿವರು ಯಾಕೆ ಘಟನೆ ಬಗ್ಗೆ ಮಾತಾಡ್ತಿಲ್ಲ. ಯಾರದ್ದು ಸರಿ, ತಪ್ಪು ಅಂತ ಹೇಳಿಕೆಯನ್ನ ಕೊಡಲಿ. ಗೃಹ ಸಚಿವರಿಗೆ ಆರ್ ಎಸ್ ಎಸ್ ಬಗ್ಗೆ ಮಾತಾಡುವ ದಮ್ಮು ಇದೆ. ಆದ್ರೆ ಈ ಮತೀಯವಾದ, ತಾಲಿಬಾನ್ ಸಂಸ್ಕೃತಿ ವಿರುದ್ಧ ಯಾಕೆ ಮಾತಾಡ್ತಾ ಇಲ್ಲ ಎಂದು ಪ್ರಶ್ನಿಸಿದರು.
ಸಣ್ಣ ವಿಚಾರವನ್ನ ಮುಂದಿಟ್ಟುಕೊಂಡು ಅಂಗಡಿ ಮೇಲೆ ದಾಳಿ ಮಾಡಿದ್ದಾರೆ. ಮಹಿಳೆಯೊಬ್ಬರ ಮೇಲೆ ಗುಂಪು ಸೇರಿ ಹಲ್ಲೆ ಮಾಡಿರುವುದು ಖಂಡನೀಯ. ಪುತ್ತೂರಿನಲ್ಲಿ ಕಳೆದ ಕೆಲವು ತಿಂಗಳಿನಿಂದ ತಾಲಿಬಾನ್ ಸಂಸ್ಕೃತಿ ಇದೆ. ತಾಲಿಬಾನ್ ಸಂಸ್ಕ್ರತಿಯ ಹೋರಾಟಗಳು ಜಾಸ್ತಿ ಆಗ್ತಾ ಇವೆ. ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ಬಂದ ಮೇಲೆ ಈ ರೀತಿಯ ಘಟನೆಗಳು ನಡೀತಿದೆ. ಪ್ರಿಯಾಂಕ್ ಖರ್ಗೆ ಅವರು ಗೃಹ ಸಚಿವರಾದ ಮೇಲೆ ಇಂತಹ ಘಟನೆಗಳಿಗೆ ಬೆಂಗಾವಲಾಗಿ ನಿಂತಿದ್ದಾರೆ.
ಪುತ್ತೂರಿನ ಶಾಸಕ ಹಾಗೂ ಗೃಹ ಸಚಿವರು ಘಟನೆ ಬಗ್ಗೆ ಮೌನದಲ್ಲಿದ್ದಾರೆ. ಈ ಘಟನೆಯ ಹಿಂದೆ ಯಾವ ಶಕ್ತಿಗಳು ಕೈಯಾಡಿಸಿವೆ ಎಂಬ ಸಂಶಯ ಇದೆ. ಅಂಗಡಿಯಲ್ಲಿ ನಡೆದ ಘಟನೆ ಬಗ್ಗೆ ಕಾನೂನು ಅಥವಾ ಪೊಲೀಸ್ ಇಲಾಖೆ ಮುಖಾಂತರ ಬಗೆಹರಿಸಬಹುದಿತ್ತು. ಅದು ಬಿಟ್ಟು ಏಕಾಏಕಿ ಅಂಗಡಿಗೆ ನುಗ್ಗಿ ಮಹಿಳೆಯರ ಮೇಲೆ ಹಲ್ಲೆ ಮಾಡಿರುವುದು ಖಂಡನೀಯ. ಇಂತಹ ಘಟನೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿರುವುದಕ್ಕೆ ಸಾಕ್ಷಿ. ಇಲ್ಲಿ ಹೊರಗಿನಿಂದ ಬಂದು ಗಲಭೆ ಎಬ್ಬಿಸಿದ್ದಾರೆ. ಅವರ ಮೇಲೆ ಕಾನೂನು ಕ್ರಮ ಕೈಗೊಂಡಿಲ್ಲ ಯಾಕೆ ಎಂದು ನಳಿನ್ ಕುಮಾರ್ ಪ್ರಶ್ನೆ ಮಾಡಿದ್ದಾರೆ.
ಹಲ್ಲೆ ಮಾಡಿದವರ ಮೇಲೆ 307 ಕೇಸ್ ಹಾಕದೆ, ಹಲ್ಲೆಗೊಳಗಾದವರ ಮೇಲೆ ಕೇಸ್ ಹಾಕಿರೋದು ಹಾಸ್ಯಾಸ್ಪದ. ಇದು ದೇಶದಲ್ಲೇ ಮೊದಲ ಬಾರಿಗೆ ಇಂತಹ ಕಾನೂನು ಎನಿಸ್ತಿದೆ. ಎಸ್ಪಿಯವರು ಜಿಲ್ಲೆಯಲ್ಲಿ ಏನು ಮಾಡುತ್ತಿದ್ದಾರೆ. ಈ ಕೂಡಲೇ ಹಲ್ಲೆ ಮಾಡಿದವರ ಮೇಲೆ ಕೇಸ್ ದಾಖಲು ಮಾಡಬೇಕು. ಇಲ್ಲದಿದ್ದಲ್ಲಿ ಬಿಜೆಪಿ ಹೋರಾಟ ಮಾಡಲಿದೆ. ಮುಂದೆ ಆಗುಗುವ ಎಲ್ಲಾ ಘಟನೆಗಳಿಗೆ ಸರ್ಕಾರವೇ ಜವಾಬ್ದಾರಿ ಎಂದು ಎಚ್ಚರಿಕೆ ನೀಡಿದರು.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
08-10-26 08:03 pm
HK News Staffer
ಭಾರತೀಯ ಪೈಲಟ್ ಸಾಹಸಕ್ಕೆ ಅಮೆರಿಕ ಸಂಸತ್ ಗೌರವ ; 17...
07-10-26 01:10 pm
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
08-10-26 04:30 pm
HK News Staffer
Santhosh laad, Araga jnanendra ಕಾರ್ಮಿಕ ಇಲಾಖೆಯ...
08-10-26 04:27 pm
ಆಟೋದಲ್ಲಿ 48 ಗ್ರಾಂ ಚಿನ್ನ ಬಿಟ್ಟುಹೋದ ಮಹಿಳೆ ; ‘ಚಿ...
08-10-26 12:06 pm
Kural Tulu Touch, Tulu lipi: ತುಳು ಲಿಪಿಗೆ ಡಿಜಿ...
07-10-26 02:39 pm
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
08-10-26 08:44 pm
HK News Staffer
ಹೆದ್ದಾರಿ ದಾಟುತ್ತಿದ್ದ ಕುರಿ-ಮೇಕೆಗಳ ಹಿಂಡಿಗೆ ಲಾರಿ...
08-10-26 08:07 pm
Online game, Death: ಆನ್ಲೈನ್ ಗೇಮ್ಗಾಗಿ 4 ಲಕ್ಷ...
08-10-26 04:56 pm
CBI ಹೆಸರಲ್ಲಿ ಬೆದರಿಕೆ, ‘ಡಿಜಿಟಲ್ ಅರೆಸ್ಟ್’ ನಾಟಕ...
08-10-26 11:08 am
ಮಂಗಳೂರು ರೈಲಿನಲ್ಲಿ ಲ್ಯಾಪ್ಟಾಪ್, ಚಿನ್ನದ ಸರ ಕಳವು...
08-10-26 10:59 am