ಬ್ರೇಕಿಂಗ್ ನ್ಯೂಸ್
24-08-26 04:11 pm HK News Staffer ಕರಾವಳಿ
ಮಂಗಳೂರು, ಆ.24 : ರಾಜ್ಯದ ಕರಾವಳಿ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಅಡಿಕೆ ಬೆಳೆಗೆ ಬಾಧಿಸಿರುವ ಎಲೆಚುಕ್ಕಿಯಂತಹ ವಿವಿಧ ರೋಗಗಳ ನಿಯಂತ್ರಣಕ್ಕೆ ವೈಜ್ಞಾನಿಕ ಸಂಶೋಧನೆ, ಕ್ಷೇತ್ರ ಸಮೀಕ್ಷೆ ಹಾಗೂ ಸಮಗ್ರ ರೋಗ ನಿರ್ವಹಣಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರಿಗೆ ತಿಳಿಸಿದ್ದಾರೆ.
ಲೋಕಸಭೆಯಲ್ಲಿ ನಿಯಮ 377ರ ಅಡಿಯಲ್ಲಿ ಕ್ಯಾ. ಚೌಟ ಅವರು ಪ್ರಸ್ತಾಪಿಸಿರುವ ಈ ವಿಷಯಕ್ಕೆ ಉತ್ತರಿಸಿರುವ ಸಚಿವರು, ಈ ಮಾಹಿತಿ ಹಂಚಿಕೊಂಡಿದ್ದಾರೆ. ಅಡಿಕೆ ಬೆಳೆಗೆ ಬಾಧಿಸುತ್ತಿರುವ ಪ್ರಮುಖ ರೋಗಗಳ ನಿಯಂತ್ರಣಕ್ಕೆ ಕಾಸರಗೋಡಿನ ಕೇಂದ್ರ ತೋಟಗಾರಿಕಾ ಬೆಳೆಗಳ ಸಂಶೋಧನಾ ಸಂಸ್ಥೆ(ICAR-CPCRI) ಕೈಗೊಳ್ಳುತ್ತಿರುವ ವಿವಿಧ ಕ್ರಮಗಳ ಬಗ್ಗೆ ಸಚಿವರು ವಿವರಿಸಿದ್ದಾರೆ.
ಅಡಿಕೆಗೆ ಬಾಧಿಸುವ ಹಳದಿ ಎಲೆ ರೋಗ ಹಾಗೂ ಎಲೆ ಚುಕ್ಕಿ ರೋಗದ ಕುರಿತು ಸಂಶೋಧನೆ ಮತ್ತು ಕ್ಷೇತ್ರ ಮಟ್ಟದ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಬೆಳ್ತಂಗಡಿ ಹಾಗೂ ಸುಳ್ಯ ಸೇರಿದಂತೆ ಏಳು ಕ್ಲಸ್ಟರ್‌ಗಳಲ್ಲಿ ಶಿಫಾರಸು ಮಾಡಲಾದ ಸಮಗ್ರ ರೋಗ ನಿರ್ವಹಣಾ ಪದ್ಧತಿಗಳ ಕ್ಷೇತ್ರ ಪ್ರಾತ್ಯಕ್ಷಿಕೆ ನಡೆಸಲಾಗಿದ್ದು, ಅವುಗಳನ್ನು ಅಳವಡಿಸಿದ ಬಳಿಕ ಅಡಿಕೆ ತೋಟಗಳಲ್ಲಿ ರೋಗದ ತೀವ್ರತೆ ಗಮನಾರ್ಹ ಕಡಿಮೆಯಾಗಿರುವುದು ಕಂಡುಬಂದಿದೆ ಎಂದು ಸಚಿವ ಚೌಹಾಣ್ ಹೇಳಿದ್ದಾರೆ.
ಅಡಿಕೆಗೆ ಬಾಧಿಸುವ ಕೊಳೆರೋಗ ನಿಯಂತ್ರಣಕ್ಕಾಗಿ ಮುಂಗಾರು ಆರಂಭಕ್ಕೂ ಮುನ್ನ ಹಾಗೂ ಮುಂಗಾರು ಅವಧಿಯಲ್ಲಿ ಶಿಫಾರಸು ಮಾಡಲಾದ ಶಿಲೀಂಧ್ರ ನಾಶಕಗಳನ್ನು ಸೂಕ್ತ ಸಮಯದಲ್ಲಿ ಬಳಸುವ ಮುನ್ನೆಚ್ಚರಿಕಾ ಕ್ರಮಗಳನ್ನು ಅಭಿವೃದ್ಧಿಪಡಿಸಲಾಗಿದೆ. ಈ ಕ್ರಮಗಳನ್ನು ಅನುಸರಿಸಿದ ಬಳಿಕ ರೋಗದ ಪ್ರಮಾಣ ಕಡಿಮೆಯಾಗುವುದರ ಜತೆಗೆ ಅಡಿಕೆ ಇಳುವರಿಯಲ್ಲೂ ಸುಧಾರಣೆ ಕಂಡುಬಂದಿರುವ ಬಗ್ಗೆ ಕ್ಷೇತ್ರ ಅಧ್ಯಯನಗಳಿಂದ ತಿಳಿದುಬಂದಿದೆ ಎಂದು ಸಚಿವರು ತಿಳಿಸಿದ್ದಾರೆ.
ಹಳದಿ ಎಲೆ ರೋಗದ ನಿಯಂತ್ರಣ ಹಾಗೂ ಉತ್ತಮ ರೀತಿಯ ಸಸಿ ನೆಡುವ ವ್ಯವಸ್ಥೆ ಅಳವಡಿಕೆ ಸೇರಿದಂತೆ ನಾನಾ ಆಯಾಮಗಳಲ್ಲಿ ರೋಗ ನಿಯಂತ್ರಣಕ್ಕೆ ಸಂಶೋಧನೆ ನಡೆಯುತ್ತಿದೆ. ರೋಗದ ಪ್ರಮಾಣ ಕಡಿಮೆ ಇರುವ ಪ್ರದೇಶಗಳ ರೈತರ ತೋಟಗಳಲ್ಲಿ ಸಮಗ್ರ ನಿರ್ವಹಣಾ ಕ್ರಮಗಳನ್ನು ಪ್ರಾತ್ಯಕ್ಷಿಕೆಯ ಮೂಲಕ ತೋರಿಸಲಾಗುತ್ತಿದ್ದು, ಇದಕ್ಕೆ ಅಡಿಕೆ ಮತ್ತು ಸಾಂಬಾರು ಬೆಳೆಗಳ ಅಭಿವೃದ್ಧಿ ನಿರ್ದೇಶನಾಲಯದ ಸಹಕಾರವನ್ನು ಕೂಡ ಪೆಡೆದುಕೊಳ್ಳಲಾಗಿದೆ ಎಂದರು.
ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಉತ್ತರ ಕನ್ನಡ ಸೇರಿದಂತೆ ಅತಿಹೆಚ್ಚು ಅಡಿಕೆ ಬೆಳೆಯುವ ಜಿಲ್ಲೆಗಳಲ್ಲಿ ವರದಿಯಾಗಿರುವ ಎಲೆ ಚುಕ್ಕೆ ರೋಗದ ಸಮಸ್ಯೆಯ ಬಗ್ಗೆಯೂ ಕೃಷಿ ಸಚಿವಾಲಯ ಪರಿಶೀಲನೆ ನಡೆಸುತ್ತಿದೆ. 2022ರ ನವೆಂಬರ್‌ನಲ್ಲಿ ರಚಿಸಲಾಗಿದ್ದ ರಾಷ್ಟ್ರೀಯ ಅಡಿಕೆ ವೈಜ್ಞಾನಿಕ ಸಮಿತಿ ಕೂಡ ಈ ಅಡಿಕೆ ರೋಗಗಳ ಬಗ್ಗೆ ಪರಿಶೀಲಿಸಿ, ಕ್ಷೇತ್ರ ಸಮೀಕ್ಷೆಗಳು, ರೈತರು ಹಾಗೂ ಸಂಬಂಧಿತ ಪಾಲುದಾರರೊಂದಿಗೆ ಸಮಾಲೋಚನೆ ಮತ್ತು ವೈಜ್ಞಾನಿಕ ಮೌಲ್ಯಮಾಪನದ ಆಧಾರದ ಮೇಲೆ ಸಮಗ್ರ ರೋಗ ನಿರ್ವಹಣಾ ಕಾರ್ಯತಂತ್ರಗಳನ್ನು ಶಿಫಾರಸು ಮಾಡಿದೆ ಎಂದು ಕೃಷಿ ಸಚಿವ ಚೌಹಾಣ್ ಮಾಹಿತಿ ನೀಡಿದ್ದಾರೆ.
ಈ ಸಂಶೋಧನಾ ಸಂಸ್ಥೆಗಳು ಶಿಫಾರಸು ಮಾಡಿರುವ ಕ್ರಮಗಳನ್ನು ಸಮಗ್ರ ತೋಟಗಾರಿಕಾ ಅಭಿವೃದ್ಧಿ ಮಿಷನ್ (MIDH) ಅಡಿಯಲ್ಲಿ ಅಡಿಕೆ ಬೆಳೆಗೆ ರೋಗ ಬಾಧಿತ ಪ್ರದೇಶಗಳಲ್ಲಿ ಪ್ರಾತ್ಯಕ್ಷಿಕೆಯ ಮೂಲಕ ಅನುಷ್ಠಾನಗೊಳಿಸಲಾಗುತ್ತಿದೆ. ಸಚಿವಾಲಯ ಉಲ್ಲೇಖಿಸಿರುವ ಏಳು ಕ್ಲಸ್ಟರ್‌ಗಳಲ್ಲಿ ಶಿರಸಿ, ಸಿದ್ದಾಪುರ, ಬೆಳ್ತಂಗಡಿ ಹಾಗೂ ಸುಳ್ಯ ಸೇರಿದಂತೆ ವಿವಿಧ ಪ್ರದೇಶಗಳು ಒಳಗೊಂಡಿದ್ದು, ಶಿಫಾರಸು ಮಾಡಲಾದ ಕ್ರಮಗಳನ್ನು ಅಳವಡಿಸಿಕೊಂಡ ಬಳಿಕ ರೋಗದ ತೀವ್ರತೆ ಗಣನೀಯವಾಗಿ ಕಡಿಮೆಯಾಗಿರುವುದು ಕಂಡುಬಂದಿದೆ. ಎಲೆ ಚುಕ್ಕೆ ರೋಗವನ್ನು ನಿಯಂತ್ರಿಸಲು ಅಕ್ಕಪಕ್ಕದ ತೋಟಗಳಲ್ಲಿಯೂ ಶಿಫಾರಸು ಮಾಡಲಾದ ಕ್ರಮಗಳನ್ನು ಸಮನ್ವಯದಿಂದ ಅನುಸರಿಸುವ ಅಗತ್ಯವಿದೆ. ಹೀಗಾಗಿ ಸಮುದಾಯ ಆಧಾರಿತ ರೋಗ ನಿರ್ವಹಣೆ, ಕ್ಷೇತ್ರ ಪ್ರಾತ್ಯಕ್ಷಿಕೆ, ರೈತರಲ್ಲಿ ಜಾಗೃತಿ ಮೂಡಿಸುವುದು ಹಾಗೂ ವೈಜ್ಞಾನಿಕವಾದ ಕ್ರಮಗಳ ಅಳವಡಿಕೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದು ಸಚಿವರು ಸಂಸದ ಚೌಟ ಅವರ ಪ್ರಶ್ನೆಗೆ ಉತ್ತರಿಸಿದ್ದಾರೆ.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
08-10-26 08:03 pm
HK News Staffer
ಭಾರತೀಯ ಪೈಲಟ್ ಸಾಹಸಕ್ಕೆ ಅಮೆರಿಕ ಸಂಸತ್ ಗೌರವ ; 17...
07-10-26 01:10 pm
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
08-10-26 04:30 pm
HK News Staffer
Santhosh laad, Araga jnanendra ಕಾರ್ಮಿಕ ಇಲಾಖೆಯ...
08-10-26 04:27 pm
ಆಟೋದಲ್ಲಿ 48 ಗ್ರಾಂ ಚಿನ್ನ ಬಿಟ್ಟುಹೋದ ಮಹಿಳೆ ; ‘ಚಿ...
08-10-26 12:06 pm
Kural Tulu Touch, Tulu lipi: ತುಳು ಲಿಪಿಗೆ ಡಿಜಿ...
07-10-26 02:39 pm
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
08-10-26 08:44 pm
HK News Staffer
ಹೆದ್ದಾರಿ ದಾಟುತ್ತಿದ್ದ ಕುರಿ-ಮೇಕೆಗಳ ಹಿಂಡಿಗೆ ಲಾರಿ...
08-10-26 08:07 pm
Online game, Death: ಆನ್ಲೈನ್ ಗೇಮ್ಗಾಗಿ 4 ಲಕ್ಷ...
08-10-26 04:56 pm
CBI ಹೆಸರಲ್ಲಿ ಬೆದರಿಕೆ, ‘ಡಿಜಿಟಲ್ ಅರೆಸ್ಟ್’ ನಾಟಕ...
08-10-26 11:08 am
ಮಂಗಳೂರು ರೈಲಿನಲ್ಲಿ ಲ್ಯಾಪ್ಟಾಪ್, ಚಿನ್ನದ ಸರ ಕಳವು...
08-10-26 10:59 am